ನವಲೆ ಬಸಾಪುರ ಗ್ರಾಮ ಠಾಣಾ ಜಾಗ : ನಿವೇಶನರಹಿತ 19 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ
ಭದ್ರಾವತಿ ತಾಲೂಕಿನ ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಲೆ ಬಸಾಪುರ ಗ್ರಾಮದಲ್ಲಿನ ಗ್ರಾಮ ಠಾಣಾ ಜಾಗದಲ್ಲಿ ನಿವೇಶನರಹಿತ 19 ಕುಟುಂಬಗಳಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹಕ್ಕು ಪತ್ರ ವಿತರಿಸಿದರು.
ಭದ್ರಾವತಿ : ತಾಲೂಕಿನ ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಲೆ ಬಸಾಪುರ ಗ್ರಾಮದಲ್ಲಿನ ಗ್ರಾಮ ಠಾಣಾ ಜಾಗದಲ್ಲಿ ನಿವೇಶನರಹಿತ 19 ಕುಟುಂಬಗಳಿಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹಕ್ಕು ಪತ್ರ ವಿತರಿಸಿದರು.
ಗ್ರಾಮ ಠಾಣಾ ಜಾಗದಲ್ಲಿ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ನಿವೇಶನರಹಿತ ಅರ್ಹ ಕುಟುಂಬಗಳಿಗೆ ನಿವೇಶನ ನೀಡುವಂತೆ ಆಗ್ರಹಿಸಿ 2018ರಿಂದ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿತ್ತು. ಈ ಸಂಬಂಧ ಗ್ರಾಮ ಪಂಚಾಯಿತಿಯಲ್ಲಿ ಹಲವಾರ ಬಾರಿ ಗ್ರಾಮ ಸಭೆ ನಡೆಸಿ ತೀರ್ಮಾನ ಸಹ ಕೈಗೊಳ್ಳಲಾಗಿತ್ತು. ಇದೀಗ 19 ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗಿದ್ದು, ಇನ್ನೂ ಕೆಲವು ಕುಟುಂಬಗಳಿಗೆ ಹಕ್ಕು ಪತ್ರ ನೀಡಬೇಕಾಗಿದೆ.
ತಹಸೀಲ್ದಾರ್ ಗ್ರೇಡ್-2 ಸುರೇಶ್, ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಆಶಾಲತಾ, ನಗರಸಭೆ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ತಾಲೂಕು ಶಿಕ್ಷಣ ಸುಧಾರಣ ಸಮಿತಿ ಅಧ್ಯಕ್ಷ ಸಿ. ಜಯಪ್ಪ ಹೆಬ್ಬಳಗೆರೆ, ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ ಸುರೇಶ್, ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಪ್ರಮುಖರಾದ ವೆಂಕಟೇಶ್, ಎಸ್.ಕೆ ಮೋಹನ್, ವಿ. ವಿನೋದ್, ರಾಜೇಂದ್ರ, ಟಿ. ಪೃಥ್ವಿರಾಜ್, ಎಚ್. ರವಿಕುಮಾರ್, ಆಂಜನಪ್ಪ, ಎಂ. ಮಹಾದೇವಪ್ಪ, ಸತೀಶ್, ಹರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
