ಕರವೇ ಜಿಲ್ಲಾ ಮಹಿಳಾ ಘಟಕದ ಸಭೆ : ವೇದಿಕೆ ಬಲಡಿಸಲು ಕರೆ
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ಸಭೆ ಭದ್ರಾವತಿ ನಗರದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಮಹಿಳಾ ಘಟಕದ ನೂತನ ರಾಜ್ಯ ಕಾರ್ಯದರ್ಶಿ ಡಾ. ಜ್ಯೋತಿ ಸೋಮೇಶೇಖರ್ರವರ ಅಧ್ಯಕ್ಷತೆವಹಿಸಿ ಮಾತನಾಡಿದರು.
ಭದ್ರಾವತಿ : ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ಸಭೆ ನಗರದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಮಹಿಳಾ ಘಟಕದ ನೂತನ ರಾಜ್ಯ ಕಾರ್ಯದರ್ಶಿ ಡಾ. ಜ್ಯೋತಿ ಸೋಮೇಶೇಖರ್ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರ ಮಾರ್ಗದಲ್ಲಿ ನಡೆದ ಸಭೆಯಲ್ಲಿ ನಾಡಿನಾದ್ಯಂತ ೭೧ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಗೆ ಸಂತಸ ವ್ಯಕ್ತಪಡಿಸುವ ಮೂಲಕ ವೇದಿಕೆಯು ನೆಲ, ಜಲ ಮತ್ತು ಭಾಷೆಗಾಗಿ ತನ್ನ ಹೋರಾಟ ಮುಂದುವರೆಸಲಿದೆ. ಪ್ರತಿಯೊಬ್ಬರು ತಮ್ಮ ಜವಾಬ್ದಾರಿಗಳನ್ನು ಅರಿತು ಕನ್ನಡನಾಡಿನ ಏಳಿಗೆಗಾಗಿ ಶ್ರಮಿಸಬೇಕೆಂದು ಕರೆ ನೀಡಲಾಯಿತು.
ವೇದಿಕೆಯ ನೂತನ ಪದಾಧಿಕಾರಿಗಳಾಗಿ ನೇಮಕಗೊಂಡಿರುವವರು ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವಂತೆ ಕೋರಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಉಪಾಧ್ಯಕ್ಷೆ ಮಹೇಶ್ವರಿ, ಶಿವಮೊಗ್ಗ ತಾಲೂಕು ಅಧ್ಯಕ್ಷೆ ಜಾನವಿ, ಭದ್ರಾವತಿ ತಾಲೂಕು ಅಧ್ಯಕ್ಷೆ ಶಕುಂತಲಾ ಪ್ರದೀಪ್, ಸೊರಬ ತಾಲೂಕು ಅಧ್ಯಕ್ಷೆ ಭಾರತಿ, ಸಾಗರ ತಾಲೂಕು ಅಧ್ಯಕ್ಷೆ ಶಾಮಲಾ ಮತ್ತು ನೂತನವಾಗಿ ಆಯ್ಕೆಯಾದ ಭದ್ರಾವತಿ ನಗರ ಘಟಕದ ಅಧ್ಯಕ್ಷೆ ಪಾರ್ವತಿ ಮತ್ತು ಶಿವಮೊಗ್ಗ ನಗರ ಘಟಕದ ಅಧ್ಯಕ್ಷೆ ಕೆ.ಸಿ ಗೀತಾ ಹಾಗು ವೇದಿಕೆಯ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.
