ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಸರ್ವಸದಸ್ಯರ ಸಭೆ


ಭದ್ರಾವತಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಸರ್ವಸದಸ್ಯರ ಸಭೆ ಭಾನುವಾರ ಹಳೇನಗರದ ಪತ್ರಿಕಾಭವನದಲ್ಲಿ ನಡೆಯಿತು.

    ಜಿಲ್ಲಾ ಘಟಕದ ಅಧ್ಯಕ್ಷರಾದ ಎಚ್.ಯು ವೈದ್ಯನಾಥ್ ಸಭೆ ಉದ್ಘಾಟಿಸಿದರು. ತಾಲೂಕು ಘಟಕದ ಅಧ್ಯಕ್ಷರಾದ ಗಂಗಾನಾಯ್ಕ ಗೊಂದಿ ಅಧ್ಯಕ್ಷತೆವಹಿಸಿದ್ದರು. ಸಭೆಯಲ್ಲಿ ಸಂಘದ ಕಾರ್ಯಚಟುವಟಿಕೆಗಳು, ಸದಸ್ಯರ ಕುಂದುಕೊರತೆಗಳು ಹಾಗು ಸದಸ್ಯರ ನಡುವೆ ಪರಸ್ಪರ ಹೊಂದಾಣಿಕೆ ಕಾಯ್ದುಕೊಳ್ಳುವುದು, ಜೊತೆಗೆ ಕ್ರಿಯಾಶೀಲತೆ ಹೆಚ್ಚಿಸಿಕೊಳ್ಳುವ ಕುರಿತು ಚರ್ಚಿಸಲಾಯಿತು.

    ಸಭೆಯಲ್ಲಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆರ್.ಎಸ್ ಹಾಲಸ್ವಾಮಿ, ಉಪಾಧ್ಯಕ್ಷ, ತಾಲೂಕು ಉಸ್ತುವಾರಿ ದೇಶಾದ್ರಿ ಹೊಸ್ಮನೆ ಉಪಸ್ಥಿತರಿದ್ದರು. 

    ಸಂಘದ ಖಜಾಂಚಿ ಫಿಲೋಮಿನಾ .ಆರ್ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಅನಂತಕುಮಾರ್ ವಾರ್ಷಿಕ ವರದಿ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಬಸವರಾಜ್ ಸಭೆಯ ನಡಾವಳಿಗಳನ್ನು ವಾಚಿಸಿ ನಿರೂಪಿಸಿದರು. ಹಿರಿಯ ಪತ್ರಕರ್ತರಾದ ಕೆ.ಎನ್ ರವೀಂದ್ರನಾಥ್(ಬ್ರದರ್‍ಸ್) ಪ್ರಾರ್ಥಿಸಿದರು. ಕಾರ್ಯದರ್ಶಿ ಅನಂತಕುಮಾರ್ ವಂದಿಸಿದರು.