ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಸಂಚಾರಿ ಪೀಠ ಸ್ಥಾಪಿಸಿ
ಭದ್ರಾವತಿಯಲ್ಲಿ ತಾಲೂಕು ವಕೀಲರ ಸಂಘದಿಂದ ಧರಣಿ ಸತ್ಯಾಗ್ರಹ
ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಸಂಚಾರಿ ಪೀಠ ಶಿವಮೊಗ್ಗದಲ್ಲಿ ಸ್ಥಾಪಿಸಬೇಕೆಂದು ಒತ್ತಾಯಿಸಿ ಭದ್ರಾವತಿಯಲ್ಲಿ ತಾಲೂಕು ವಕೀಲರ ಸಂಘದ ವತಿಯಿಂದ ನಗರದ ಜೆಎಂಎಫ್ ಸಿ ನ್ಯಾಯಾಲಯ ಆವರಣದಲ್ಲಿ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಭದ್ರಾವತಿ: ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಸಂಚಾರಿ ಪೀಠ ಶಿವಮೊಗ್ಗದಲ್ಲಿ ಸ್ಥಾಪಿಸಬೇಕೆಂದು ಒತ್ತಾಯಿಸಿ ತಾಲೂಕು ವಕೀಲರ ಸಂಘದಿಂದ ನಗರದ ಜೆಎಂಎಫ್ ಸಿ ನ್ಯಾಯಾಲಯ ಆವರಣದಲ್ಲಿ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಧರಣಿ ಸತ್ಯಾಗ್ರಹ ಉದ್ದೇಶಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಬಿ.ಸಿ ಕೇಶವಮೂರ್ತಿ, ಶಿವಮೊಗ್ಗ ನಗರದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳಿವೆ. ಅಲ್ಲದೇ ಶಿವಮೊಗ್ಗ ನಗರಕ್ಕೆ ರಸ್ತೆ, ರೈಲು ಹಾಗೂ ವಿಮಾನ ಸಂಪರ್ಕ ಕೂಡ ಇದೆ. ಶಿವಮೊಗ್ಗ ಸಂಚಾರಿ ಪೀಠದ ವ್ಯಾಪ್ತಿಯಲ್ಲಿ ನೆರೆಯ ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳನ್ನು ಸೇರಿಸಿದರೆ, ಈ ಜಿಲ್ಲೆಗಳ ಕಕ್ಷಿದಾರರಿಗೂ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ವಕೀಲರು ಮಂಗಳೂರಿನಲ್ಲಿ ಪ್ರಸ್ತಾವಿತ ಹೈಕೋರ್ಟ್ ಸಂಚಾರಿ ಪೀಠಕ್ಕೆ ಶಿವಮೊಗ್ಗ ಜಿಲ್ಲೆಯನ್ನು ಸೇರಿಸಬಾರದು ಎಂದು ಘೋಷಣೆ ಕೂಗಿದರು. ಮಂಗಳೂರಿನ ಪ್ರಸ್ತಾವಿತ ಪೀಠಕ್ಕೆ ಶಿವಮೊಗ್ಗ ಜಿಲ್ಲೆಯನ್ನು ಸೇರಿಸಿದರೆ, ಈ ಭಾಗದ ಕಕ್ಷಿದಾರರಿಗೆ ಅನಾನುಕೂಲವಾಗಲಿದೆ ಎಂದು ವಕೀಲರು ಅಸಮಾಧಾನ ವ್ಯಕ್ತಪಡಿಸಿದರು.
ಸಂಘದ ಉಪಾಧ್ಯಕ್ಷ ರಾಜು, ಖಜಾಂಚಿ ಶ್ವೇತಾ, ಕಾರ್ಯದರ್ಶಿ ಎಂ. ಶಿವಕುಮಾರ್, ಹಿರಿಯ ವಕೀಲರಾದ ಬಿ.ಆರ್ ಪ್ರಭುದೇವ್, ಜಯರಾಂ, ಮಂಗೋಟೆ ರುದ್ರೇಶ್, ಆರ್.ಎಸ್ ಶೋಭಾ, ವಿಮಲಾ, ಶ್ರೀಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಬಹುತೇಕ ವಕೀಲರು ಪಾಲ್ಗೊಂಡಿದ್ದರು.

.jpeg)