ನಾಡಹಬ್ಬ ದಸರಾ ಗೊಂಬೆ ಪ್ರದರ್ಶನ ವೀಕ್ಷಣೆ : ಇತರರು ರೂಢಿಸಿಕೊಳ್ಳಿ
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ
ಭದ್ರಾವತಿ ನಗರದ ನ್ಯೂಕಾಲೋನಿ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಸಮೀಪ ವಿಐಎಸ್ಎಲ್ ಕಾರ್ಖಾನೆ ವಸತಿ ಗೃಹದಲ್ಲಿ ವಾಸವಾಗಿರುವ ಕುಸುಮ-ಉಮೇಶ್ ದಂಪತಿ ನಾಡಹಬ್ಬ ದಸರಾ ಅಂಗವಾಗಿ ಏರ್ಪಡಿಸಿರುವ ಗೊಂಬೆ ಪ್ರದರ್ಶನ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ವೀಕ್ಷಿಸಿದರು.
ಭದ್ರಾವತಿ : ನಗರದ ನ್ಯೂಕಾಲೋನಿ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಸಮೀಪ ವಿಐಎಸ್ಎಲ್ ಕಾರ್ಖಾನೆ ವಸತಿ ಗೃಹದಲ್ಲಿ ವಾಸವಾಗಿರುವ ಕುಸುಮ-ಉಮೇಶ್ ದಂಪತಿ ಕಳೆದ ಸುಮಾರು ೨೫ ವರ್ಷಗಳಿಂದ ನಾಡಹಬ್ಬ ದಸರಾ ಆಚರಣೆಯಲ್ಲಿ ಗೊಂಬೆ ಪ್ರದರ್ಶನ ಏರ್ಪಡಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಕಾರ್ಯವಾಗಿದ್ದು, ಈ ದಂಪತಿ ಇತರರಿಗೆ ಮಾದರಿಯಾಗಿದ್ದಾರೆಂದು ಜಾತ್ಯಾತೀತ ಜನಾತದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಮೆಚ್ಚುಗೆ ವ್ಯಕ್ತಪಡಿಸಿದರು.
ಅವರು ಶುಕ್ರವಾರ ಸಂಜೆ ಗೊಂಬೆ ಪ್ರದರ್ಶನ ವೀಕ್ಷಿಸಿ. ಪ್ರಸ್ತುತ ದಿನಗಳಲ್ಲಿ ಈ ರೀತಿಯ ಗೊಂಬೆ ಪ್ರದರ್ಶನ ಕೈಗೊಳ್ಳುವವರು ಅತಿವಿರಳ. ಈ ಕಾರ್ಯಕ್ಕೆ ಪ್ರತಿಯೊಬ್ಬರು ಹೆಚ್ಚಿನ ಸಹಕಾರ ನೀಡಬೇಕು. ಅಲ್ಲದೆ ಗೊಂಬೆ ಪ್ರದರ್ಶನ ವೀಕ್ಸಿಸುವ ಜೊತೆಗೆ ತಾವು ಸಹ ನಾಡಹಬ್ಬ ದಸರಾ ಆಚರಣೆಯಲ್ಲಿ ಗೊಂಬೆ ಪ್ರದರ್ಶನ ಏರ್ಪಡಿಸಲು ಪ್ರಯತ್ನಿಸಬೇಕೆಂದರು.
ಖಾಸಗಿ ಕಂಪನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಮೇಶ್ ಹಾಗು ನ್ಯಾಯಾಂಗ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕುಸುಮ ದಂಪತಿ ತಮ್ಮ ಪೂರ್ವಿಕರು ಆಚರಿಸಿಕೊಂಡು ಬಂದಿರುವ ಸಂಪ್ರದಾಯ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಪ್ರತಿ ದಿನ ನಗರದ ವಿವಿಧೆಡೆಗಳಿಂದ ಗೊಂಬೆ ಪ್ರದರ್ಶನ ವೀಕ್ಷಿಸಲು ಆಸಕ್ತರು ಇವರ ನಿವಾಸಕ್ಕೆ ಆಗಮಿಸುತ್ತಾರೆ.
ಹಿರಿಯ ಕಾರ್ಮಿಕ ಮುಖಂಡರಾದ ಎಸ್.ಎನ್ ಬಾಲಕೃಷ್ಣ ದಂಪತಿ, ಮಹಿಳಾ ಪ್ರಮುಖರಾದ ಪುಷ್ಪಾವತಿ, ಭಾಗ್ಯಮ್ಮ ಮಂಜುನಾಥ್ ಹಾಗು ಕುಸುಮ-ಉಮೇಶ್ ದಂಪತಿ ಮತ್ತು ಕುಟುಂಬಸ್ಥರು
