ಸೇತುವೆ ಕೆಳಭಾಗ ಭದ್ರಾ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ


ಭದ್ರಾವತಿ :  ನಗರದ ಮಾಧವಾಚಾರ್ ವೃತ್ತದ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ವಿಶ್ವಕರ್ಮ ಶಿಲ್ಪಿ ಅಮರಶಿಲ್ಪಿ ಜಕಣಚಾರಿ ಸೇತುವೆ ಕೆಳಭಾಗ ಭದ್ರಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.

      ನದಿಯಲ್ಲಿ ಬೆಳಿಗ್ಗೆ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಹಳೆನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಹಿನ್ನಲೆಯಲ್ಲಿ ನದಿ ದಂಡೆಯಲ್ಲಿಯೂ ಪರಿಶೀಲನೆ ನಡೆಸಿರುವ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಮುಂದಿನ ಕ್ರಮ ಕೈಗೊಂಡಿದ್ದಾರೆ.

    ಮೃತ ವ್ಯಕ್ತಿಯ ಗುರುತು ತಿಳಿದಿರುವ ವರು ಅಥವಾ ಅವರ ಕುಟುಂಬದ ಬಗ್ಗೆ ಮಾಹಿತಿ ಹೊಂದಿರುವವರು ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.