ನ.೨೩ರಂದು ಕನ್ನಡ ರಾಜ್ಯೋತ್ಸವ


    ಭದ್ರಾವತಿ : ಹಳೇನಗರ ಬಸವೇಶ್ವರ ವೃತ್ತದ ಮಹಿಳಾ ಸೇವಾ ಸಮಾಜದಲ್ಲಿ ನ.೨೩ರ ಸೋಮವಾರ ಸಂಜೆ ೪ ಗಂಟೆಗೆ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥರಾವ್ ಅಧ್ಯಕ್ಷತೆವಹಿಸಲಿದ್ದಾರೆ.

    ನಿವೃತ್ತ ಕನ್ನಡ ಉಪನ್ಯಾಸಕಿ ಎಂ. ಅನುಸೂಯ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ವಿಶ್ವದಾಖಲೆ ನಿರ್ಮಿಸಿ ಗಮನ ಸೆಳೆದಿರುವ ಸುಮಾರು ೮ ತಿಂಗಳ ಮಗು ವಿಥುಷಾಳಿಗೆ ಅಭಿನಂದನೆ ನಡೆಯಲಿದೆ. ಮಹಿಳಾ ಸೇವಾ ಸಮಾಜದ ಗೌರವಾಧ್ಯಕ್ಷೆ ಗೌರಮ್ಮ ಶಂಕರಯ್ಯ ಮತ್ತು ಖಜಾಂಚಿ ಜಯಂತಿ ನಾಗರಾಜ್ ಶೇಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.