ಸೆ.೪ರಂದು ೨೫ನೇ ವರ್ಷದ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ : ಅನ್ನಸಂತರ್ಪಣೆ

ಭಕ್ತರಿಗೆ ಊಟ ಬಡಿಸಿದ ಶಾಸಕ ಬಿ.ಕೆ ಸಂಗಮೇಶ್ವರ್, ಬಿ.ಎಸ್ ಗಣೇಶ್



ಭದ್ರಾವತಿ ನಗರದ ಡಾ. ರಾಜಕುಮಾರ್ ರಸ್ತೆ(ಬಿ.ಎಚ್ ರಸ್ತೆ) ಅಂಡರ್‌ಬ್ರಿಡ್ಜ್ ಬಳಿ, ಅಂಬೇಡ್ಕರ್ ನಗರದಲ್ಲಿ ಪ್ರತಿಷ್ಠಾಪಿಸಲಾಗಿರುವ ೨೫ನೇ ವರ್ಷದ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ ಭಾನುವಾರ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಭಕ್ತರಿಗೆ ಊಟ ಬಡಿಸುವ ಜೊತೆಗೆ ತಾವು ಪಾಯಸ ಸೇವಿಸಿ ತೆರಳಿದರು.

    ಭದ್ರಾವತಿ : ನಗರದ ಡಾ. ರಾಜಕುಮಾರ್ ರಸ್ತೆ(ಬಿ.ಎಚ್ ರಸ್ತೆ) ಅಂಡರ್‌ಬ್ರಿಡ್ಜ್ ಬಳಿ, ಅಂಬೇಡ್ಕರ್ ನಗರದಲ್ಲಿ ಪ್ರತಿಷ್ಠಾಪಿಸಲಾಗಿರುವ ೨೫ನೇ ವರ್ಷದ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ ಭಾನುವಾರ ನಡೆಯಲಿದೆ.

    ವಿವಿಧ ಕಲಾ ತಂಡಗಳೊಂದಿಗೆ ಬೆಳಿಗ್ಗೆ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯಲಿದ್ದು, ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಲಿದೆ. ಸಂಜೆ ಭದ್ರಾ ನದಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ.

    ವಿಸರ್ಜನೆ ಹಿನ್ನಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಶನಿವಾರ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಷೇಕ್ ಗೌಡ, ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ಆನಂದ್ ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



    ಸಹಸ್ರರಾರು ಭಕ್ತರು ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡಿದ್ದರು. ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಬಿ.ಎಸ್ ಗಣೇಶ್‌ರವರು ಭಕ್ತರಿಗೆ ಊಟ ಬಡಿಸುವ ಜೊತೆಗೆ ತಾವು ಸಹ ಪಾಯಸ ಸೇವಿಸಿ ಸಮಿತಿಯವರಿಂದ ಗೌರವ ಸಮರ್ಪಣೆ ಸ್ವೀಕರಿಸಿ ತೆರಳಿದರು.