ಸೈಂಟ್ ಚಾರ್ಲ್ಸ್‌ಯಲ್ಲಿ ಕುಟುಂಭೋತ್ಸವದೊಂದಿಗೆ ಮಕ್ಕಳ ದಿನಾಚರಣೆ

ಭದ್ರಾವತಿ ನ್ಯೂಟೌನ್ ಸೈಂಟ್ ಚಾರ್ಲ್ಸ್ ಶಾಲೆಯಲ್ಲಿ  ವಿಶೇಷವಾಗಿ ಕುಟುಂಭೋತ್ಸವದೊಂದಿಗೆ ಮಕ್ಕಳ ದಿನಾಚರಣೆ ಆಚರಿಸಲಾಯಿತು.

    ಭದ್ರಾವತಿ : ನಗರದ ನ್ಯೂಟೌನ್ ಸೈಂಟ್ ಚಾರ್ಲ್ಸ್ ಶಾಲೆಯಲ್ಲಿ  ವಿಶೇಷವಾಗಿ ಕುಟುಂಭೋತ್ಸವದೊಂದಿಗೆ ಮಕ್ಕಳ ದಿನಾಚರಣೆ ಆಚರಿಸಲಾಯಿತು.

    . ಮಕ್ಕಳ ಜೊತೆಯಲ್ಲಿ ಪೋಷಕರು ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ, ವಿವಿಧ ರೀತಿಯ ಕ್ರಿಯಾತ್ಮಕ ನೃತ್ಯ ಪ್ರದರ್ಶನದ ಮೂಲಕ ಗಮನ ಸೆಳೆದರು.  ತಂದೆ-ತಾಯಿಯರು ತಮ್ಮ ತಮ್ಮ ಮಕ್ಕಳೊಂದಿಗೆ ವಿವಿಧ ಬಗೆಯ ವೇಷಭೂಷಣಗಳನ್ನು ಧರಿಸಿ, ನೃತ್ಯ ಪ್ರದರ್ಶನ ನೀಡಿದ್ದು ವಿಶೇಷವಾಗಿತ್ತು.

    ತರಗತಿಗಳ ಪ್ರಕಾರ ಮೂರು ಗುಂಪುಗಳನ್ನಾಗಿ ವಿಂಗಡಿಸಿ, ಸ್ಪರ್ಧೆಗಳಲ್ಲಿ ವಿಜೇತರಾದ ಆಯಾ ವಯೋಮಾನದ ಮಕ್ಕಳಿಗೆ ಬಹುಮಾನ ಮತ್ತು ಪಾರಿತೋಷಕಗಳನ್ನು ವಿತರಿಸಲಾಯಿತು. ನೃತ್ಯ ಕಲಾವಿದರು ತೀರ್ಪುಗಾರರಾಗಿ ಆಗಮಿಸಿದ್ದರು. 

    ಶಾಲೆಯ ಮುಖ್ಯೋಪಾಧ್ಯಾಯನಿ ಸಿಸ್ಟರ್ ಲವೀನ, ಶಿಕ್ಷಕರು, ಮಕ್ಕಳು, ಪೋಷಕರು ಮತ್ತು ಸಂಬಂಧಿಕರು ಪಾಲ್ಗೊಂಡಿದ್ದರು.