11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವ್ಯಕ್ತಿ ಸೆರೆ


ಕಳೆದ 11 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಭದ್ರಾವತಿ: ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ನಡೆದಿದೆ.

    ಭದ್ರಾವತಿ: ಕಳೆದ 11 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯೋರ್ವನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ನಡೆದಿದೆ.

    ಗಿರೀಶ್ ನಾಯ್ಕ್ ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕರ್ನಾಟಕ ಎಕ್ಸೈಸ್ ಆಕ್ಟ್ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದ. ಆದರೆ 11 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಪ್ರಕರಣವನ್ನು ಎಲ್’ಪಿಆರ್ ಎಂದು ಘೋಷಿಸಲಾಗಿತ್ತು. ಈತನ ವಿರುದ್ದ ಎಸಿಜೆ ಮತ್ತು ಜೆಎಂಎಫ್’ಸಿ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿತ್ತು. ಗ್ರಾಮಾಂತರ ಪೊಲೀಸ್ ಠಾಣೆ ನಿರೀಕ್ಷಕರ ನೇತೃತ್ವದ ತಂಡ ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದೆ.