ಭದ್ರಾ ಎಡ-ಬಲ ದಂಡೆ ನಾಲೆಗಳಲ್ಲಿ ನೀರು ಹರಿಸಿ ರೈತರ ಹಿತ ಕಾಪಾಡಿ
ಅಧೀಕ್ಷಕ ಅಭಿಯಂತರರಿಗೆ ಬಿಜೆಪಿ ಆಗ್ರಹಿಸಿ ಮನವಿ ಭದ್ರಾ ಎಡ ಮತ್ತು ಬಲದಂಡೆ ನಾಲೆಗಳಲ್ಲಿ ತಕ್ಷಣ ನೀರು ಹರಿಸಿ ರೈತರು ಬೆಳೆದಿರುವ ಬೆಳೆಗಳನ್ನು ರಕ್ಷಿಸುವ ಮೂಲಕ ರೈತರ ಹಿತ ಕಾಪಾಡುವಂತೆ ಆಗ್ರಹಿಸಿ ಬುಧವಾರ ಭದ್ರಾವತಿಯಲ್ಲಿ ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದ ವತಿಯಿಂದ ನೀರಾವರಿ ಇಲಾಖೆ ಅಧಿಕ್ಷಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು. ಭದ್ರಾವತಿ : ಭದ್ರಾ ಎಡ ಮತ್ತು ಬಲದಂಡೆ ನಾಲೆಗಳಲ್ಲಿ ತಕ್ಷಣ ನೀರು ಹರಿಸಿ ರೈತರು ಬೆಳೆದಿರುವ ಬೆಳೆಗಳನ್ನು ರಕ್ಷಿಸುವ ಮೂಲಕ ರೈತರ ಹಿತ ಕಾಪಾಡುವಂತೆ ಆಗ್ರಹಿಸಿ ಬುಧವಾರ ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದ ವತಿಯಿಂದ ನೀರಾವರಿ ಇಲಾಖೆ ಅಧಿಕ್ಷಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು. ತಾಲೂಕಿನ ಬಿಆರ್‌ಪಿ ಅಧೀಕ್ಷಕ ಅಭಿಯಂತರರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ರೈತರು ಬೆಳೆದಿರುವ ಬೆಳೆಗಳಿಗೆ ಸೂಕ್ತ ಸಮಯದಲ್ಲಿ ನೀರು ಲಭ್ಯವಾಗದಿದ್ದಲ್ಲಿ ಬೆಳೆಗಳು ನಾಶವಾಗಲಿವೆ. ಈ ಹಿನ್ನಲೆಯಲ್ಲಿ ತಕ್ಷಣ ಎಡ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಬೇಕು. ಇದರ ಜೊತೆಗೆ ಭದ್ರಾ ಜಲಾಶಯದಿಂದ ಸೋರಿಕೆಯಾಗುತ್ತಿರುವ ನೀರು ವ್ಯಕ್ತವಾಗಿ ಭದ್ರಾ ನದಿಗೆ ಸೇರುತ್ತಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಸೋರಿಕೆಯಾಗುತ್ತಿರುವ ನೀರು ನಾಲೆಗಳಿಗೆ ಸೇರುವಂತೆ ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಲಾಯಿತು. ...