ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆ ನೂತನ ಪದಾಧಿಕಾರಿಗಳ ನೇಮಕ


ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆ ಅಧ್ಯಕ್ಷ ಪ್ರವೀಣ್ ಕುಮಾರ್‌ರವರ ಸಮ್ಮುಖದಲ್ಲಿ ಜಿಲ್ಲಾ ಹಾಗು ಭದ್ರಾವತಿ ತಾಲೂಕಿನ ನಗರ, ಗ್ರಾಮಾಂತರ ಅಧ್ಯಕ್ಷರು, ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ.

ಭದ್ರಾವತಿ : ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆ ಅಧ್ಯಕ್ಷ ಪ್ರವೀಣ್ ಕುಮಾರ್‌ರವರ ಸಮ್ಮುಖದಲ್ಲಿ ಜಿಲ್ಲಾ ಹಾಗು ತಾಲೂಕಿನ ನಗರ, ಗ್ರಾಮಾಂತರ ಅಧ್ಯಕ್ಷರು, ಪದಾಧಿಕಾರಿಗಳನ್ನು ನೇಮಕಗೊಳಿಸಲಾಗಿದೆ.

    ತಾಲೂಕಿನ ನಿವಾಸಿ ಮುಕ್ತಿಯಾರ್ ಅಹಮದ್ ಅವರನ್ನು ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ, ಮಹಮದ್ ರಫೀಕ್ ಅವರನ್ನು ರಾಜ್ಯ ಅಲ್ಪಸಂಖ್ಯಾತರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ತಾಲೂಕಿನ ನಗರ ಅಧ್ಯಕ್ಷರಾಗಿ ಆರ್. ರಾಜೇಶ್ ಕುಮಾರ್, ಗ್ರಾಮಾಂತರ ಅಧ್ಯಕ್ಷರಾಗಿ ಧನಶೇಖರ್ ಹಾಗು ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಯುವ ಮುಖಂಡ ರಾಹಿಲ್ ಅವರನ್ನು ನೇಮಕಗೊಳಿಸಿ ಆದೇಶಲಾಗಿದೆ.

    ನೇಮಕ ಆದೇಶ ಪತ್ರ ವಿತರಿಸುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ಅನ್ಯಾಯ, ಅಕ್ರಮ, ಶೋಷಣೆಗಳ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸುವಂತೆ ಕರೆ ನೀಡಲಾಯಿತು.