ತಾ.ಪಂ. ಸದಸ್ಯ ಕೆ. ಮಂಜುನಾಥ್ ಸಂಸದರ ಸಮ್ಮುಖದಲ್ಲಿ ಮಾತೃಪಕ್ಷಕ್ಕೆ ಸೇರ್ಪಡೆ

ಭದ್ರಾವತಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಮಂಜುನಾಥ್ ಪುನಃ ಮಾತೃ ಪಕ್ಷ ಭಾರತೀಯ ಜನತಾ ಪಕ್ಷಕ್ಕೆ ಸಂಸದ ಬಿ.ವೈ ರಾಘವೇಂದ್ರರವರ ಸಮ್ಮುಖದಲ್ಲಿ ಗುರುವಾರ ಸೇರ್ಪಡೆಗೊಂಡಿದ್ದಾರೆ.

ಭದ್ರಾವತಿ : ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ. ಮಂಜುನಾಥ್ ಪುನಃ ಮಾತೃ ಪಕ್ಷ ಭಾರತೀಯ ಜನತಾ ಪಕ್ಷಕ್ಕೆ ಸಂಸದ ಬಿ.ವೈ ರಾಘವೇಂದ್ರರವರ ಸಮ್ಮುಖದಲ್ಲಿ ಗುರುವಾರ ಸೇರ್ಪಡೆಗೊಂಡಿದ್ದಾರೆ.

    ಬಿಜೆಪಿ ತೊರೆದು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಮಂಜುನಾಥ್ ಆರಂಭದಲ್ಲಿ ಕಾಂಗ್ರೆಸ್ ಪಕ್ಷದ ಜೊತೆಗೆ ಗುರುತಿಸಿಕೊಂಡಿದ್ದರೂ ಸಹ ನಂತರ ಪಕ್ಷದ ಮುಖಂಡರು, ಕಾರ್ಯಕರ್ತರ ಜೊತೆ ಅಂತರ ಕಾಯ್ದುಕೊಂಡಿದ್ದರು. ಈ ನಡುವೆ ಕೆಲವು ದಿನಗಳ ಹಿಂದೆ ಇವರನ್ನು ಮಲೆನಾಡು ಅಭಿವೃದ್ಧಿ ಪ್ರಾಧಿಕಾರಕ್ಕೆ ನಾಮನಿರ್ದೇಶನಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು.

    ಸಂಸದ ಬಿ.ವೈ ರಾಘವೇಂದ್ರರವರು ಮಂಜುನಾಥ್‌ರವರ ನಿವಾಸಕ್ಕೆ ತೆರಳಿ ಅವರನ್ನು ಪುನಃ ಮಾತೃಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಜೆಡಿಎಸ್ ನಗರ ಅಧ್ಯಕ್ಷ ಆರ್. ಕರುಣಾಮೂರ್ತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಧರ್ಮೇಗೌಡ, ರಮೇಶ್, ಉದ್ಯಮಿ ಶಿವಕುಮಾರ್, ಸಾಗರ್, ಮೋಹನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.