ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಕೆಳಗೆ ಬಿದ್ದು ಗಾಯಗೊಂಡ ಯುವಕ
ಗಾಯಗೊಂಡಿರುವ ಯುವಕ
ಭದ್ರಾವತಿ: ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋಗಿ ಯುವಕನೊಬ್ಬ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ರಾತ್ರಿ ನಡೆದಿದೆ.
ತಾಲೂಕಿನ ಅರಬಿಳಚಿ ಕ್ಯಾಂಪ್ ನಿವಾಸಿ ಗೋವಿಂದಸ್ವಾಮಿ ಅವರ ಪುತ್ರ ಅಪ್ಪು (32) ಗಾಯಗೊಂಡ ಯುವಕ ಎಂದು ತಿಳಿದುಬಂದಿದೆ. ತಾಳಗುಪ್ಪದಿಂದ ಹೊರಟು ಬೆಂಗಳೂರು ಮಾರ್ಗವಾಗಿ ಮೈಸೂರಿಗೆ ತೆರಳುವ 16228 ಸಂಖ್ಯೆಯ ರೈಲಿಗೆ ಭಾನುವಾರ ರಾತ್ರಿ 11.30 ರ ಸಮಯದಲ್ಲಿ ರೈಲ್ವೆ ನಿಲ್ದಾಣದಲ್ಲಿ ಹತ್ತಲು ಅಪ್ಪು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ರೈಲು ಚಲಿಸುತ್ತಿದ್ದ ಪರಿಣಾಮ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾನೆ.
