ಬನ್ನಿ ಮುಡಿಯುವ ಮೂಲಕ, ರಾವಣ ಸಂಹಾರದೊಂದಿಗೆ ನಾಡಹಬ್ಬಕ್ಕೆ ತೆರೆ

ಭದ್ರಾವತಿ ನಗರಸಭೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ 11 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ನಾಡಹಬ್ಬ ದಸರಾ ಆಚರಣೆ ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ರವರು ಬನ್ನಿ ಮುಡಿಯುವ ಮೂಲಕ, ರಾವಣ ಸಂಹಾರದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

    ಭದ್ರಾವತಿ : ನಗರಸಭೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ 11 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ನಾಡಹಬ್ಬ ದಸರಾ ಆಚರಣೆ ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ರವರು ಬನ್ನಿ ಮುಡಿಯುವ ಮೂಲಕ, ರಾವಣ ಸಂಹಾರದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

    ನಾಡಹಬ್ಬ ದಸರಾ ಆಚರಣೆ ಹಿನ್ನಲೆಯಲ್ಲಿ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬನ್ನಿ ಮುಡಿಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ತಾಯಿ ಚಾಮುಂಡೇಶ್ವರಿ ಕ್ಷೇತ್ರದ ಜನತೆ ಒಳಿತು ಮಾಡಲಿ ಎಂದು ಪ್ರಾರ್ಥಿಸಿದರು.

    ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಪಿ ಪ್ರೇಮಾ ಬದರಿನಾರಾಯಣ, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್, ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ಶ್ರೀ ರಂಗನಾಥ ಶರ್ಮರವರ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು.

    ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಪ್ರದೀಪ್ ದೇವಗಿರಿ ಧಾರ್ಮಿಕ ಆಚರಣೆಗಳ ಅಂತಿಮ ಹಂತದಲ್ಲಿ ಬನ್ನಿಮುಡಿಯುವ ಮೂಲಕ ಆಚರಣೆಗೆ ತೆರೆ ಎಳೆದರು. ಕೊನೆಯಲ್ಲಿ ಯುವ ಕಲಾವಿದ, ಜಿ.ಎಂ ಆಟ್ಸ್ ಜಿ. ರಂಜಿತ್ ನಿರ್ಮಾಣಗೊಳಿಸಿದ್ದ ರಾವಣನ ಕಲಾಕೃತಿ ಸಿಡಿಮದ್ದುಗಳ ಮೂಲಕ ಸಂಹಾರಗೊಳಿಸಲಾಯಿತು.