ಸ್ವಾಗತ್ ಯುವಕರ ಸಂಘದ ೨೯ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ
ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಲಿಂಗಾಯತರ ಬೀದಿಯಲ್ಲಿ ಸ್ವಾಗತ್ ಯುವಕರ ಸಂಘದಿಂದ ಪ್ರತಿಷ್ಠಾಪಿಸಲಾಗಿದ್ದ ೨೯ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ ಶನಿವಾರ ಅದ್ದೂರಿಯಾಗಿ ಜರುಗಿತು.
ಭದ್ರಾವತಿ : ನಗರಸಭೆ ವ್ಯಾಪ್ತಿಯ ಜನ್ನಾಪುರ ಲಿಂಗಾಯತರ ಬೀದಿಯಲ್ಲಿ ಸ್ವಾಗತ್ ಯುವಕರ ಸಂಘದಿಂದ ಪ್ರತಿಷ್ಠಾಪಿಸಲಾಗಿದ್ದ ೨೯ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ ಶನಿವಾರ ಅದ್ದೂರಿಯಾಗಿ ಜರುಗಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಆಕರ್ಷಕವಾದ ಬೃಹತ್ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಹೋಮ-ಹವನ ಸೇರಿದಂತೆ ಪೂಜಾ ಕೈಂಕರ್ಯಗಳು, ಅನ್ನಸಂತರ್ಪಣೆ ಸಹ ಏರ್ಪಡಿಸಲಾಗಿತ್ತು. ಜನ್ನಾಪುರದ ಪ್ರಮುಖ ರಸ್ತೆಗಳಲ್ಲಿ ಡೊಳ್ಳು ಕುಣಿತ ಸೇರಿದಂತೆ ಇನ್ನಿತರ ಕಲಾತಂಡಗಳೊಂದಿಗೆ ವಿಸರ್ಜನಾಪೂರ್ವ ರಾಜಬೀದಿ ಉತ್ಸವ ಮೆರವಣಿಗೆ ನಡೆಸಲಾಯಿತು. ಯುವಕರು ಡಿಜೆ ಅಬ್ಬರದ ಸದ್ದಿಗೆ ಕುಣಿದು ಸಂಭ್ರಮಿಸಿದರು.
ಮನೆ ಹಾಗು ಅಂಗಡಿ ಮುಂಗಟ್ಟುಗಳ ಮುಂಭಾಗ ಭಕ್ತರು ಸ್ವಚ್ಛಗೊಳಿಸಿ ನೀರು ಹಾಕಿ ರಂಗೋಲಿ ಬಿಡಿಸಿ ವಿನಾಯಕ ಮೂರ್ತಿಯನ್ನು ಸ್ವಾಗತಿಸುವ ಮೂಲಕ ಭಕ್ತಿ ಮೆರೆದರು. ಅಲ್ಲದೆ ಕೆಲವು ಭಕ್ತರು ವಿನಾಯಕ ಮೂರ್ತಿ ಕ್ರೇನ್ ಬಳಸಿ ಬೃಹತ್ ಹೂವಿನ ಮಾಲೆಗಳನ್ನು ಸಮರ್ಪಿಸಿದರು. ಮೆರವಣಿಗೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲಾ ವಯೋಮಾನದವರು ಸಹ ಪಾಲ್ಗೊಂಡು ಗಮನ ಸೆಳೆದರು. ಭಾನುವಾರ ಬೆಳಗಿನ ಜಾವ ಮೂರ್ತಿ ಭದ್ರಾ ನದಿಯಲ್ಲಿ ವಿಸರ್ಜನೆಗೊಳ್ಳಲಿದೆ.
