ಅ.28ರಂದು ವಿದ್ಯುತ್ ವ್ಯತ್ಯಯ



    ಭದ್ರಾವತಿ : ಮೆಸ್ಕಾಂ ನಗರ ಉಪವಿಭಾಗದ ಘಟಕ-೩ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.28ರ ಬುಧವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ಮೂಲೆಕಟ್ಟೆ, ಬೊಮ್ಮನಕಟ್ಟೆ, ತಿಮ್ಲಾಪುರ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.