ನ.12ರಂದು ಜೆ.ಎಚ್ ಪಟೇಲ್ 96ನೇ ಜನ್ಮದಿನಾಚರಣೆ


    ಭದ್ರಾವತಿ: ಜೆ.ಎಚ್ ಪಟೇಲ್ ಅಭಿಮಾನಿ ಬಳಗದಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ನಾಯಕ ಜೆ.ಎಚ್ ಪಟೇಲ್ ರವರ 96ನೇ ಜನ್ಮದಿನಾಚರಣೆ ನ.12ರ ಗುರುವಾರ ಹಮ್ಮಿಕೊಳ್ಳಲಾಗಿದೆ

    ನ್ಯೂಟೌನ್ ಶ್ರೀ ಕೃಷ್ಣ ದೇವಸ್ಥಾನ (ಮೆಸ್ ಹೋಟೆಲ್ ವೃತ್ತ ) ಸಮೀಪದ ಸುರಕ್ಷಾ ಜೀವನ ಸೇವಾ ಟ್ರಸ್ಟ್ ನಲ್ಲಿ ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಅಭಿಮಾನಿ ಬಳಗದ ಮುಖ್ಯಸ್ಥ ಶಶಿಕುಮಾರ್ ಎಸ್ ಗೌಡ ಅಧ್ಯಕ್ಷತೆ ವಹಿಸಲಿದ್ದು, ಉದ್ಯಮಿ ಬಿ.ಕೆ.ಜಗನ್ನಾಥ್ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವವರು. ಸುರಕ್ಷಾ ಜೀವನ ಟ್ರಸ್ಟ್ ಅಧ್ಯಕ್ಷೆ ಡಾ. ಜ್ಯೋತಿ ಸೋಮಶೇಖರ್ ಹಾಗೂ ಕರ್ನಾಟಕ ಮಾನವ ಹಕ್ಕುಗಳ ಮತ್ತು ಭ್ರಷ್ಟಾಚಾರ ನಿಯಂತ್ರಣ ಮಂಡಳಿ ಸಂಸ್ಥಾಪಕ ಅಧ್ಯಕ್ಷ ಡಿ.ಜೆ ಪ್ರಭು ಹಾಗು ಯುವ ಮುಖಂಡ ಬಾಬು ದೀಪಕ್ ಕುಮಾರ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.     ಜೆ.ಎಚ್ ಪಟೇಲ್ ಅಭಿಮಾನಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಮಹಿಳೆಯರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಸೇರಿದಂತೆ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಭಿಮಾನಿ ಬಳಗ ಕೋರಿದೆ.