ಪೋಸ್ಟ್‌ಗಳು

ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಕಂದಾಯ ಇಲಾಖೆಗೆ ಬಹುಮಾನ

ಇಮೇಜ್
ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕಂದಾಯ ಇಲಾಖೆಯ ಕ್ರೀಡಾಕೂಟದಲ್ಲಿ ಭದ್ರಾವತಿ ತಾಲೂಕಿನ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡು ವಿವಿಧ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.       ಭದ್ರಾವತಿ: ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕಂದಾಯ ಇಲಾಖೆಯ ಕ್ರೀಡಾಕೂಟದಲ್ಲಿ ತಾಲೂಕಿನ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡು ವಿವಿಧ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.       ಕ್ರೀಡಾಕೂಟದಲ್ಲಿ ಮಹಿಳೆಯರ ಕ್ರಿಕೆಟ್ ತಂಡ ಪ್ರಥಮ ಹಾಗೂ ಕಬಡ್ಡಿ ದ್ವಿತೀಯ ಸ್ಥಾನ ಮತ್ತು ಪುರುಷರ ತಂಡ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ತಾಲೂಕು ದಂಡಾಧಿಕಾರಿ ಪರುಸಪ್ಪ ಕುರುಬರ ಅವರ ಮಾರ್ಗದರ್ಶನದೊಂದಿಗೆ ಪ್ರತಿ ದಿನ ಸಾಕಷ್ಟು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡರವರ ನೇತೃತ್ವದಲ್ಲಿ ನಗರದ ಹೊಸ ಸೇತುವೆ ರಸ್ತೆಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆವರಣದಲ್ಲಿ ತರಬೇತಿ ನೀಡಲಾಗಿತ್ತು.        ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಕಾರ್ಯದರ್ಶಿ ಎಸ್.ಕೆ ಮೋಹನ್, ಖ...

ಜನವಸತಿ ಪ್ರದೇಶಕ್ಕೆ ನುಗ್ಗಿ ಸಾಕುನಾಯಿ ಬಲಿ ಪಡೆದ ಚಿರತೆ

ಇಮೇಜ್
ಜನವಸತಿ ಪ್ರದೇಶಕ್ಕೆ ನುಗ್ಗಿದ್ದ ಚಿರತೆ ಮನೆಯ ಅಂಗಳದಲ್ಲಿ ಮಲಗಿದ್ದ ಸಾಕುನಾಯಿ  ಕೊಂದು ಹಾಕಿರುವ ಘಟನೆ  ಸೋಮವಾರ ರಾತ್ರಿ ಭದ್ರಾವತಿ ತಾಲೂಕಿನ ಗೊಂದಿ ಗ್ರಾಮದಲ್ಲಿ ನಡೆದಿದೆ.      ಭದ್ರಾವತಿ: ಜನವಸತಿ ಪ್ರದೇಶಕ್ಕೆ ನುಗ್ಗಿದ್ದ ಚಿರತೆ ಮನೆಯ ಅಂಗಳದಲ್ಲಿ ಮಲಗಿದ್ದ ಸಾಕುನಾಯಿ  ಕೊಂದು ಹಾಕಿರುವ ಘಟನೆ  ಸೋಮವಾರ ರಾತ್ರಿ ತಾಲೂಕಿನ ಗೊಂದಿ ಗ್ರಾಮದಲ್ಲಿ ನಡೆದಿದೆ.      ಗೊಂದಿ ಗ್ರಾಮದಲ್ಲಿ ವಾಸವಾಗಿರುವ ಪತ್ರಕರ್ತರಾದ ಗಂಗಾನಾಯ್ಕ ಗೊಂದಿರವರ ತೋಟದ ಮನೆಯ ಅಂಗಳದಲ್ಲಿ ಮಲಗಿದ್ದ ಜರ್ಮನ್ ಶಫರ್ಡ್ ತಳಿಯ ಸಾಕುನಾಯಿ ಮೇಲೆ ರಾತ್ರಿ ಚಿರತೆ ದಾಳಿ ನಡೆಸಿ ಕೊಂದು ಹಾಕಿದ್ದು, ಅಲ್ಲದೆ ನಾಯಿ ಮೃತದೇಹ ತೋಟದಲ್ಲಿ ದೂರಕ್ಕೆ ಎಳೆದುಕೊಂಡು ಹೋಗಿ ತಿಂದು ಹಾಕಿದೆ.       ಈ ಸಂಬಂಧ ಗಂಗಾನಾಯ್ಕರವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಉಪವಲಯ ಅರಣ್ಯಾಧಿಕಾರಿ ಹನುಮಂತನಾಯ್ಕ, ಬೀಟ್ ಫಾರೆಸ್ಟರ್ ಪಿ. ರಾಬರ್ಟ್ ಮತ್ತು ಅರಣ್ಯ ರಕ್ಷಕ(ಗಾರ್ಡ್) ಸಚಿನ್ ಮಾಹಿತಿ ಸಂಗ್ರಹಿಸಿ ತೆರಳಿದ್ದಾರೆ.  ಇತ್ತೀಚೆಗೆ ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಅದರಲ್ಲೂ ಜನವಸತಿ ಪ್ರದೇಶಕ್ಕೆ ಚಿರತೆ ನುಗ್ಗಿರುವ ಹಿನ್ನಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ರಾತ್ರಿ ವೇಳೆ ಗ್ರಾಮದಲ್ಲಿ ಸಂಚರಿಸಲು ಗ್ರಾಮಸ್ಥರು ಭಯಪಡುವಂತಾಗಿದೆ. ಅರಣ್ಯ ...

ಹಿರಿಯ ಕಾರ್ಮಿಕ ಮುಖಂಡ, ಶಿಕ್ಷಣ ತಜ್ಞ ಕಾಮ್ರೇಡ್ ಕಾಳೇಗೌಡ ನಿಧನ

ಇಮೇಜ್
ಕಾಮ್ರೇಡ್ ಕಾಳೇಗೌಡ       ಭದ್ರಾವತಿ : ನಗರದ ಹಿರಿಯ ಕಾರ್ಮಿಕ ಮುಖಂಡ, ಶಿಕ್ಷಣ ತಜ್ಞ ಕಾಮ್ರೇಡ್ ಕಾಳೇಗೌಡ(೭೮)ರವರು ಮಂಗಳವಾರ ರಾತ್ರಿ ನಿಧನ ಹೊಂದಿದರು.       ಇವರಿಗೆ ಪತ್ನಿ, ೪ ಗಂಡು ಮತ್ತು ೩ ಹೆಣ್ಣು ಮಕ್ಕಳಿದ್ದಾರೆ. ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಇವರು ಆರಂಭದಿಂದಲೂ ಎಐಟಿಯುಸಿ ಸಂಘಟನೆ ಮೂಲಕ ಕಾರ್ಮಿಕ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಾರ್ಮಿಕರ ಯಾವುದೇ ಹೋರಾಟವಿರಲಿ ಪಾಲ್ಗೊಂಡು ನ್ಯಾಯ ಒದಗಿಸಿಕೊಡಲು ಉತ್ಸುಕರಾಗಿದ್ದರು.       ಕಾಳೇಗೌಡರವರು ಹೋರಾಟದ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದು, ಹುತ್ತಾಕಾಲೋನಿಯಲ್ಲಿ ಸಹ್ಯಾದ್ರಿ ಎಜ್ಯುಕೇಷನ್ ಟ್ರಸ್ಟ್ ಸ್ಥಾಪಿಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿದ್ದರು.  ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಇವರ ಅಂತ್ಯಕ್ರಿಯೆ ಹುತ್ತಾಕಾಲೋನಿ ಹಿಂದೂ ರುದ್ರಭೂಮಿಯಲ್ಲಿ ಸಂಜೆ ನೆರವೇರಲಿದೆ.       ಇವರ ನಿಧನಕ್ಕೆ ಸಹ್ಯಾದ್ರಿ ಎಜ್ಯುಕೇಷನ್ ಟ್ರಸ್ಟ್ ಅಧ್ಯಕ್ಷ ದೊರೈ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ...

ಹಿರಿಯ ಮುಖಂಡ ಕರಿಯಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಇಮೇಜ್
ಕರಿಯಪ್ಪ       ಭದ್ರಾವತಿ: ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ರಾಜಕೀಯ ಬದುಕಿನ ಜೊತೆಗಾರ, ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಕರಿಯಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.       ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರರ, ಕುರುಬ ಸಮಾಜದ ಮುಖಂಡರಾದ ಕರಿಯಪ್ಪ ಎಂ.ಜೆ ಅಪ್ಪಾಜಿಯವರ ಜೊತೆಗೆ ತಮ್ಮ ರಾಜಕೀಯ ಬದುಕು ಆರಂಭಿಸಿದ್ದು, ಸುಮಾರು ೩ ದಶಕಗಳಿಗೂ ಹೆಚ್ಚು ಕಾಲದಿಂದ ಜೆಡಿಎಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಒಂದು ಬಾರಿ ನಗರಸಭೆಗೆ ಆಯ್ಕೆಯಾಗಿದ್ದಾರೆ.       ಇದೀಗ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಪತ್ರಿಕಾ ಹೇಳಿಕೆಯಲ್ಲಿ ಇವರ ಸೇರ್ಪಡೆಯನ್ನು ಸ್ವಾಗತಿಸಿದ್ದಾರೆ. 

ಪೇಪರ್‌ಟೌನ್ ಆಂಗ್ಲಶಾಲೆ ವಿದ್ಯಾರ್ಥಿ ಎಂ. ಉಲ್ಲಾಸ್ ರಾಜ್ಯಮಟ್ಟಕ್ಕೆ ಆಯ್ಕೆ

ಇಮೇಜ್
ಕನ್ನಡ ಪ್ರಭ, ಏಷಿಯಾ ನೆಟ್ ಸುವರ್ಣ ನ್ಯೂಸ್ ವತಿಯಿಂದ `ಕರ್ನಾಟಕ ಅರಣ್ಯ ಅಥವಾ ಕರ್ನಾಟಕದ ವನ್ಯಜೀವಿ' ವಿಷಯ ಕುರಿತು ಆಯೋಜಿಸಲಾಗಿರುವ ಕರ್ನಾಟಕ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ಅಂಗವಾಗಿ ಸೋಮವಾರ ನಡೆದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆ ವಿದ್ಯಾರ್ಥಿ ಎಂ. ಉಲ್ಲಾಸ್ ತೃತೀಯ ಬಹುಮಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.       ಭದ್ರಾವತಿ : ಕನ್ನಡ ಪ್ರಭ, ಏಷಿಯಾ ನೆಟ್ ಸುವರ್ಣ ನ್ಯೂಸ್ ವತಿಯಿಂದ ಅರಣ್ಯ ಇಲಾಖೆ ಹಾಗು ಕರ್ನಾಟಕ ಚಿತ್ರ ಕಲಾ ಪರಿಷತ್ ಸಹಯೋಗದೊಂದಿಗೆ `ಕರ್ನಾಟಕ ಅರಣ್ಯ ಅಥವಾ ಕರ್ನಾಟಕದ ವನ್ಯಜೀವಿ' ವಿಷಯ ಕುರಿತು ಆಯೋಜಿಸಲಾಗಿರುವ ಕರ್ನಾಟಕ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ಅಂಗವಾಗಿ ಸೋಮವಾರ ಶಿವಮೊಗ್ಗ ಸರ್ಕಾರಿ ನೌಕರರ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕಾಗದನಗರದ ಪೇಪರ್‌ಟೌನ್ ಆಂಗ್ಲ ಶಾಲೆ ವಿದ್ಯಾರ್ಥಿ ಎಂ. ಉಲ್ಲಾಸ್ ತೃತೀಯ ಬಹುಮಾನದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.       ಜಿಲ್ಲೆಯ ವಿವಿಧ ತಾಲೂಕುಗಳಿಂದ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದ ಸುಮಾರು ೩೦ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಉಲ್ಲಾಸ್ ತಾಲೂಕು ಮಟ್ಟದಲ್ಲಿ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದರು.       ಜಿಲ್ಲಾಮಟ...

ಸಮಾಜದಲ್ಲಿ ಪತ್ರಕರ್ತರು ಸತ್ಯ, ವಿಶ್ವಾಸ, ಪ್ರಾಮಾಣಿಕತೆ ಉಳಿಸಿಕೊಳ್ಳುವ ಅಗತ್ಯವಿದೆ : ಬಿ.ಕೆ ಸಂಗಮೇಶ್ವರ್

ಇಮೇಜ್
ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶಾಸಕರಾದ ಬಿ.ಕೆ ಸಂಗಮೇಶ್ವರ್, ಶಾರದಪೂರ್‍ಯಾನಾಯ್ಕ, ಬಲ್ಕೀಶ್ ಬಾನು ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.        ಭದ್ರಾವತಿ: ಪ್ರಸ್ತುತ ಸಮಾಜದಲ್ಲಿ ಪತ್ರಕರ್ತರು, ಸತ್ಯ, ವಿಶ್ವಾಸ, ಪ್ರಾಮಾಣಿಕತೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.       ಅವರು ಭಾನುವಾರ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.       ಪತ್ರಿಕೆಗಳನ್ನು ಮುನ್ನಡೆಸಿಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ. ಈ ನಡುವೆ ಇಂದು ಸಮಾಜದಲ್ಲಿ ಪ್ರತಿಯೊಬ್ಬರು ಪತ್ರಕರ್ತರ ವಿಶ್ವಾಸಾರ್ಹತೆ ಪ್ರಶ್ನಿಸುವಂತಾಗಿದೆ. ಪತ್ರಕರ್ತರು ತಾವು ನೀಡುವ ಪತ್ರಿಕೆಗಳಲ್ಲಿ ಪ್ರಕಟಿಸುವ ಸುದ್ದಿಗಳನ್ನು ಪರಾಮರ್ಶಿಸಿಕೊಳ್ಳಬೇಕೆಂದು ಸಲಹೆ ನೀಡಿದರು.       ನೂತನ ಪದಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ಪತ್ರಕರ್ತರ ಏಳಿಗೆಗೆ ತಾವು ಸದಾ ಬದ್ಧವಾಗಿದ್ದು, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.   ...

ಸಹಕಾರ ಧುರೀಣ, ಕಾರ್ಮಿಕ ಮುಖಂಡ ಕೆ.ಎನ್ ಭೈರಪ್ಪ ಗೌಡ ನಿಧನ

ಇಮೇಜ್
ಕೆ.ಎನ್ ಭೈರಪ್ಪಗೌಡ       ಭದ್ರಾವತಿ: ಹಿರಿಯ ಕಾರ್ಮಿಕ ಮುಖಂಡ, ಸಹಕಾರಿ ಧುರೀಣ, ನಗರಸಭೆ ಮಾಜಿ ಸದಸ್ಯ ಕೆ.ಎನ್ ಭೈರಪ್ಪಗೌಡ(೮೪) ಶುಕ್ರವಾರ ರಾತ್ರಿ ನಿಧನ ಹೊಂದಿದರು.       ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರರು, ಸೊಸೆ ಹಾಗು ಅಳಿಯಂದಿರು ಮತ್ತು ಮೊಮ್ಮಕ್ಕಳು ಇದ್ದಾರೆ. ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಕಾರ್ಮಿಕ ಮುಖಂಡರಾಗಿ ಹಾಗು ಸಹಕಾರಿ ಧುರೀಣರಾಗಿ ಗುರುತಿಸಿಕೊಂಡಿದ್ದರು.       ಹಳೇನಗರದ ಮಾಡೆಲ್ ಕೋ-ಅಪರೇಟಿವ್ ಹೌಸಿಂಗ್ ಸೊಸೈಟಿ ನಿರ್ದೇಶಕರಾಗಿದ್ದು, ರಾಜ್ಯ ಸಹಕಾರ ಪ್ರಶಸ್ತಿ ಪುರಸ್ಕೃತರಾಗಿದ್ದರು. ಇವರ ನಿಧನಕ್ಕೆ ವಿಐಎಸ್‌ಎಲ್ ಕಾಯಂ ಹಾಗು ನಿವೃತ್ತ ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಗಣ್ಯರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ. 

ಕಾಮ್ರೇಡ್ ಡಿ.ಸಿ ಮಾಯಣ್ಣ ನಿಧನ

ಇಮೇಜ್
ಕಾಮ್ರೇಡ್ ಡಿ.ಸಿ       ಭದ್ರಾವತಿ : ನಗರದ ಹಿರಿಯ ಹೋರಾಟಗಾರ, ಸಿಪಿಐ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಡಿ.ಸಿ ಮಾಯಣ್ಣ(೯೨) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.       ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿವೃತ್ತಿ ಹೊಂದಿದ್ದರು. ಆರಂಭದಿಂದಲೂ ಕಾರ್ಮಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದು, ಪ್ರಸ್ತುತ ಸಿಪಿಐ ರಾಜ್ಯ ಸಮಿತಿ ಸದಸ್ಯರಾಗಿದ್ದರು. ಕಾರ್ಮಿಕ ಹೋರಾಟಗಳಲ್ಲಿ ಮಾತ್ರವಲ್ಲದೆ ಪ್ರಗತಿಪರ ಸಂಘಟನೆಗಳ ಬಹುತೇಕ ಹೋರಾಟಗಳಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.       ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ನಗರದ ವಿವಿಧ ರಾಜಕೀಯ ಪಕ್ಷಗಳ, ಪ್ರಗತಿಪರ ಹಾಗು ದಲಿತ ಮತ್ತು ಕಾರ್ಮಿಕ ಸಂಘಟನೆಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಕಾರ್ಮಿಕ ಹೋರಾಟಗಾರು, ಕಾರ್ಮಿಕ ವರ್ಗದವರು, ಡಿ.ಸಿ ಮಾಯಣ್ಣ ಅಭಿಮಾನಿ ಬಳಗದವರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು ಜಾತಿ-ಬೇಧ, ಪಕ್ಷ ಬೇಧ ಮರೆತು ಸಂತಾಪ ಸೂಚಿಸಿದ್ದಾರೆ.       ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಡಿ.ಸಿ ಮಾಯಣ್ಣನವರ ಹಿ...

ರಾಚಮ್ಮ ನಿಧನಕ್ಕೆ ಸಂತಾಪ

ಇಮೇಜ್
ರಾಚಮ್ಮ       ಭದ್ರಾವತಿ: ತಾಲೂಕಿನ ಶ್ರೀರಾಮನಗರ ಗ್ರಾಮದ ಸಂಸ್ಥಾಪಕರು, ಸಮಾಜ ಸೇವಕರಾದ ದಿವಂಗತ ಶ್ರಮಜೀವಿ ಮರಿಸಿದ್ದಯ್ಯನವರು ಧರ್ಮಪತ್ನಿ ರಾಚಮ್ಮ(೮೬)ನವರ ನಿಧನಕ್ಕೆ ನಗರದ ಗಣ್ಯರು, ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.       ರಾಚಮ್ಮ ಅವರಿಗೆ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಎಸ್.ಎಂ ಭೈರೇಗೌಡ ಮತ್ತು ತಾಲೂಕು ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಎಸ್.ಎಂ ರಮೇಶ್ ಸೇರಿದಂತೆ ಇಬ್ಬರು ಪುತ್ರರು ಹಾಗು ಐವರು ಪುತ್ರಿಯರು ಇದ್ದಾರೆ.       ದಿವಂಗತ ಮರಿಸಿದ್ದಯ್ಯನವರು ಕ್ಷೇತ್ರಕ್ಕೆ ವಲಸೆ ಬಂದು ಇಲ್ಲಿಯೇ ನೆಲೆನಿಂತು ತಮ್ಮ ಶ್ರಮದ ಬದುಕಿನ ಮೂಲಕ ಬದುಕು ಕಟ್ಟಿಕೊಂಡವರು. ಅಲ್ಲದೆ ಶ್ರೀರಾಮನಗರ ನಿರ್ಮಾಣ ಮಾಡುವ ಮೂಲಕ ಹಲವು ಸೇವಾ ಕಾರ್ಯಗಳ ಮೂಲಕ ಇಂದಿಗೂ ಜನರ ಮನಸ್ಸಿನಲ್ಲಿ ಉಳಿದುಕೊಂಡಿದ್ದಾರೆ.      ತಾಲೂಕು ಬೋರ್ಡ್ ಉಪಾಧ್ಯಕ್ಷರಾಗಿ, ಪ್ರಗತಿಪರ ಕೃಷಿಕರಾಗಿ ಅವರು ಸಮಾಜಕ್ಕೆ ನೀಡಿರುವ ಕೊಡುಗೆ ಅನನ್ಯವಾಗಿದ್ದು, ಅವರ ಬದುಕಿಗೆ ಸ್ಪೂರ್ತಿಯಾಗಿದ್ದ ರಾಚಮ್ಮನವರ ನಿಧನ ಗ್ರಾಮಸ್ಥರಲ್ಲಿ ನೋವುಂಟು ಮಾಡಿದೆ.       ತಾಲೂಕು ಒಕ್ಕಲಿಗರ ಸಂಘ, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗು ಗಣ್ಯರು ರಾಚಮ್ಮನವರ ನಿಧನಕ್ಕೆ ಸಂತಾಪ ಸೂಚಿ...

ಅನನ್ಯ ಶಾಲೆ ವಿದ್ಯಾರ್ಥಿಗಳಾದ ಅಭಿನಂದನ್, ಚಾರ್ವಿಕ ಜಿ ಪಟೇಲ್ ರಾಜ್ಯಮಟ್ಟಕ್ಕೆ ಆಯ್ಕೆ

ಇಮೇಜ್
ಭದ್ರಾವತಿ ನಗರದ ಅಪ್ಪರ್ ಹುತ್ತಾ, ಅನನ್ಯ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಉತ್ತಮ ಪ್ರತಿಭೆ ಅನಾವರಣಗೊಳಿಸುವ ಮೂಲಕ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ.       ಭದ್ರಾವತಿ : ನಗರದ ಅಪ್ಪರ್ ಹುತ್ತಾ, ಅನನ್ಯ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಉತ್ತಮ ಪ್ರತಿಭೆ ಅನಾವರಣಗೊಳಿಸುವ ಮೂಲಕ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ.       ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ,  ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದೊಂದಿಗೆ ಶಿವಮೊಗ್ಗ ಜಿಲ್ಲಾ ೨೧ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ  ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಾಲಾ ಆವರಣದಲ್ಲಿ ಜ.೮ರ ಗುರುವಾರ ನಡೆದಿದ್ದು, ಅನನ್ಯ ಪ್ರೌಢ ಶಾಲೆಯ ೮ನೇ ತರಗತಿ ವಿದ್ಯಾರ್ಥಿಗಳಾದ ಎನ್. ಅಭಿನಂದನ್ ಸ್ವರಚಿತ ಕಥಾ ವಾಚನ ಸ್ಪರ್ಧೆಯಲ್ಲಿ ಹಾಗೂ ಚಾರ್ವಿಕ ಜಿ ಪಟೇಲ್ ಸ್ವರಚಿತ ಕಾವ್ಯ ಮಂಡನೆ ಸ್ಪರ್ಧೆಯಲ್ಲಿ ಉತ್ತಮ ಪ್ರತಿಭೆ ಅನಾವರಣಗೊಳಿಸುವ ಮೂಲಕ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ.       ಈ...

ಅನನ್ಯ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ

ಇಮೇಜ್
ಭದ್ರಾವತಿ ನಗರದ ಅಪ್ಪರ್ ಹುತ್ತಾ, ಅನನ್ಯ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಉತ್ತಮ ಪ್ರತಿಭೆ ಅನಾವರಣಗೊಳಿಸುವ ಮೂಲಕ ಜಿಲ್ಲಾ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ.       ಭದ್ರಾವತಿ : ನಗರದ ಅಪ್ಪರ್ ಹುತ್ತಾ, ಅನನ್ಯ ಪ್ರೌಢಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಉತ್ತಮ ಪ್ರತಿಭೆ ಅನಾವರಣಗೊಳಿಸುವ ಮೂಲಕ ಜಿಲ್ಲಾ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ.       ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಹೊಸಸೇತುವೆ ರಸ್ತೆ, ಸಿದ್ದಾರೂಢನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಶಾಲೆಯ ೮ನೇ ತರಗತಿ ವಿದ್ಯಾರ್ಥಿಗಳಾದ ಎನ್. ಅಭಿನಂದನ್ ಸ್ವರಚಿತ ಕಥಾ ವಾಚನ ಸ್ಪರ್ಧೆಯಲ್ಲಿ ಹಾಗೂ ಚಾರ್ವಿಕ ಜಿ ಪಟೇಲ್ ಸ್ವರಚಿತ ಕಾವ್ಯ ಮಂಡನೆ ಸ್ಪರ್ಧೆಯಲ್ಲಿ ಉತ್ತಮ ಪ್ರತಿಭೆ ಅನಾವರಣಗೊಳಿಸುವ ಮೂಲಕ ಹಾಗು ೯ನೇ ತರಗತಿ ವಿದ್ಯಾರ್ಥಿನಿ ಎನ್. ಸೃಷ್ಟಿ ಕಾರ್ಯಕ್ರಮದ ನಿರೂಪಣೆಯಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುವ ಮೂಲಕ ಜಿಲ್ಲಾ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆಯಾಗಿದ್ದಾರೆ.     ...

ಆರ್. ಪಿ ಭರತ್ ರಾಜ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಇಮೇಜ್
ಆರ್. ಪಿ ಭರತ್‌ರಾಜ್‌ಸಿಂಗ್      ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಉಪಸಂಪಾದಕರಾದ ಆರ್. ಪಿ ಭರತ್ ರಾಜ್ ಸಿಂಗ್ ೨೦೨೫ ನೇ ಸಾಲಿನ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.      ನಿವೃತ್ತ ಪ್ರಾಂಶುಪಾಲರಾದ ಪುಟ್ಟುಸಿಂಗ್ ಅವರ ಪುತ್ರರಾದ ಬಿ.ಎ ಪದವೀಧರ ಆರ್. ಪಿ ಭರತ್‌ರಾಜ್‌ಸಿಂಗ್ ಅವರು ಸಾಮಾಜಿಕ ಬದಲಾವಣೆಯ ಚಳವಳಿಯ ಭಾಗವಾಗಿ ೧೯೮೯ರಲ್ಲಿ 'ಶಿವಮೊಗ್ಗ ಎಕ್ಸ್ ಪ್ರೆಸ್' ಕನ್ನಡ ದಿನಪತ್ರಿಕೆಯನ್ನು ಆರಂಭಿಸುವ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟರು. ಆರ್ಥಿಕ ಮುಗ್ಗಟ್ಟಿನಿಂದ ಪತ್ರಿಕೆ ಮುನ್ನಡೆಸಲಾಗದೆ ೧೯೯೧ ರಿಂದ ಸ್ವಾತಂತ್ರ್ಯ ಹೋರಾಟಗಾರರು, ಜನಪರ ಚಳವಳಿಗಾರರು ಆದ ಶ್ರೀನಿವಾಸ್ ಅಯ್ಯಂಗಾರ್ , ಸಿ, ಎಸ್ ಚಂದ್ರಭೂಪಾಲ್ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ 'ಸಹ್ಯಾದ್ರಿ' ದಿನಪತ್ರಿಕೆಯ ವರದಿಗಾರರಾಗಿ ಮತ್ತು ಅನೇಕ ರಾಜ್ಯಮಟ್ಟದ ದಿನಪತ್ರಿಕೆಗಳಿಗೆ ವರದಿಗಳನ್ನು ಬರೆಯುತಿದ್ದರು.      ೧೯೯೭ ರಿಂದ ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆಯ ಉಪಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ಆರ್. ಪಿ ಭರತ್ ರಾಜ್ ಸಿಂಗ್ ಪ್ರಾಮಾಣಿಕ, ವೃತ್ತಿಪರ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವುದು ಜಿಲ್ಲೆಯ ಪತ್ರಿಕೋದ್ಯಮದ ಹೆಗ್ಗಳಿಕೆಯಾಗಿದೆ. ಆರ್. ಪಿ ಭರತ್ ರಾಜ್ ಸಿಂಗ್ ಅವರ ಮೂರುವರೆ ದಶಕಗಳಿಗೂ ಹೆಚ್ಚ...

ಮತ್ತಷ್ಟು ಜನಸ್ನೇಹಿಯಾಗುತ್ತಿರುವ ಪೊಲೀಸ್ ಉಪವಿಭಾಗ : ಯೋಗ ಶಿಬಿರ, ಹೆಲ್ಮೆಟ್ ಜಾಗೃತಿಗಾಗಿ ವಿನೂತನ ಅಭಿಯಾನ

ಇಮೇಜ್
ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಬುಧವಾರ ಪೊಲೀಸ್ ಸಿಬ್ಬಂದಿಗಳಿಗಾಗಿ ಯೋಗ ಶಿಬಿರ ಆಯೋಜನೆ ಮಾಡುವ ಮೂಲಕ ಪೊಲೀಸ್ ಉಪ ವಿಭಾಗ ಗಮನ ಸೆಳೆದಿದೆ.       ಭದ್ರಾವತಿ : ಇತ್ತೀಚಿನ ಕೆಲವು ವರ್ಷಗಳಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಜನಸ್ನೇಹಿಯಾಗಿ ಪರಿವರ್ತನೆಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಸಮುದಾಯದೊಂದಿಗೆ ಹಲವು ವಿಭಿನ್ನ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಗಮನ ಸೆಳೆಯುತ್ತಿದೆ. ಅದರಲ್ಲೂ ಇಲ್ಲಿನ ಉಪವಿಭಾಗ ಸಾಕಷ್ಟು ಹೆಚ್ಚಿನ ಶ್ರಮವಹಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗುತ್ತಿದೆ.       ಸಸಿಗಳನ್ನು ನೆಡುವ ಮೂಲಕ ಪರಿಸರ ಸ್ನೇಹಿಯಾಗಿ, ಶಾಲೆಯಂಗಳದಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸುವ ಮೂಲಕ ವಿದ್ಯಾರ್ಥಿ ಸ್ನೇಹಿಯಾಗಿ, ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡುವ ಮೂಲಕ ಜೀವ ಸಂಜೀವಿನಿಯಾಗಿ, ಮಕ್ಕಳನ್ನು ಠಾಣೆಯಂಗಳಕ್ಕೆ ಬರಮಾಡಿಕೊಂಡು ಮಕ್ಕಳ ಸ್ನೇಹಿಯಾಗಿ, ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಸುರಕ್ಷತಾ ಸ್ನೇಹಿಯಾಗಿ ಹೀಗೆ ಹಲವು ರೀತಿಯಲ್ಲಿ ಜಿಲ್ಲಾ ಪೊಲೀಸ್ ಸಮುದಾಯಕ್ಕೆ ಹತ್ತಿರವಾಗುತ್ತಿದೆ.       ಕೆಲವು ದಿನಗಳ ಹಿಂದೆ ಉಪವಿಭಾಗದ ಉಪಾಧೀಕ್ಷಕರಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಕಾಶ್ ರಾಥೋಡ್‌ರವರು ಉಪ ವಿಭಾಗದಲ್ಲಿ ಹಲವು ವಿಭಿನ್ನ ಕಾರ್ಯಗಳನ್ನು ಅನುಷ್ಠಾನಕ್ಕೆ ತರುತ್ತಿದ್ದು,...

ಜ.೧೧ರಂದು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಇಮೇಜ್
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಭದ್ರಾವತಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ.೧೧ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ನೂತನ ಅಧ್ಯಕ್ಷ ಗಂಗಾನಾಯ್ಕ ಗೊಂದಿ ತಿಳಿಸಿದರು.       ಭದ್ರಾವತಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ.೧೧ರ ಭಾನುವಾರ ಬೆಳಿಗ್ಗೆ ೧೧ ಗಂಟೆಗೆ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ನೂತನ ಅಧ್ಯಕ್ಷ ಗಂಗಾನಾಯ್ಕ ಗೊಂದಿ ತಿಳಿಸಿದರು.       ಅವರು ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೂತನ ಪದಾಧಿಕಾರಿಗಳ ಸಮಾರಂಭಕ್ಕೆ ಈಗಾಗಲೇ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಮಾರಂಭ ಉದ್ಘಾಟಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ತಹಸೀಲ್ದಾರ್ ಪರುಸಪ್ಪ ಕುರುಬರ, ಪೊಲೀಸ್ ಉಪವಿಭಾಗದ ಉಪಾಧೀಕ್ಷಕ ಪ್ರಕಾಶ್ ರಾಥೋಡ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಂಘದ ರಾಜ್ಯ ಚುನಾವಣಾಧಿಕಾರಿ ಎನ್. ರವಿಕುಮಾರ್(ಟೆಲೆಕ್ಸ್), ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆ...

ಹಿರಿಯ ರಾಜಕೀಯ ಮುತ್ಸದ್ದಿ, ಹೋರಾಟಗಾರ ಡಿ.ಸಿ ಮಾಯಣ್ಣರಿಗೆ ಉನ್ನತ ನಾಗರೀಕ ಪ್ರಶಸ್ತಿ ನೀಡಿ

ಇಮೇಜ್
ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ಅಭಿಮಾನಿಗಳಿಂದ ಆಗ್ರಹ  ಭದ್ರಾವತಿಯಲ್ಲಿ ಕಾಮ್ರೇಡ್ ಡಿ.ಸಿ ಮಾಯಣ್ಣ ಅಭಿಮಾನಿಗಳ ಸಂಘದಿಂದ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅಭಿಮಾನಿಗಳು ಡಿ.ಸಿ ಮಾಯಣ್ಣ ಭಾವಚಿತ್ರ ಹಿಡಿದು ಉನ್ನತ ನಾಗರೀಕ ಪ್ರಶಸ್ತಿ ನೀಡಲು ಆಗ್ರಹಿಸಿದರು.       ಭದ್ರಾವತಿ: ಕ್ಷೇತ್ರದ ದಕ್ಷ ಮತ್ತು ಪ್ರಾಮಾಣಿಕ ಹೋರಾಟಗಾರರು, ಹಿರಿಯ ರಾಜಕೀಯ ಮುತ್ಸದ್ದಿ ಹಾಗು ಕಾರ್ಮಿಕ ಮುಖಂಡರಾದ ಕಾಮ್ರೇಡ್ ಡಿ.ಸಿ ಮಾಯಣ್ಣನವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉನ್ನತ ನಾಗರೀಕ ಪ್ರಶಸ್ತಿಗಳನ್ನು ಪ್ರದಾನ ಮಾಡುವ ಮೂಲಕ ಸೂಕ್ತ ಗೌರವ ನೀಡಬೇಕೆಂದು ಕಾಮ್ರೇಡ್ ಡಿ.ಸಿ ಮಾಯಣ್ಣ ಅಭಿಮಾನಿಗಳ ಸಂಘದ ಪ್ರಧಾನ ಸಂಚಾಲಕ ಬಿ.ಎನ್ ರಾಜು ಮನವಿ ಮಾಡಿದ್ದಾರೆ.       ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಪಿಐ ರಾಜ್ಯ ಮಂಡಳಿ ಸದಸ್ಯರಾದ ಮಾಯಣ್ಣನವರ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಇವರು ಬದುಕುಳಿಯುವುದೇ ಕಷ್ಟವಾಗಿತ್ತು. ಅಲ್ಲಿಂದ ಇವರನ್ನು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಕರೆತಂದು ತೀವ್ರ ನಿಗಾ ಘಟಕದಲ್ಲಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.  ಕ್ಷೇತ್ರದ ನಾಗರೀಕರ ಪ್ರೀತಿಯ ಹಾರೈಕೆ, ಪ್ರಾರ್ಥನೆಯಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿರುವುದು ಸಂತೋಷ...

ವೈಭವದ ಶ್ರೀ ಮಾರಿಯಮ್ಮ ದೇವಿ ಜಾತ್ರಾ ಮಹೋತ್ಸವ : ಕಣ್ಮನ ಸೆಳೆದ ಲಕ್ಷ್ಮೀ ಅಲಂಕಾರ

ಇಮೇಜ್
ಸಹಸ್ರಾರು ಭಕ್ತಾಧಿಗಳಿಗೆ ಅನ್ನಸಂತರ್ಪಣೆ, ದೇವಿಯ ರಾಜಬೀದಿ ಉತ್ಸವ ಮೆರವಣಿಗೆ  ಭದ್ರಾವತಿ ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಸಮೀಪ ಮೀನುಗಾರರ ಬೀದಿಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಅಮ್ಮನವರಿಗೆ ವೈಭವದ ಶ್ರೀ ಲಕ್ಷ್ಮೀ ಅಲಂಕಾರ ಕೈಗೊಳ್ಳಲಾಗಿತ್ತು.       ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಸಮೀಪ ಮೀನುಗಾರರ ಬೀದಿಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಪ್ರತಿ ವರ್ಷದಂತೆ ಈ ಬಾರಿ ಸಹ ಪೊಂಗಲ್ ಹಾಗು ಸಹಸ್ರಾರು ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು.  ಭದ್ರಾವತಿ ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಸಮೀಪ ಮೀನುಗಾರರ ಬೀದಿಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಪ್ರತಿ ವರ್ಷದಂತೆ ಈ ಬಾರಿ ಸಹ ಸಹಸ್ರಾರು ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ದೇವಾಲಯ ಕಮಿಟಿ ಅಧ್ಯಕ್ಷ, ಉದ್ಯಮಿ ಎ. ಮಾಧು ಅನ್ನಸಂತರ್ಪಣೆಗೆ ಚಾಲನೆ ನೀಡಿದರು.      ಮಂಗಳವಾರ ರಾತ್ರಿ ಭದ್ರಾ ನದಿಯಿಂದ ಶಕ್ತಿ ಕರಗ ತರುವುದು ಮತ್ತು ಅಗ್ನಿಕುಂಡ ತ್ರಿಶೂಲ ಮುದ್ರೆಯೊಂದಿಗೆ ದೇವಸ್ಥಾನಕ್ಕೆ ಬಂದು ಸೇರುವ ಕಾರ್ಯಕ್ರಮ ನಡೆಯಿತು. ಬೆಳಗಿನ ಜಾವ ಪೊಂಗಲ್,  ಬೆಳಿಗ್ಗೆ ೧೧ ಗಂಟೆಯಿಂದ...

ಚಾಕುವಿನಿಂದ ಬೆದರಿಸಿ ಚಿನ್ನದ ಮಾಂಗಲ್ಯ ಸರ ದೋಚಿದ್ದ ಪ್ರಕರಣ

ಇಮೇಜ್
ನ್ಯೂಟೌನ್ ಪೊಲೀಸರ ಯಶಸ್ವಿ ಕಾರ್ಯಾಚರಣೆ, ಓರ್ವನ ಸೆರೆ  ಭದ್ರಾವತಿ ನಗರದ ಜೇಡಿಕಟ್ಟೆಯಲ್ಲಿ ಗೃಹಿಣಿಯೊಬ್ಬರನ್ನು ಚಾಕುವಿನಿಂದ ಬೆದರಿಸಿ ಚಿನ್ನದ ಮಾಂಗಲ್ಯ ಸರ ದೋಚಿದ್ದ ಪ್ರಕರಣವನ್ನು ನ್ಯೂಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಬೇಧಿಸುವಲ್ಲಿ ಯಶಸ್ವಿಯಾಗಿದ್ದು, ಓರ್ವನನ್ನು ಬಂಧಿಸಿ ಸುಮಾರು ೧.೫೦ ಲಕ್ಷ ರು. ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.       ಭದ್ರಾವತಿ : ನಗರದ ಜೇಡಿಕಟ್ಟೆಯಲ್ಲಿ ಗೃಹಿಣಿಯೊಬ್ಬರನ್ನು ಚಾಕುವಿನಿಂದ ಬೆದರಿಸಿ ಚಿನ್ನದ ಮಾಂಗಲ್ಯ ಸರ ದೋಚಿದ್ದ ಪ್ರಕರಣವನ್ನು ನ್ಯೂಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.       ಜ.೫ ರಂದು ಬೆಳಿಗ್ಗೆ ಜೇಡಿಕಟ್ಟೆಯಲ್ಲಿ ಸುಮಾರು ೨೩ ವರ್ಷ ವಯಸ್ಸಿನ ಭಾಗ್ಯ ಎಂಬ ಗೃಹಿಣಿ ಮನೆಯ ಬಾಗಿಲನ್ನು ತೊಳೆಯಲು ಮನೆಯ ಪಕ್ಕದಲ್ಲಿರುವ ಡ್ರಮ್ ನಿಂದ ನೀರನ್ನು ತೆಗೆದುಕೊಳ್ಳಲು ಹೋದಾಗ ಯಾರೋ ಒಬ್ಬ ವ್ಯಕ್ತಿ ತನ್ನ ಕೈಯಲ್ಲಿ ಚಾಕುವನ್ನು ಹಿಡಿದುಕೊಂಡು ಬಂದು ಬೆದರಿಸಿ  ಸುಮಾರು ೫೦,೦೦೦ ರು. ಮೌಲ್ಯದ ಬಂಗಾರದ ಎರಡು ತಾಳಿ ಮತ್ತು ಒಂದು ಲಕ್ಷ್ಮೀ ತಾಳಿ ಇರುವ ಮತ್ತು ಬಂಗಾರದ ೪ ಗುಂಡುಗಳಿರುವ ಕರಿಮಣಿ ಮಾಂಗಲ್ಯ ಸರ ದೋಚಿಕೊಂಡು ಪರಾರಿಯಾಗಿದ್ದನು. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.       ಪ್ರಕರಣದ ತನಿಖೆಗಾಗಿ ನೂತನ ಜಿಲ್ಲಾ ಪೊಲೀಸ್ ಅಧೀಕ...

ಕಳೆದ ೮ ವರ್ಷಗಳಿಂದ ತೆರವುಗೊಳಿಸದಿರುವ ಒತ್ತುವರಿ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಿ

ಇಮೇಜ್
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಸದಸ್ಯ ಎಚ್. ರವಿಕುಮಾರ್ ಆಗ್ರಹ  ಭದ್ರಾವತಿಯಲ್ಲಿ ಕಳೆದ ೮ ವರ್ಷಗಳಿಂದ ಡಾ. ರಾಜಕುಮಾರ್ ರಸ್ತೆ (ಬಿ.ಎಚ್. ರಸ್ತೆ) ಅಗಲೀಕರಣ ಕಾರ್ಯಕ್ಕೆ ತೊಡಕಾಗಿರುವ ಒತ್ತುವರಿ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳವಾರ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಸದಸ್ಯ ಎಚ್. ರವಿಕುಮಾರ್ ಆಗ್ರಹಿಸಿ ತಹಸೀಲ್ದಾರ್ ಪರುಸಪ್ಪ ಕುರುಬರ ಅವರಿಗೆ ಮನವಿ ಸಲ್ಲಿಸಿದ್ದಾರೆ.       ಭದ್ರಾವತಿ: ನಗರದಲ್ಲಿ ಕಳೆದ ೮ ವರ್ಷಗಳಿಂದ ಡಾ. ರಾಜಕುಮಾರ್ ರಸ್ತೆ (ಬಿ.ಎಚ್. ರಸ್ತೆ) ಅಗಲೀಕರಣ ಕಾರ್ಯಕ್ಕೆ ತೊಡಕಾಗಿರುವ ೯ ಕಟ್ಟಡಗಳನ್ನು ಇದುವರೆಗೂ ತೆರವುಗೊಳಿಸಿಲ್ಲ. ಇದರಿಂದಾಗಿ ವಾಹನ ಸವಾರರಿಗೆ, ಪಾದಚಾರಿಗಳಿಗೆ ತೊಂದರೆಯಾಗುತ್ತಿದ್ದು, ಅಲ್ಲದೆ ಭವಿಷ್ಯದ ದೃಷ್ಟಿಯಿಂದ ಹಲವು ಅಭಿವೃದ್ಧಿ ಕಾರ್ಯಗಳನ್ನು ಸಾಧ್ಯವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಕಟ್ಟಡಗಳನ್ನು ತೆರವುಗೊಳಿಸಬೇಕೆಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್. ರವಿಕುಮಾರ್ ಮಂಗಳವಾರ ತಹಸೀಲ್ದಾರ್ ಪರುಸಪ್ಪ ಕುರುಬರ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.       ೧೧.೧೦.೨೦೧೭ ರಂದು ತಾಲ್ಲೂಕು ಕಛೇರಿ ಸಭಾಂಗಾಣದಲ್ಲಿ ನಗರಸಭೆ, ಲೋಕೋಪಯೋಗಿ ಹಾಗು ಕಂದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪದ್ಮ ನಿಲಯ ಹೋಟೇಲ್ ಸೇರಿದಂತೆ ಇತರೆ ಒತ್ತುವರೆಯಾಗಿರುವ ೯ ಕಟ...

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮ್ಯಾಪಿಂಗ್-ಪ್ರೋಜಿನಿ ಕಾರ್ಯ ಪ್ರಾರಂಭ

ಇಮೇಜ್
ಕಡ್ಡಾಯವಾಗಿ ಮ್ಯಾಪಿಂಗ್ ಮಾಡಿಸಲು ತಹಸೀಲ್ದಾರ್ ಮನವಿ  ಭದ್ರಾವತಿ ತಾಲೂಕು ದಂಡಾಧಿಕಾರಿಗಳ ಕಛೇರಿಯಲ್ಲಿ ತಹಸೀಲ್ದಾರ್ ಪರುಸಪ್ಪ ಕುರುಬರ ೨೦೦೨ ಮತ್ತು ೨೦೨೫ರ ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ಪ್ರೋಜಿನಿ ಕಾರ್ಯ ಕುರಿತು ಮಾಹಿತಿ ನೀಡಿದರು.       ಭದ್ರಾವತಿ : ಕೇಂದ್ರ ಚುನಾವಣಾ ಆಯೋಗ ಮುಖ್ಯ ಆಯುಕ್ತರು ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದ ಮೇರೆಗೆ ೧೧೨-ಭದ್ರಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ೨೦೦೨ ಮತ್ತು ೨೦೨೫ರ ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ಪ್ರೋಜಿನಿ ಕಾರ್ಯ ಪ್ರಾರಂಭವಾಗಲಿದ್ದು, ಮತದಾರರು ತಮ್ಮ ವ್ಯಾಪ್ತಿಯ ಬಿಎಲ್‌ಓ ಅವರನ್ನು ಸಂಪರ್ಕಿಸಿ ಕಡ್ಡಾಯವಾಗಿ ಮ್ಯಾಪಿಂಗ್ ಮಾಡಿಸಿಕೊಳ್ಳುವಂತೆ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿರುವ ತಹಸೀಲ್ದಾರ್ ಪರುಸಪ್ಪ ಕುರುಬರ ಮನವಿ ಮಾಡಿದರು.      ಈ ಕುರಿತು ಮಂಗಳವಾರ ಮಾಹಿತಿ ನೀಡಿದ ಅವರು,  ಮುಂಬರುವ ದಿನಗಳಲ್ಲಿ (SIಖ-Sಠಿeಛಿiಚಿಟ Iಟಿಣeಟಿsive ಖevisioಟಿ) ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ ಪ್ರಾರಂಭವಾಗಲಿದೆ.  ಇದಕ್ಕೆ ಪೂರಕವಾಗಿ ೧೧೨-ಭದ್ರಾವತಿ ವಿಧಾನ ಸಭಾ ಕ್ಷೇತ್ರದಲ್ಲಿ ೨೦೦೨  ಮತ್ತು ೨೦೨೫ರ ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ಪ್ರೋಜಿನಿ (ಸಂತತಿ ಸೇರ್ಪಡೆ-೧೮ ವರ್ಷ ಮೇಲ್ಪಟ್ಟ ೪೦ ವರ್ಷದೊಳಗಿನ ಮತದಾರರನ್ನು) ಕಾರ್ಯ ನಡೆಯುತ್ತಿದ್ದು, ೨೦೦೨ರಲ್ಲಿ ಮತದಾರರಪಟ್ಟಿಯಲ್ಲಿರು...

ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಆಯೋಜನೆ ಸಮಾಜಕ್ಕೆ ಮಾದರಿ : ಬಲ್ಕೀಶ್ ಬಾನು

ಇಮೇಜ್
ಭದ್ರಾವತಿ ನಗರಸಭೆ ವಾರ್ಡ್ ನಂ.೨೩ರ ಬೊಮ್ಮನಕಟ್ಟೆ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನುರವರನ್ನು ಸನ್ಮಾನಿಸಿ ಗೌರವಿಸಲಾಯಿತು.       ಭದ್ರಾವತಿ : ಸಮಾಜಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಉತ್ತಮ ಸೇವಾ ಕಾರ್ಯ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ ಆಯೋಜನೆ ಮಾಡಿರುವುದು ಶ್ಲಾಘನೀಯ ಕಾರ್ಯವಾಗಿದ್ದು, ಇಂತಹ ಕಾರ್ಯಗಳು ಸಮಾಜದಲ್ಲಿ ಹೆಚ್ಚಾಗಿ ನಡೆಯಬೇಕೆಂದು ಪ್ರಶಂಸೆ ವಿಧಾನಪರಿಷತ್ ಸದಸ್ಯೆ ಬಲ್ಕೀಶ್ ಬಾನು ವ್ಯಕ್ತಪಡಿಸಿದರು.       ನಗರಸಭೆ ವಾರ್ಡ್ ನಂ.೨೩ರ ಬೊಮ್ಮನಕಟ್ಟೆ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಆವರಣದಲ್ಲಿ ಸರ್ವ ಮಸೀದಿಗಳು ಮತ್ತು ದರ್ಗಾಗಳ ಒಕ್ಕೂಟದ ವತಿಯಿಂದ ಶಿವಮೊಗ್ಗ ಮಲ್ನಾಡ್ ಲೈಫ್‌ಲೈನ್ ಆಸ್ಪತ್ರೆ  ಮತ್ತು ಲಯನ್ಸ್ ಕ್ಲಬ್, ಶಿವಮೊಗ್ಗ ಮಲ್ನಾಡ್, ಡಿಸ್ಟ್ರಿಕ್ಟ್-೩೧೭ಸಿ ಹಾಗು ನಗರದ ಜೀವ ಸಂಜೀವಿನಿ ಸ್ವಯಂ ಪ್ರೇರಿತ ರಕ್ತದಾನ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಹಾಗು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.       ನಗರಸಭೆ ಬಷೀರ್ ಅಹಮದ್, ಸದಸ್ಯರಾದ ಬಿ.ಕೆ ಮೋಹನ್, ಕೋಟೇಶ್ವರರಾವ್, ಅಂಜುಮಾನ್ ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಅಯೂಬ್ ಖಾನ್ ಸೇ...