ನ.೫ರಂದು ವಿದ್ಯುತ್ ವ್ಯತ್ಯಯ
ಭದ್ರಾವತಿ : ಮೆಸ್ಕಾಂ ನಗರ ಉಪವಿಭಾಗ ಘಟಕ-೨ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.೫ರ ಗುರುವಾರ ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಚನ್ನಗಿರಿ ರಸ್ತೆ, ಹೊಳೆಹೊನ್ನೂರು ರಸ್ತೆ, ಇಂದಿರಾ ನಗರ, ಅನ್ವರ್ ಕಾಲೋನಿ, ದುರ್ಗಿನಗರ, ಅಮೀರ್ಜಾನ್ ಕಾಲೋನಿ, ಮೊಮಿನ್ ಮೊಹಲ್ಲಾ, ಖಲಂದರ್ ನಗರ ಮತ್ತು ಜಟ್ಪಟ್ ನಗರ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
