ಭಾಗಗೀತೆ ಸ್ಪರ್ಧೆ : ಜಂಬೂಸ್ವಾಮಿಗೆ ತೃತೀಯ ಬಹುಮಾನ
ಜಂಬೂಸ್ವಾಮಿ
ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಸಾಗರ ತಾಲೂಕು ಶಾಖೆಯ 25 ವರ್ಷದ ಸಂಭ್ರಮಾಚರಣೆ ಹಾಗು ಹಿರಿಯ ನಾಗರಕರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಕ್ರೀಡಾಕೂಟದ ಸಾಂಸ್ಕೃತಿಕ ವಿಭಾಗದ ಭಾವಗೀತೆ ಸ್ಪರ್ಧೆಯಲ್ಲಿ ನಗರದ ಹಿರಿಯ ನಾಗರಿಕ ಜಂಬೂಸ್ವಾಮಿ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಮೈಸೂರು ಕಾಗದ ಕಾರ್ಖಾನೆ ನಿವೃತ್ತ ನೌಕರ, ಜಂಜೂಸ್ವಾಮಿಯವರು ದೇಶಭಕ್ತಿ ಗೀತೆ, ಭಾವಗೀತೆ ಮತ್ತು ಜಾನಪದ ಗೀತೆ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಗಾಯಕರಾಗಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಮತ್ತು ನಿವೃತ್ತ ನೌಕರರ ಸಂಘದ ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
