ನ.೧೪ರಂದು ೧೧ನೇ ಕನ್ನಡ ಸಾಹಿತ್ಯ ಸಮ್ಮೇಳನ : ಎಚ್. ತಿಮ್ಮಪ್ಪ

ಭದ್ರಾವತಿ ಹಳೇನಗರದ ಪತ್ರಿಕಾ ಭವನದಲ್ಲಿ ಬುಧವಾರ ತಾಲೂಕು ೧೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

    ಭದ್ರಾವತಿ : ತಾಲೂಕು ೧೧ನೇ ಕನ್ನಡ ಸಾಹಿತ್ಯ ಸಮ್ಮೇಳನ ನ.೧೪ರ ಶನಿವಾರ ನ್ಯೂಟೌನ್, ಮಹಾತ್ಮಗಾಂಧಿ ಉದ್ಯಾನವನದ ಮುಂಭಾಗ, ಶ್ರೀ ರಾಮ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್. ತಿಮ್ಮಪ್ಪ ತಿಳಿಸಿದರು.

    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ ೯ ಗಂಟೆಗೆ ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಪ್ರದೀಪ್ ದೇವಗಿರಿಯವರು ರಾಷ್ಟ್ರಧ್ವಜರೋಹಣ ಹಾಗು ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ನಾಡಧ್ವಜಾರೋಹಣ ಮತ್ತು ಪರಿಷತ್ ಅಧ್ಯಕ್ಷ ಎಚ್. ತಿಮ್ಮಪ್ಪ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ೯.೩೦ಕ್ಕೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ನಾಡದೇವಿ ಭುವನೇಶ್ವರಿ ಹಾಗು ಸರ್ವಾಧ್ಯಕ್ಷ ಮೆರವಣಿಗೆಗೆ ನಗರಸಭೆ ಪೌರಾಯುಕ್ತ ಕೆ.ಎನ್ ಹೇಮಂತ್ ಚಾಲನೆ ನೀಡಲಿದ್ದಾರೆ ಎಂದರು.

    ೧೦ ಗಂಟೆಗೆ ವೇದಿಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಮಾರಂಭ ಉದ್ಘಾಟಿಸಲಿದ್ದಾರೆ. ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಆಶಯ ನುಡಿಗಳನ್ನಾಡಲಿದ್ದು, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಹೊಸಳ್ಳಿ ದಾಳೇಗೌಡ ಉಪಸ್ಥಿತರಿರುವರು. ವೈದ್ಯ ಸಾಹಿತಿ ಡಾ. ಕೃಷ್ಣ ಎಸ್. ಭಟ್  ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡಲಿದ್ದು, ಬೆಂಗಳೂರಿನ ಸಾಹಿತಿ ಡಾ. ಗಜಾನನ ಶರ್ಮ, ಸಂಸದ ಬಿ.ವೈ ರಾಘವೇಂದ್ರ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಪೂರ್‍ಯಾನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಬಲ್ಕೀಶ್ ಬಾನು, ಡಿ.ಎಸ್ ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಸದಸ್ಯ ಎಸ್. ರುದ್ರೇಗೌಡ, ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ  ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರುವವರು ಎಂದರು.

    ಮಧ್ಯಾಹ್ನ ೧೨ ಗಂಟೆಗೆ ಸಾಹಿತಿ ಡಿ. ನಾಗೋಜಿರಾವ್‌ರವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ೧.೩೦ಕ್ಕೆ ಮನೋವೈದ್ಯ ಡಾ. ಹರೀಶ್ ದೇಲಂತಬೆಟ್ಟುರವರ ಅಧ್ಯಕ್ಷತೆಯಲ್ಲಿ ಗೋಷ್ಠಿ-೨ ಸಮ್ಮೇಳನಾಧ್ಯಕ್ಷರ ಬದುಕು ಬರಹ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕಗೊಂದಿಯವರ ಅಧ್ಯಕ್ಷತೆಯಲ್ಲಿ ಗೋಷ್ಠಿ-೩ ರೈತ-ಕಾರ್ಮಿಕ-ದಲಿತ ಚಳುವಳಿಯ ಅವಲೋಕನ ನಡೆಯಲಿದೆ. ಸಂಜೆ ೪.೩೦ಕ್ಕೆ ಸಮಾರಂಭ ಸಮಾರಂಭ ನಡೆಯಲಿದ್ದು, ಎಮರಿಟಸ್ ಪ್ರೊಫೆಸರ್ ಡಾ. ವಿಜಯಾದೇವಿ ಮತ್ತು ದೀಪ್ತಿ ಶ್ರೀಷರ್ಹ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಲೇಖಕರು, ಕವಿಗಳು, ಸಾಹಿತಿಗಳು, ಕಲಾವಿದರು, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು, ಕನ್ನಡಾಭಿಮಾನಿಗಳು ಸೇರಿದಂತೆ ಸಮಸ್ತ ನಾಗರೀಕರು ಸಮ್ಮೇಳನಕ್ಕೆ ಹೆಚ್ಚಿನ ಸಹಕಾರ ನೀಡುವ ಮೂಲಕ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು. 

    ಪತ್ರಿಕಾಗೋಷ್ಠಿಯಲ್ಲಿ ಪರಿಷತ್ ಕಾರ್ಯದರ್ಶಿ ಡಿ. ನಾಗೋಜಿರಾವ್, ಸಂಘಟನಾ ಕಾರ್ಯದರ್ಶಿ ಬಿ. ಕಮಲಾಕರ, ಕೋಶಾಧ್ಯಕ್ಷ ಬಿ.ಎಚ್ ಪ್ರಶಾಂತ್, ಹೇಮಾವತಿ ವಿಶ್ವನಾಥ್, ಜೆ.ಎನ್ ಬಸವರಾಜಯ್ಯ, ಆಶಾ ಪುಟ್ಟಸ್ವಾಮಿ, ನಾಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.