ಗಾಂಧಿ ಜಯಂತಿ : ಸರ್ಕಾರಿ ಶಾಲೆ ಮಕ್ಕಳಿಗೆ ಬರವಣಿಗೆ ಪುಸ್ತಕ, ಲೇಖನ ಸಾಮಗ್ರಿ ವಿತರಣೆ


ಭದ್ರಾವತಿ ನಗರದ ಕಡದಕಟ್ಟೆ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮತ್ತು ಶ್ರೀ ಕಾಲಭೈರವೇಶ್ವರ ಟ್ರಸ್ಟ್ ಮಹಿಳಾ ಘಟಕ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ನ್ಯೂಟೌನ್ ಜಯಶ್ರೀ ವೃತ್ತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬರವಣಿಗೆ ಪುಸ್ತಕ ಸೇರಿದಂತೆ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.

    ಭದ್ರಾವತಿ: ನಗರದ ಕಡದಕಟ್ಟೆ ಶ್ರೀ ಕಾಲಭೈರವೇಶ್ವರ ಚಾರಿಟಬಲ್ ಟ್ರಸ್ಟ್ ಮತ್ತು ಶ್ರೀ ಕಾಲಭೈರವೇಶ್ವರ ಟ್ರಸ್ಟ್ ಮಹಿಳಾ ಘಟಕ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ನ್ಯೂಟೌನ್ ಜಯಶ್ರೀ ವೃತ್ತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬರವಣಿಗೆ ಪುಸ್ತಕ ಸೇರಿದಂತೆ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.

    ಈ ಬಾರಿ ವಿಶೇಷವಾಗಿ ಗಾಂಧಿ ಜಯಂತಿ ಆಚರಿಸುವ ಮೂಲಕ ಸರ್ಕಾರಿ ಶಾಲೆ ಮಕ್ಕಳಿಗೆ ಬರವಣಿಗೆ ಪುಸ್ತಕ(ನೋಟ್ ಬುಕ್), ಪೆನ್ನು, ಪೆನ್ಸಿಲ್, ರಬ್ಬರ್ ಸೇರಿದಂತೆ ಇನ್ನಿತರ ಲೇಖನ ಸಾಮಗ್ರಿಗಳನ್ನು ವಿತರಿಸಿ ಬಡ ಮಕ್ಕಳ ಶಿಕ್ಷಣಕ್ಕೆ ಟ್ರಸ್ಟ್ ನೆರವಾಗಿದೆ.

    ಶ್ರೀ ಕಾಲಭೈರವೇಶ್ವರ ಟ್ರಸ್ಟ್ ಮಹಿಳಾ ಘಟಕದ ಗೌರವಾಧ್ಯಕ್ಷೆ ಕಮಲಾರಾಜು, ಅಧ್ಯಕ್ಷೆ ರಮಾ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಗೀತಾ ಶಿವಕುಮಾರ್, ಕಾರ್ಯದರ್ಶಿ ಪ್ರೇಮಾ ಶ್ರೀನಿವಾಸ್, ಖಜಾಂಚಿ ಪುಷ್ಪ ಹರಿಕೃಷ್ಣ, ಟ್ರಸ್ಟ್ ನಿರ್ದೇಶಕಿ ದೇವಿಕಾ ನಾಗರಾಜ್, ಶಶಿಕಲಾ ವಿಶ್ವನಾಥ್, ಶಾಲೆಯ ಮುಖ್ಯ ಶಿಕ್ಷಕಿ ಜಾನಕಮ್ಮ, ಶಿಕ್ಷಕಿ ಹೇಮಾವತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.