ಜೆ.ಎಸ್ ನಾಗಭೂಷಣ್ ನಿಧನ
ಜೆ.ಎಸ್ ನಾಗಭೂಷಣ್
ಭದ್ರಾವತಿ: ನಗರದ ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ನೌಕರ, ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಮಾಜಿ ಅಧ್ಯಕ್ಷ ಜೆ.ಎಸ್ ನಾಗಭೂಷಣ್(೮೩) ನಿಧನ ಹೊಂದಿದರು.
ಇವರಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ವಿಐಎಸ್‌ಎಲ್ ಕಾರ್ಖಾನೆ ಕಾರ್ಮಿಕರ ಸಂಘದ ಖಜಾಂಚಿಯಾಗಿ, ನಂತರ ಸುಮಾರು ೨೦ ವರ್ಷಗಳ ಕಾಲ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಕಾರ್ಯವಾಹರಾಗಿ, ತರುಣ ಭಾರತಿ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ ವಿವಿಧ ಸಂಘಟನೆಗಳ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿದ್ದರು.
ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜೆ ರಾಮಲಿಂಗಯ್ಯ, ಕಾರ್ಮಿಕ ಸಂಘದ ಮಾಜಿ ಅಧ್ಯಕ್ಷ ಎಸ್.ಎನ್ ಬಾಲಕೃಷ್ಣ, ನರಸಿಂಹಾಚಾರ್, ವಿಶ್ವ ಹಿಂದೂ ಪರಿಷತ್ ಪ್ರಮುಖರಾದ ಹಾ. ಹಾರಾಮಪ್ಪ, ಆರ್‌ಎಸ್‌ಎಸ್ ಹಿರಿಯ ಕಾರ್ಯಕರ್ತರಾದ ಮಧುಕರ ಕಾನಿಟ್ಕರ್, ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರ, ತರುಣ ಭಾರತಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.
