ಅ.೨೬ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

    ಭದ್ರಾವತಿ : ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಮತ್ತು ವಿವಿಧ ಸಂಘಟನೆಗಳ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅ.೨೬ರ ಸೋಮವಾರ ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

    ಶಾಲಾ ಶಿಕ್ಷಣ ಹಾಗು ಸಾಕ್ಷರತಾ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿರುವರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆವಹಿಸಲಿದ್ದಾರೆ. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ ಕಾರ್ಯಕ್ರಮ ಉದ್ಘಾಟಿಸುವರು.

    ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಡಿ.ಎಸ್ ಅರುಣ್, ಡಾ. ಧನಂಜಯ ಸರ್ಜಿ ಮತ್ತು ಬಲ್ಕೀಶ್ ಬಾನು, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ತಾಲೂಕು ಶಿಕ್ಷಣ ಸುಧಾರಣಾ ಸಮಿತಿ ಅಧ್ಯಕ್ಷ ಸಿ. ಜಯಪ್ಪ ಹೆಬ್ಬಳಗೆರೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಬಸವರಾಜ ಬಿ. ಆನೆಕೊಪ್ಪ, ಗ್ರಾಮಾಂತರ ಅಧ್ಯಕ್ಷ ಶಿವಕುಮಾರ್ ಆರ್. ನಾಗೋಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

    ಹೊಳೆಹೊನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧೀಕ್ಷಕ ಎಂ.ಬಿ ಉಮೇಶ್ ಉಪನ್ಯಾಸ ನೀಡಲಿದ್ದು, ಕಾರ್ಯಕ್ರಮದಲ್ಲಿ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.