Posts

ಪತ್ರಕರ್ತರೊಂದಿಗೆ ಚರ್ಚೆ ನಡೆಸಿದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ

Image
ಭದ್ರಾವತಿಯಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೬ನೇ ದಿನದ ಕಾರ್ಯಕ್ರಮದ ನಡುವೆ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಪತ್ರಕರ್ತರನ್ನು ಆಶೀರ್ವದಿಸಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು.       ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ  ಆಯೋಜಿಸಲಾಗಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ೬ನೇ ದಿನದ ಕಾರ್ಯಕ್ರಮದ ನಡುವೆ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಪತ್ರಕರ್ತರನ್ನು ಆಶೀರ್ವದಿಸಿ ಸುಮಾರು ಅರ್ಧ ತಾಸು ಚರ್ಚೆ ನಡೆಸಿದರು.       ಹಳೇನಗರ ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ, ಹಿರಿಯ ಪತ್ರಕರ್ತ ಕಣ್ಣಪ್ಪ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಶಾಖೆ ಅಧ್ಯಕ್ಷ ಗಂಗಾನಾಯ್ಕ ಗೊಂದಿ, ಉಪಾಧ್ಯಕ್ಷ ಜಿ. ಸುಭಾಷ್‌ರಾವ್ ಸಿಂಧ್ಯಾ, ಪ್ರಧಾನ ಕಾರ್ಯದರ್ಶಿ ಬಸವರಾಜ, ಕಾರ್ಯದರ್ಶಿ ಅನಂತಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಆರ್ ಬದರಿನಾರಾಯಣ ಶ್ರೇಷ್ಠಿ, ಎಚ್. ಶೈಲೇಶ್ ಕೋಠಿ, ಕೆ.ಆರ್ ಶಂಕರ್, ಕಿರಣ್ ಕುಮಾರ್ ಹಾಗು ಸಾಧು ಸದ್ಧರ್ಮ ತಾಲೂಕು ಅಧ್ಯಕ್ಷ ಕೆ.ಜಿ ರವಿಕುಮಾರ್, ಕೆ.ಜಿ ರಾಜಕುಮಾರ್, ಸಂಜೀವ್ ಕುಮಾರ್ ಸೇರಿದಂತೆ ಇನ್ನ...

ಫೆ.೧ರಂದು ಕಾಮ್ರೇಡ್ ಡಿ.ಸಿ ಮಾಯಣ್ಣ, ಕಾಳೇಗೌಡರಿಗೆ ನುಡಿನಮನ

Image
ಡಿ.ಸಿ ಮಾಯಣ್ಣ-ಕಾಳೇಗೌಡ      ಭದ್ರಾವತಿ : ಭಾರತ ಕಮ್ಯೂನಿಸ್ಟ್ ಪಕ್ಷ(ಸಿಪಿಐ) ವಿಐಎಸ್‌ಎಲ್ ಎಂಪ್ಲಾಯಿಸ್ ಅಸೋಸಿಯೇಷನ್(ಎಐಟಿಯುಸಿ ಸಂಯೋಜಿತ) ವತಿಯಿಂದ ಫೆ.೧ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ವಿಐಎಸ್‌ಎಲ್/ಎಂಪಿಎಂ ಮತ್ತು  ಇತರೆ ಕಾರ್ಮಿಕ ಸಂಘಗಳ ಅಸಂಘಟಿತ/ಬಡ ಕಾರ್ಮಿಕರ, ದೀನದಲಿತರ, ರೈತ ಹೋರಾಟಗಳ ಹಾಗು ಪ್ರಗತಿಪರ ಹೋರಾಟಗಳ ನಾಯಕರಾದ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣ ಮತ್ತು ಕಾಮ್ರೇಡ್ ಕಾಳೇಗೌಡ ಅವರಿಗೆ ನುಡಿ-ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.       ನ್ಯೂಟೌನ್‌ನಲ್ಲಿರುವ ಅಸೋಸಿಯೇಷನ್ ಕಛೇರಿಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಕಾಮ್ರೇಡ್ ಸಾತಿ ಸುಂದರೇಶ್ ಉದ್ಘಾಟಿಸುವರು. ರಾಷ್ಟ್ರೀಯ ಮಂಡಳಿ ಸದಸ್ಯ ಕಾಮ್ರೇಡ್ ಪಿ.ವಿ ಲೋಕೇಶ್, ಕಾಮ್ರೇಡ್ ರಾಧಾ ಸುಂದರೇಶ್, ರಾಜ್ಯ ಸಹ ಕಾರ್ಯದರ್ಶಿ ಕಾಮ್ರೇಡ್ ಎಚ್.ಎಂ  ಸಂತೋಷ್ ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 

ಸಮಾಜದಲ್ಲಿ ಸಾಮರಸ್ಯ ಕಾಯ್ದುಕೊಳ್ಳುವುದು ಹಿಂದೂ ಸಂಗಮದ ಉದ್ದೇಶ : ಹಾರಿಕ ಮಂಜುನಾಥ್

Image
     ಭದ್ರಾವತಿ : ಹಿಂದೂ ಧರ್ಮದ ಮೌಲ್ಯಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಪ್ರತಿಪಾದಿಸುವ ಮೂಲಕ ಸಮಾಜದಲ್ಲಿ ಸಾಮರಸ್ಯ ಕಾಯ್ದುಕೊಳ್ಳುವುದು ಹಿಂದೂ ಸಂಗಮದ ಉದ್ದೇಶವಾಗಿದೆ ಎಂದು ವಾಗ್ಮಿ ಹಾರಿಕ ಮಂಜುನಾಥ್ ಹೇಳಿದರು.    ಅವರು ಹುತ್ತಾ ಕಾಲೋನಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.     ಹಿಂದೂತ್ವದ ಭಾವನೆ ಮೂಡಬೇಕು‌. ಹಿಂದೂತ್ವದ ನೆಲೆಗಟ್ಟಿನಲ್ಲಿ ರೂಪುಗೊಂಡ ಸಂಸ್ಕೃತಿ, ಆಚಾರ, ವಿಚಾರಗಳು ಮುಂದಿನ ಪೀಳಿಗೆಗೂ ಮುಂದುವರೆಯಬೇಕೆಂದರು.     ಪ್ರಮುಖರಾದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ, ನಗರಸಭೆ ಸದಸ್ಯರಾದ ಆರ್. ಮೋಹನ್ ಕುಮಾರ್, ಸವಿತಾ ಉಮೇಶ್, ಮಾಜಿ ಸದಸ್ಯ ಎಚ್.ಬಿ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ತರಳಬಾಳು ಜಗದ್ಗುರು ರೈತರ ನೆರವಿಗೆ ಮುಂದಾಗಿ ನಾಡಿಗೆ ಬೆಳಕಾಗಿದ್ದಾರೆ : ಈಶ್ವರ ಖಂಡ್ರೆ

Image
ಭದ್ರಾವತಿ ನಗರದ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಅಂಗವಾಗಿ ೫ನೇ ದಿನ ತರಳಬಾಳು ಮಹಾಮಂಟಪದ ರಾಷ್ಟ್ರಕವಿ ಕುವೆಂಪು ಮಹಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೃಷಿ ಮತ್ತು ಸಮಾಜ ವಿಷಯ ಕುರಿತ ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು, ಅರಣ್ಯ ಖಾತೆ ಸಚಿವರಾದ ಈಶ್ವರ್ ಖಂಡ್ರೆ ಪಾಲ್ಗೊಂಡು ಮಾತನಾಡಿದರು.       ಭದ್ರಾವತಿ: ತರಳಬಾಳು ಜಗದ್ಗುರು ರೈತರ ನೆರವಿಗೆ ಮುಂದಾಗಿ ನೀರಾವರಿ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಮೂಲಕ ಭಗಿರಥರಾಗಿದ್ದು, ಹಲವಾರು ಸಮಾಜಮುಖಿ ಕಾರ್ಯಗಳ ಮೂಲಕ ನಾಡಿಗೆ ಬೆಳಕಾಗಿದ್ದಾರೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು, ಅರಣ್ಯ ಖಾತೆ ಸಚಿವರಾದ ಈಶ್ವರ್ ಖಂಡ್ರೆ ಬಣ್ಣಿಸಿದರು.       ಅವರು ಬುಧವಾರ ನಗರದ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಅಂಗವಾಗಿ ೫ನೇ ದಿನ ತರಳಬಾಳು ಮಹಾಮಂಟಪದ ರಾಷ್ಟ್ರಕವಿ ಕುವೆಂಪು ಮಹಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕೃಷಿ ಮತ್ತು ಸಮಾಜ ವಿಷಯ ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.       ವಿದ್ಯೆ, ದಾಸೋಹ, ಧರ್ಮಪಾಲನೆಯ ನ್ಯಾಯದಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಶ್ರೀಗಳ ಕೊಡುಗೆ ಅನನ್ಯವಾಗಿದೆ. ತರಳಬಾಳು ಹುಣ್ಣಿಮೆ ಮಹೋತ್ಸವ ಈ ನಿಟ್ಟಿನಲ್ಲಿ ಇಂದಿನ ಯುವ ಪೀಳಿ...

ವೀರಗಾಸೆ ಮೂಲಕ ಹೆಣ್ಣು ಮಕ್ಕಳು ಸಹ ವೀರ ಹೆಜ್ಜೆ : ಡಾ. ಬಸವರಾಜ ನೆಲ್ಲಿಸರ

Image
ಭದ್ರಾವತಿ ನಗರದ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಅಂಗವಾಗಿ ೫ನೇ ದಿನ ತರಳಬಾಳು ಮಹಾಮಂಟಪದ ರಾಷ್ಟ್ರಕವಿ ಕುವೆಂಪು ಮಹಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವೀರಗಾಸೆ ಸ್ಪರ್ಧೆಗೆ ಜಾನಪದ ವಿದ್ವಾಂಸ ಡಾ. ಬಸವರಾಜ ನೆಲ್ಲಿಸರ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.       ಭದ್ರಾವತಿ :  ಪ್ರಸ್ತುತ ವೀರಗಾಸೆ ಕೇವಲ ಗಂಡು ಕಲೆಯಾಗಿ ಮಾತ್ರ ಉಳಿಯದೆ ಹೆಣ್ಣು ಮಕ್ಕಳು ಸಹ ವೀರ ಹೆಜ್ಜೆ ಹಾಕಿ ವೀರಾವೇಷದಿಂದ ನೃತ್ಯ ಮಾಡುತ್ತಾ ಬಂದಿರುವುದು ಹರ್ಷದ ಸಂಗತಿಯಾಗಿದೆ ಎಂದು ಜಾನಪದ ವಿದ್ವಾಂಸ ಡಾ. ಬಸವರಾಜ ನೆಲ್ಲಿಸರ ಹೇಳಿದರು.       ಅವರು ಬುಧವಾರ ನಗರದ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಅಂಗವಾಗಿ ೫ನೇ ದಿನ ತರಳಬಾಳು ಮಹಾಮಂಟಪದ ರಾಷ್ಟ್ರಕವಿ ಕುವೆಂಪು ಮಹಾ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವೀರಗಾಸೆ ಸ್ಪರ್ಧೆಗೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.       ಜನಪದ ಕಲೆಗಳು ಸಮೂಹದಲ್ಲಿ ಬೆಳೆದಂತಹವು. ವೀರಭದ್ರನ ಅವತಾರವನ್ನು ಬಿಂಬಿಸುವಂತಹವು. ಇಂತಹ ಕಲೆಗಳನ್ನು ಇಂದಿನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕೆಂದರು.       ತರಳಬಾಳು ಹುಣ್ಣಿಮೆ ಮಹೋತ್ಸವದ ಮಹಾಪೋಷಕರೂ, ಸಾದು ಸದ್ಧರ್ಮ ಸಮಾಜದ ರಾಜ್ಯಾಧ್ಯಕ್ಷರು ಹಾಗೂ ರೈತ ಸಂಘದ ರಾಜ್ಯಾಧ್ಯಕ್ಷರಾದ ಎಚ್.ಆರ್...

ಸಿಡಿಮದ್ದು ಪ್ರದರ್ಶನದ ವೇಳೆ ಅವಘಡದಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದ ಪ್ರಕರಣ

Image
೧೨ ಆರೋಪಿಗಳಿಗೆ ದಂಡ, ಮೃತರ ಕುಟುಂಬಕ್ಕೆ ೧ ಲಕ್ಷ, ಗಾಯಗೊಂಡಿದ್ದವರಿಗೆ ೫೦ ಸಾವಿರ ರು. ಪರಿಹಾರ  ಸಾಂದಾರ್ಭಿಕ ಚಿತ್ರ      ಭದ್ರಾವತಿ : ಕಳೆದ ೧೫ ವರ್ಷಗಳ ಹಿಂದೆ ಪಟಾಕಿ ಸಿಡಿಮದ್ದು ಪ್ರದರ್ಶನದ ವೇಳೆ ಅವಘಡ ಸಂಭವಿಸಿ ವೀಕ್ಷಿಸಲು ಬಂದಿದ್ದ ಓರ್ವ ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ೪ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ೧೨ ಆರೋಪಿಗಳಿಗೆ  ದಂಡದ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.       ಹುಡ್ಕೋ ಕಾಲೋನಿ ನಿವಾಸಿ ಅನಿಲ್ ಕುಮಾರ್ (೩೯), ಜನ್ನಾಪುರ ನಿವಾಸಿ ಹರೀಶ್(೩೬), ಕೇರಳ ಕ್ಯಾಲಿಕಟ್, ವಾದಗರ್ ನಿವಾಸಿ ರಾಜೀವ್(೪೧), ನಗರದ ತರೀಕೆರೆ ರಸ್ತೆ, ಎಂ.ಎಂ ಕಾಂಪೌಂಡ್ ನಿವಾಸಿ ಬಾಬು(೪೫), ನ್ಯೂಟೌನ್ ನಿವಾಸಿ ಬಾಲನ್ ಪಿಲೈ(೭೧) ಮೃತಪಟ್ಟಿದ್ದಾರೆ, ನ್ಯೂ ಕಾಲೋನಿ ನಿವಾಸಿ ಶಾಮಕುಮಾರ್(೩೩), ಹೊಸಮನೆ ಹನುಮಂತನಗರ ನಿವಾಸಿ ಪ್ರಭಾಕರ್(೫೦), ಮೂಲೆಕಟ್ಟೆ ನಿವಾಸಿ ರಾಧಾಕೃಷ್ಣ(೩೭), ಕಾಗದನಗರ ನಿವಾಸಿ ವಿಜಯನ್(೪೨), ಭದ್ರಾ ಕಾಲೋನಿ ನಿವಾಸಿ ರಾಜಶೇಖರ್(೪೨), ಜನ್ನಾಪುರ ರಾಜಪ್ಪ ಬಡಾವಣೆ ನಿವಾಸಿ ಪ್ರಶಾಂv(೩೮) ಮತ್ತು ಹೊಸಮನೆ ವಿಜಯನಗರ ನಿವಾಸಿ ಕುಮಾರ್(೪೦) ಅವರಿಗೆ ತಲಾ ೧೬೨೫೦ ರು. ದಂಡ ವಿಧಿಸಲಾಗಿದ್ದು, ಘಟನೆಯಲ್ಲಿ ಮೃತಪಟ್ಟಿರುವ ದಿಲೀಪ್ ಕುಟುಂಬಕ್ಕೆ ೧ ಲಕ್ಷ ರು. ಹಾಗು ಗಾಯಗೊಂಡಿದ್ದ ಆರ್. ಕಿರಣ್‌ಗೆ ೫೦ ಸಾವಿರ ರು. ಪರಿಹಾರ ನೀಡಲು ಆದೇಶಿಸಲಾಗಿದೆ.  ...

ಸರ್ಕಾರಿ ಶಾಲೆಗಳಲ್ಲಿ ಇನ್ನೂ ಹೆಚ್ಚಿನ ಗುಣಮಟ್ಟದ ಶಿಕ್ಷಣ ಲಭಿಸಿದಾಗ ದಾಖಲಾತಿ ಸಂಖ್ಯೆ ಹೆಚ್ಚಳ : ಬಿ.ಎಸ್ ಗಣೇಶ್

Image
ಭದ್ರಾವತಿ ನಗರಸಭೆ ೨೯ನೇ ವಾರ್ಡಿನ ಹೊಸ ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ `ಚಿಣ್ಣರ ಸಂಭ್ರಮೋತ್ಸವ' ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.        ಭದ್ರಾವತಿ : ಸರ್ಕಾರಿ ಶಾಲೆಗಳಲ್ಲಿ ಇನ್ನೂ ಹೆಚ್ಚಿನ ಗುಣಮಟ್ಟದ ಶಿಕ್ಷಣ ಲಭಿಸುವಂತಾಗಬೇಕು. ಆಗ ಮಾತ್ರ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಸಹ ಹೆಚ್ಚಳವಾಗಲಿದೆ. ಈ ನಿಟ್ಟಿನಲ್ಲಿ ಶಾಲೆಯ ಶಿಕ್ಷಕರು ಮತ್ತು ಶಾಲಾಭಿವೃದ್ಧಿ ಸಮಿತಿ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದು ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಹೇಳಿದರು.       ಅವರು ನಗರಸಭೆ ೨೯ನೇ ವಾರ್ಡಿನ ಹೊಸ ಸಿದ್ದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ `ಚಿಣ್ಣರ ಸಂಭ್ರಮೋತ್ಸವ' ಉದ್ಘಾಟಿಸಿ ಮಾತನಾಡಿದರು. ತಾಲೂಕಿನಲ್ಲಿ ಅತಿಹೆಚ್ಚು ೨೪೮ ಮಕ್ಕಳು ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆ ಎಂಬ ಹೆಗ್ಗಳಿಕೆಗೆ ಈ ಶಾಲೆ ಪಾತ್ರವಾಗಿರುವುದು ಹೆಮ್ಮೆಯ ವಿಚಾರವಾಗಿದೆ. ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸರ್ಕಾರದ ಹೆಚ್ಚಿನ ಒತ್ತು ನೀಡುತ್ತಿದ್ದು, ಈ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿದೆ. ಇವುಗಳನ್ನು ಸದ್ಬಳಕೆ...

ಸಾಮಾಜಿಕ, ಬೌದ್ಧಿಕ ಬೆಳವಣಿಗೆಗೆ ಸಾಹಿತ್ಯವೇ ದಾರಿ ದೀಪ : ಡಾ. ಜ್ಯೋತಿ ಶಂಕರ್

Image
ನಾಲ್ಕನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವ : ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿ ಉಪಸ್ಥಿತಿ ಶಿವಮೊಗ್ಗ ಶ್ರೀ ಮುರುಘರಾಜೇಂದ್ರ ಮಹಾಸಂಸ್ಥಾನ ಮಠ, ಆನಂದಪುರಂ, ಶ್ರೀ ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರು ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ಸಿರಿಗೆರೆ ತರಳಬಾಳು ಜಗದ್ಗುರುಗಳು ದಿವ್ಯಸಾನಿಧ್ಯವಹಿಸಿದ್ದರು.       ಭದ್ರಾವತಿ:  ನಾವು ಎಷ್ಟೇ ಎತ್ತರಕ್ಕೆ ಏರಿದರೂ ನೀತಿ ಶಿಕ್ಷಣ ಅತ್ಯಂತ ಮುಖ್ಯ. ಮನುಷ್ಯನ ಮನಸ್ಸಿನ ಸಾಮಾಜಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಾಹಿತ್ಯ ದಾರಿ ತೋರಿಸುತ್ತದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಡಾ. ಜ್ಯೋತಿ ಶಂಕರ್ ಹೇಳಿದರು.       ಅವರು ಮಂಗಳವಾರ ಸಂಜೆ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ನಾಲ್ಕನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಸಾಹಿತ್ಯ ಮತ್ತು ಶಿಕ್ಷಣ ವಿಷಯ ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.       ಬದುಕಿಗೂ ಸಾಹಿತ್ಯಕ್ಕೂ ಅವಿನಾಭಾವ ಸಂಬಂಧವಿದೆ. ನಾವು ನಮ್ಮ ನಮ್ಮ ಕಾಯಕಕ್ಕೆ ಗೌರವ ನೀಡಿಕೊಳ್ಳಬೇಕು. ಮನಸ್ಸಿನಲ್ಲಿ ಕ್ಲೇಶವನ್ನು ಇಟ್ಟುಕೊಳ್ಳಬಾರದು. ಬದುಕು ಸುಂದರವಾಗಿರಬೇಕೆಂದರೆ ನಮ್ಮ ಸುತ್ತಮುತ್ತಲಿನವರೊಂದಿಗೆ ಉತ್ತಮ ಬಾಂಧವ್ಯ ಕಾಪಾಡಿಕೊಳ್ಳಬೇಕು. ಕಲಿ...

ವಿಟಮಿನ್, ಕಬ್ಬಿಣಾಂಶ ಮಾತ್ರೆ ನುಂಗಿದ ಮಕ್ಕಳಲ್ಲಿ ಹೊಟ್ಟೆನೋವು-ವಾಂತಿ

Image
ಅರಳಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ   ಭದ್ರಾವತಿ ಅರಳಿಹಳ್ಳಿ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು-ವಾಂತಿ ಕಾಣಿಸಿಕೊಂಡ ಪರಿಣಾಮ ಸುಮಾರು ೬೦ ಮಕ್ಕಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವ ಘಟನೆ  ಮಂಗಳವಾರ ನಡೆದಿದೆ.      ಭದ್ರಾವತಿ: ಸರ್ಕಾರಿ ಶಾಲೆ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು-ವಾಂತಿ ಕಾಣಿಸಿಕೊಂಡ ಪರಿಣಾಮ ಸುಮಾರು ೬೦ ಮಕ್ಕಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವ ಘಟನೆ  ಮಂಗಳವಾರ ನಡೆದಿದೆ.      ಅರಳಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಮಧ್ಯಾಹ್ನ ಊಟದ ಬಳಿಕ ಮಕ್ಕಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಊಟದ ಬಳಿಕ ಮಕ್ಕಳಿಗೆ ಶಿಕ್ಷಕರು ವಿಟಮಿನ್ ಮತ್ತು ಕಬ್ಬಿಣಾಂಶ(ಐರನ್) ಹೊಂದಿರುವ ಮಾತ್ರೆ  ವಿತರಿಸಿದ್ದರು. ಇದನ್ನು ನುಂಗಿದ ಬಳಿಕ ಮಕ್ಕಳು ಹೊಟ್ಟೆ ನೋವು ಎಂದು ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣ ಮಕ್ಕಳನ್ನು ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗಿದೆ.       ಸರ್ಕಾರದ ಆದೇಶದಂತೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಕಬ್ಬಿಣಾಂಶ(ಐರನ್), ಫೋಲಿಕ್ ಆಸಿಡ್ ಮತ್ತು ಅಲ್ಬೆಂಡಜೋಲ್(ಜಂತುಹುಳು ನಿವಾರಕ) ಮಾತ್ರೆಗಳನ್ನು ಮಧ್ಯಾಹ್ನದ ಊಟದ ನಂತರ ವಿತರಿಸಲಾಗುತ್ತದೆ. ರಕ್ತಹ...

ಎಂ.ಬಿ ಧರಣಿದರ ಗೌಡ

Image
ಎಂ.ಬಿ ಧರಣಿದರ ಗೌಡ       ಭದ್ರಾವತಿ : ನಗರದ ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ಪೋರ್ಮನ್, ಸಿದ್ದಾಪುರ ನಿವಾಸಿ ಎಂ.ಬಿ ಧರಣಿದರ ಗೌಡ(೬೭) ಮಂಗಳವಾರ ನಿಧನ ಹೊಂದಿದರು.    ಪತ್ನಿ, ಪುತ್ರಿ ಹಾಗು ಪುತ್ರ ಇದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಇವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇವರ ಅಂತ್ಯಕ್ರಿಯೆ ಬುಧವಾರ ಸಿದ್ದಾಪುರ ರುದ್ರಭೂಮಿಯಲ್ಲಿ ನೆರವೇರಲಿದೆ. ಇವರ ನಿಧನಕ್ಕೆ ಎಂಪಿಎಂ ನಿವೃತ್ತ ನೌಕರರು, ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.   

೪ನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವ

Image
ಗಮನ ಸೆಳೆದ `ದೇಶದ ಅಭಿವೃದ್ಧಿಯಲ್ಲಿ ಕೈಗಾರಿಕೆಗಳ ಪಾತ್ರ' ಕುರಿತ ಭಾಷಣ ಸ್ಪರ್ಧೆ  ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ನಾಲ್ಕನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವದ ಬೆಳಗಿನ ಸಾಂಸ್ಕೃತಿಕ ಸ್ಪರ್ಧೆಗಳು ಕಾರ್ಯಕ್ರಮದ ಭಾಷಣ ಸ್ಪರ್ಧೆಯನ್ನು ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉದ್ಘಾಟಿಸಿದರು.        ಭದ್ರಾವತಿ:  ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ನಾಲ್ಕನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವದ ಬೆಳಗಿನ ಸಾಂಸ್ಕೃತಿಕ ಸ್ಪರ್ಧೆಗಳು ಕಾರ್ಯಕ್ರಮದ ಭಾಷಣ ಸ್ಪರ್ಧೆಯನ್ನು ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉದ್ಘಾಟಿಸಿದರು.       ರೋಟರಿ ಕ್ಲಬ್ ಸದಸ್ಯೆ ಕುಸುಮ ತೀರ್ಥಯ್ಯ, ಕಿರುತೆರೆ ನಟ, ರಂಗಕರ್ಮಿ ಅಪರಂಜಿ ಶಿವರಾಜ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. `      ದೇಶದ ಅಭಿವೃದ್ಧಿಯಲ್ಲಿ ಕೈಗಾರಿಕೆಗಳ ಪಾತ್ರ' ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಭಾಷಣ ಸ್ಪರ್ಧೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಪ್ರೌಢಶಾಲೆಗಳ ಸುಮಾರು ೫೦ ವಿದ್ಯಾರ್ಥಿಗಳು ಭಾಗವಹಿಸಿದ್ದ...

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವರ್ತನೆಗೆ ಬಿಜೆಪಿ ಯುವ ಮೋರ್ಚಾ ಖಂಡನೆ

Image
ಪ್ರತಿಭಟನೆ, ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ  ವಿಧಾನಮಂಡಲದ ವಿಶೇಷ ಅಧಿವೇಶನ ಸಂದರ್ಭದಲ್ಲಿ ರಾಜ್ಯಪಾಲರ ಕಡೆಗೆ ಕೈ ತೋರಿಸಿ ಅವಮಾನಕಾರಿ ವರ್ತನೆ ತೋರಿರುವ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಮಂಗಳವಾರ ಭದ್ರಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ತಹಶೀಲ್ದಾರ್ ಪರುಸಪ್ಪ ಕುರುಬರರವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.       ಭದ್ರಾವತಿ: ವಿಧಾನಮಂಡಲದ ವಿಶೇಷ ಅಧಿವೇಶನ ಸಂದರ್ಭದಲ್ಲಿ ರಾಜ್ಯಪಾಲರ ಕಡೆಗೆ ಕೈ ತೋರಿಸಿ ಅವಮಾನಕಾರಿ ವರ್ತನೆ ತೋರಿರುವ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ವತಿಯಿಂದ ತಹಶೀಲ್ದಾರ್ ಪರುಸಪ್ಪ ಕುರುಬರರವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.       ಭದ್ರಾವತಿ ಮತ್ತು ಹೊಳೆಹೊನ್ನೂರು ಯುವ ಮೋರ್ಚಾ ಮಂಡಲ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಬಿ.ಕೆ ಹರಿಪ್ರಸಾದ್ ವರ್ತನೆಯಿಂದ ರಾಜ್ಯದ ಜನರು ತಲೆತಗ್ಗಿಸುವಂತಾಗಿದೆ. ಹಿರಿಯ ಮುಖಂಡರಾದ ಹರಿಪ್ರಸಾದ್‌ರವರು ಇತರರಿಗೆ ಮಾದರಿಯಾಗಬೇಕು. ಪರಿಷತ್ ಗೌರವಕ್ಕೆ ಧಕ್ಕೆ ತರುವಂತೆ ನಡೆದುಕೊಳ್ಳಬಾರದು. ಇವರ ವರ್ತನೆಯನ್ನು ಯುವ ಮೋರ್ಚಾ ಖಂಡಿಸುವ ಜೊತೆಗೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ...

ತರಳಬಾಳು ಶ್ರೀಗಳಿಂದ ವೈರಾಗ್ಯ ಪ್ರಜ್ಞೆಯೊಂದಿಗೆ ಸಮಾಜ ತಿದ್ದುವ ಕಾರ್ಯ : ಸುತ್ತೂರು ಶ್ರೀ

Image
ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ಮೂರನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವದ ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದ ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರಿಗೆ ಸಿರಿಗೆರೆ ತರಳಬಾಳು ಜಗದ್ಗುರುಗಳು ಗೌರವ ಸಮರ್ಪಣೆ ಸಲ್ಲಿಸಿದರು.       ಭದ್ರಾವತಿ :  ಜನಸಾಮಾನ್ಯರಿಗೆ ಉತ್ತಮ ಆಶಯಗಳನ್ನು ನೀಡುವುದೇ ತರಳಬಾಳು ಹುಣ್ಣಿಮೆ ಮಹೋತ್ಸವದ ಉದ್ದೇಶವಾಗಿದ್ದು, ವೈರಾಗ್ಯ ಪ್ರಜ್ಞೆಯೊಂದಿಗೆ ಸಮಾಜವನ್ನು ತಿದ್ದುವ ಕಾರ್ಯ ಶ್ರೀ ಮಠದ ಜಗದ್ಗುರುಗಳಿಂದ ನಡೆಯುತ್ತಿದೆ ಎಂದು ಸುತ್ತೂರು ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು  ಹೇಳಿದರು.       ಶ್ರೀಗಳು ಸೋಮವಾರ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ಮೂರನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವದ ಸಂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.       ತರಳಬಾಳು ಮಠ ನೂರಾರು ವರ್ಷಗಳ ಇತಿಹಾಸ ಹೊಂದಿದ್ದು, ತನ್ನ ಧ್ಯೇಯೋದ್ದೇಶಗಳ ಮೂಲಕ ಜನಕಲ್ಯಾಣದ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ. ಹಿರಿಯ ಗುರುಗಳು ಸಮಾಜದಲ್ಲಿ ಆತ್ಮವಿಶ್ವಾಸ ಮೂಡಿಸುವ ಬಲಿಷ್ಠ ಬುನಾದಿ ಹಾಕಿದ್ದರಿಂದಲೇ ಇಂದಿನ ಜಗದ್ಗುರುಗಳು ನಿರಂತರವಾಗಿ ಸಮ...

ತರಳಬಾಳು ಹುಣ್ಣಿಮೆ ಮಹೋತ್ಸವ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

Image
ಭದ್ರಾವತಿಯಲ್ಲಿ ಆಯೋಜಿಸಲಾಗಿರುವ ಮೂರನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಸೋಮವಾರ ಬೆಳಗಿನ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಭದ್ರಾವತಿ: ಮೂರನೇ ದಿನದ ತರಳಬಾಳು ಹುಣ್ಣಿಮೆ ಮಹೋತ್ಸವದ ಅಂಗವಾಗಿ ಸೋಮವಾರ ಬೆಳಗಿನ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.       ಸ್ಥಳೀಯ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಒಟ್ಟು ಆರು ತಂಡಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು. ವಿಶೇಷವಾಗಿ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಕೇಳಿದ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಸಂಕೋಚವಿಲ್ಲದೆ ಸಮರ್ಪಕ ಉತ್ತರಗಳನ್ನು ನೀಡಿದ್ದು ಗಮನ ಸೆಳೆಯಿತು.      ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ತಾಲೂಕು ಅಧ್ಯಕ್ಷ ಟಿ. ತಿಮ್ಮಪ್ಪ ಸೇರಿದಂತೆ ಪರಿಷತ್ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ರಸಪ್ರಶ್ನೆ ಕಾರ್ಯಕ್ರಮವನ್ನು ಬಿ.ಎಲ್. ಮೋಹನ್ ಯಶಸ್ವಿಯಾಗಿ ನಡೆಸಿಕೊಟ್ಟರು.      ರಸಪ್ರಶ್ನೆ ಸ್ಪರ್ಧೆಯ ವಿಜೇತರು:     ...

ರಾಷ್ಟ್ರೀಯ ಹಬ್ಬಗಳನ್ನು ಮನೆಯ ಹಬ್ಬದಂತೆ ಆಚರಿಸಿ : ಸಿರಿಗೆರೆ ಶ್ರೀ

Image
ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೩ನೇ ದಿನ ಸೋಮವಾರ ಮಹಾಮಂಟಪದ ಮುಂಭಾಗದಲ್ಲಿ ೭೭ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.      ಭದ್ರಾವತಿ: ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಆಯೋಜಿಸಲಾಗಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ೩ನೇ ದಿನ ಸೋಮವಾರ ಮಹಾಮಂಟಪದ ಮುಂಭಾಗದಲ್ಲಿ ೭೭ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.      ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು.       ರಾಷ್ಟ್ರಿಯ ಹಬ್ಬಗಳನ್ನು ಕೇವಲ ಸರ್ಕಾರಿ ಕಾರ್ಯಕ್ರಮಗಳು ಎಂದು ಭಾವಿಸದೆ ಪ್ರತಿಯೊಂದು ಕುಟುಂಬವೂ ಅವುಗಳನ್ನು ಮನೆಯ ಹಬ್ಬದಂತೆ ಭಾವಿಸಿ ಆಚರಿಸಬೇಕೆಂದು ಕರೆ ನೀಡಿದರು.      ದೇಶಭಕ್ತಿ ಕೇವಲ ಭಾಷಣಕ್ಕೆ ಸೀಮಿತವಾಗಬಾರದು. ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದು, ಸಂವಿಧಾನದ ಮೌಲ್ಯಗಳನ್ನು ಅರಿತು ಬದುಕಿನಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೆಂದು ತಿಳಿಸಿ ಈ ನಿಟ್ಟಿನಲ್ಲಿ ಮಕ್ಕಳು, ಯುವಕರು ಹಾಗೂ ಹಿರಿಯರು ಸೇರಿ ಎಲ್ಲರೂ ಸ್ವಯಂಪ್ರೇರಿತವಾಗಿ ರಾಷ್ಟ್ರೀಯ ಹಬ್ಬಗಳಲ್ಲಿ ಭಾಗವಹಿಸಿ, ದೇಶದ ಏಕತೆ, ಸಮಾನತೆ ಮತ್ತು ಶ...

ಗೃಹರಕ್ಷಕದಳದವರು ತಮಗೆ ವಹಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ವಿಶ್ವಾಸ ಉಳಿಸಿಕೊಳ್ಳಿ : ಪ್ರಕಾಶ್ ರಾಥೋಡ್

Image
ಘಟಕಾಧಿಕಾರಿ ಜಗದೀಶ್ ನೇತೃತ್ವದಲ್ಲಿ ಗೃಹರಕ್ಷಕದಳ ಕಛೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ  ಭದ್ರಾವತಿ ನ್ಯೂಟೌನ್ ಗೃಹರಕ್ಷಕ ದಳ ಕಛೇರಿಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.        ಭದ್ರಾವತಿ : ಗೃಹರಕ್ಷಕ ದಳದವರು ತಮಗೆ ವಹಿಸುವ ಜವಾಬ್ದಾರಿಯನ್ನು ಇನ್ನೂ ಹೆಚ್ಚಿನ ಶಿಸ್ತು, ಬದ್ಧತೆಯಿಂದ ನಿರ್ವಹಿಸುವ ಮೂಲಕ ತಮ್ಮ ಮೇಲೆ ಹೊಂದಿರುವ ವಿಶ್ವಾಸ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಬೇಕೆಂದು ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಕರೆ ನೀಡಿದರು.       ಅವರು ನ್ಯೂಟೌನ್ ಗೃಹರಕ್ಷಕ ದಳ ಕಛೇರಿಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.       ಪೊಲೀಸರು ಮತ್ತು ಗೃಹರಕ್ಷಕ ದಳ ಇಬ್ಬರ ನಡುವೆ ಸ್ವಲ್ಪ ವ್ಯತ್ಯಾಸವಿರಬಹುದು. ಪೊಲೀಸರಿಗೆ ಸದಾ ಗೃಹರಕ್ಷಕ ದಳದ ನೆರವಿನ ಅಗತ್ಯವಿದೆ ಎಂಬುದನ್ನು ನನ್ನ ವೃತ್ತಿ ಬದುಕಿನಲ್ಲಿ ಕಂಡು ಕೊಂಡಿದ್ದೇನೆ. ಈ ಹಿನ್ನಲೆಯಲ್ಲಿ ಉಪಾಧೀಕ್ಷಕನಾಗಿ ಕರ್ತವ್ಯ ವಹಿಸಿಕೊಂಡ ನಂತರ ಪೊಲೀಸರ ಕರ್ತವ್ಯದಲ್ಲಿ ಹೆಚ್ಚಿನ ಪಾಲು ಗೃಹರಕ್ಷಕ ದಳದವರಿಗೆ ನೀಡುತ್ತಿದ್ದೇನೆ. ಕೆಲವು ಸಂದರ್ಭದಲ್ಲಿ ಗೃಹರಕ್ಷಕ ದಳದವರ...

ಗಣರಾಜ್ಯೋತ್ಸವ ನಮ್ಮ ಕರ್ತವ್ಯಗಳನ್ನು ನೆನಪಿಸುವ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ ದಿನ : ಬಿ.ಕೆ ಸಂಗಮೇಶ್ವರ

Image
ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ೭೭ನೇ ಗಣ ರಾಜ್ಯೋತ್ಸವದಲ್ಲಿ ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ ಪರುಸಪ್ಪ ಕುರುಬರ ಧ್ವಜಾರೋಹಣ ನೆರವೇರಿಸಿದರು.       ಭದ್ರಾವತಿ: ಗಣರಾಜ್ಯೋತ್ಸವ ಎಂಬುದು ಕೇವಲ ಹಬ್ಬವಲ್ಲ. ನಮ್ಮ ಕರ್ತವ್ಯಗಳನ್ನು ನೆನಪಿಸುವ ದಿನ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ ದಿನ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ ಹೇಳಿದರು.       ಅವರು ಸೋಮವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ೭೭ನೇ ಗಣ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು.  ೧೯೫೦ ಜನವರಿ ೨೬ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರು ರಚಿಸಿದ ದೇಶದ ಸಂವಿಧಾನ ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಮತ್ತು ನ್ಯಾಯ ಎಂಬ ಮಹಾನ್ ಮೌಲ್ಯಗಳನ್ನು ನೀಡಿದೆ. ಈ ಮೂಲಕ ದೇಶದ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ವಿಚಾರವನ್ನು ಸಾರ್ವಜನಿಕರಲ್ಲಿ ಅಭಿವ್ಯಕ್ತಿಗೊಳಿಸಿದ್ದೇವೆ ಎಂದರು.       ನಮ್ಮ ದೇಶದ ಸಂವಿಧಾನ ವಿಶ್ವದ ಬೃಹತ್ ಗ್ರಂಥಗಳಲ್ಲಿ ಮೊಟ್ಟ ಮೊದಲನೆಯದ್ದಾಗಿದೆ. ದೇಶದ ಪ್ರಜೆಗಳಾದ ನಾವುಗಳು ಒಬ್ಬರಿಗೊಬ್ಬ...

ಆರೋಗ್ಯವನ್ನು ವ್ಯಕ್ತಿಗತ ಸಮಸ್ಯೆಯಾಗಿ ಮಾತ್ರ ನೋಡದೆ ಸಮಾಜದ ಒಟ್ಟಾರೆ ಹೊಣೆಗಾರಿಕೆಯಾಗಿ ನೋಡಿ : ಡಾ. ಧನಂಜಯ ಸರ್ಜಿ

Image
ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಆಯೋಜಿಸಲಾಗಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ೨ನೇ ದಿನ ಭಾನುವಾರ ಸಂಜೆ ಕಾರ್ಯಕ್ರಮದಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳನ್ನು ಮಹೋತ್ಸವಕ್ಕೆ ಆಗಮಿಸಿದ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.      ಭದ್ರಾವತಿ : ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಆಯೋಜಿಸಲಾಗಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ೨ನೇ ದಿನ ಭಾನುವಾರ ಸಂಜೆ ಕಾರ್ಯಕ್ರಮದಲ್ಲಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಪಾಲ್ಗೊಂಡು ಆಶೀರ್ವಚನ ನೀಡಿದರು.       ಮಹೋತ್ಸವಕ್ಕೆ ಆಗಮಿಸಿದ ಶ್ರೀಗಳನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಂತರ ನಡೆದ ಆರೋಗ್ಯ ಮತ್ತು ಸಮಾಜ ವಿಷಯ ಕುರಿತು ಮಾತನಾಡಿದ, ವಿಧಾನ ಪರಿಷತ್ ಸದಸ್ಯ, ಮಕ್ಕಳ ತಜ್ಞ,  ಡಾ. ಧನಂಜಯ ಸರ್ಜಿ,  ಭದ್ರಾವತಿಯ ಪುಣ್ಯಭೂಮಿಯಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವವು ಕೇವಲ ಧಾರ್ಮಿಕ ಆಚರಣೆಯಲ್ಲ, ಅದು ನಮ್ಮ ಜೀವನದ ಮೌಲ್ಯ...

ನೂತನ ಡಾ. ರಾಜಕುಮಾರ್, ಡಾ. ಪುನೀತ್ ರಾಜಕುಮಾರ್ ಪ್ರತಿಮೆಗಳಿಗೆ ಗೀತೆಗಳ ಮೂಲಕ ಗೌರವ ನಮನ

Image
ಭದ್ರಾವತಿ ನಗರದ ಡಾ. ರಾಜಕುಮಾರ್ ರಸ್ತೆ(ಬಿ.ಎಚ್ ರಸ್ತೆ), ಚಾಮೇಗೌಡ ಏರಿಯಾ, ನಗರಸಭೆ ಮಾರುಕಟ್ಟೆ ಸಮೀಪ ನೂತನವಾಗಿ ನಿರ್ಮಿಸಲಾಗಿರುವ ಕರ್ನಾಟಕ ರತ್ನ, ವರನಟ ಡಾ. ರಾಜಕುಮಾರ್ ಹಾಗು ಕರ್ನಾಟಕ ರತ್ನ, ಸಮಾಜ ಸೇವಕ ಡಾ. ಪುನೀತ್ ರಾಜಕುಮಾರ್ ಅವರ ದೇವಾಲಯಕ್ಕೆ ಜನ್ನಾಪುರ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ತಂಡದ ಕಲಾವಿದರು ತೆರಳಿ ವಿಶಿಷ್ಟವಾಗಿ ಗೌರವ ನಮನ ಸಲ್ಲಿಸಿದರು.       ಭದ್ರಾವತಿ: ನಗರದ ಡಾ. ರಾಜಕುಮಾರ್ ರಸ್ತೆ(ಬಿ.ಎಚ್ ರಸ್ತೆ), ಚಾಮೇಗೌಡ ಏರಿಯಾ, ನಗರಸಭೆ ಮಾರುಕಟ್ಟೆ ಸಮೀಪ ನೂತನವಾಗಿ ನಿರ್ಮಿಸಲಾಗಿರುವ ಕರ್ನಾಟಕ ರತ್ನ, ವರನಟ ಡಾ. ರಾಜಕುಮಾರ್ ಹಾಗು ಕರ್ನಾಟಕ ರತ್ನ, ಸಮಾಜ ಸೇವಕ ಡಾ. ಪುನೀತ್ ರಾಜಕುಮಾರ್ ಅವರ ದೇವಾಲಯಕ್ಕೆ ಜನ್ನಾಪುರ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ತಂಡದ ಕಲಾವಿದರು ತೆರಳಿ ವಿಶಿಷ್ಟವಾಗಿ ಗೌರವ ನಮನ ಸಲ್ಲಿಸಿದರು.       ಕಳೆದ ಕೆಲವು ದಿನಗಳ ಹಿಂದೆ ನೂತನ ದೇವಾಲಯ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ರಾಜಕುಮಾರ್‌ರವರು ಲೋಕಾರ್ಪಣೆಗೊಳಿಸಿದ್ದರು. ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ತಂಡದ ಕಲಾವಿದರು ಡಾ. ರಾಜಕುಮಾರ್ ಮತ್ತು ಡಾ. ಪುನೀತ್ ರಾಜಕುಮಾರ್‌ರವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಈ ಇಬ್ಬರು ಮಹಾನ್ ವ್ಯಕ್ತಿಗಳು ನಾಡಿಗೆ ನೀಡಿರುವ ಕೊಡುಗೆಗಳನ್ನು ಸ್ಮರಿಸಿದರು. ಅಲ್ಲದೆ ಗೀತೆಗಳ ಮೂಲಕ ಗೌರವ ನಮನ ಸಲ್ಲಿಸಿದರು.     ...

ಮತ ಚಲಾಯಿಸಿ ಪ್ರಜಾಪ್ರಭುತ್ವ ಬಲಪಡಿಸಿ : ನ್ಯಾ. ಡಿ. ರಾಘವೇಂದ್ರ

Image
ಭದ್ರಾವತಿಯಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ತಾಲೂಕು ಕಛೇರಿ ಸಭಾಂಗಣದಲ್ಲಿ ಭಾನುವಾರ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು.       ಭದ್ರಾವತಿ : . ೧೮ ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಲು ಮುಂದಾಗಬೇಕೆಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಡಿ. ರಾಘವೇಂದ್ರ ಕರೆ ನೀಡಿದರು.       ಅವರು ಭಾನುವಾರ ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ತಾಲೂಕು ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.       ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು. ಸಮರ್ಥ ನಾಯಕರನ್ನು ಆಯ್ಕೆ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು. ಈ ನಿಟ್ಟಿನಲ್ಲಿ ನಮ್ಮೆಲ್ಲರ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದರು.       ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿಯಾದ ಪ್ರಧಾನ ಸಿವಿಲ್ ನ್ಯಾಯಾಧೀಶ ವಿ. ರವಿಕುಮಾರ್, ಮತದಾನ ಪ್ರತಿಜ್ಞಾವಿಧಿ ಭೋದಿಸಿದರು.       ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು. ತಾಲೂಕು ದಂಡಾಧಿಕಾರಿ ತ...

ತರಳಬಾಳು ಹುಣ್ಣಿಮೆ ಮಹೋತ್ಸವ : ಕಬಡ್ಡಿ ಪಂದ್ಯಾವಳಿ, ಭಜನಾ ಸ್ಪರ್ಧೆಗಳಿಗೆ ಚಾಲನೆ

Image
ಚರಿತ್ರೆ, ಪುರಾಣಗಳಲ್ಲಿ ಭಜನೆ ಪಾತ್ರ ಮಹತ್ವದ್ದಾಗಿದೆ : ಟಿ.ಎಂ ಭಾಸ್ಕರ್  ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಆಯೋಜಿಸಲಾಗಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ೨ನೇ ದಿನ ಭಾನುವಾರ ಕಬಡ್ಡಿ ಪಂದ್ಯಾವಳಿ ಹಾಗು ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸ್ಪರ್ಧೆ ಆಯೋಜಿಸಲಾಗಿತ್ತು.  ಭದ್ರಾವತಿ : ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಆಯೋಜಿಸಲಾಗಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ೨ನೇ ದಿನ ಭಾನುವಾರ ಕಬಡ್ಡಿ ಪಂದ್ಯಾವಳಿ ಹಾಗು ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸ್ಪರ್ಧೆ ಆಯೋಜಿಸಲಾಗಿತ್ತು.       ನಗರದ ಅಂತರಾಷ್ಟ್ರೀಯ ಹಿರಿಯ ಕಬಡ್ಡಿ ಆಟಗಾರರಾದ ಕೃಷ್ಣೇಗೌಡ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿದರು. ರಾಜ್ಯದ ವಿವಿಧೆಡೆಗಳಿಂದ ಸುಮಾರು ೧೦ ಕಬಡ್ಡಿ ತಂಡಗಳು ಭಾಗವಹಿಸಿದ್ದವು. ಶ್ರೀ ಮಠದ ಶಿಕ್ಷಣ ಸಂಸ್ಥೆಗಳ ಹಾಗು ನಗರದ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು. ಕ್ರೀಡಾ ಸಮಿತಿ ಸಂಚಾಲಕರಾದ ಎಂ.ಎಸ್ ರವಿ ಹಾಗು ಬಿ. ಮೂರ್ತಿ ನೇತೃತ್ವದಲ್ಲಿ ಕಬಡ್ಡಿ ಕ್ರೀಡೆ ಜರುಗಿತು.      ಚರಿತ್ರೆ, ಪುರಾಣಗಳಲ್ಲಿ ...

ಸಿರಿಗೆರೆ ಮಠದಿಂದ ಧಾರ್ಮಿಕ, ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ : ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ

Image
ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ಮೊದಲ ದಿನದ ಕಾರ್ಯಕ್ರಮ ನಾಡಗೀತೆಯೊಂದಿಗೆ ಆರಂಭಿಸಲಾಯಿತು.       ಭದ್ರಾವತಿ: ಸಿರಿಗೆರೆ ಮಠವು ಧಾರ್ಮಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ನಾಡಿಗೆ ತನ್ನದೇ ಆದ ಮಹತ್ವದ ಕೊಡುಗೆ ನೀಡಿದೆ. ಅಲ್ಲದೆ ರೈತರ ನೆರವಿಗೆ ಮುಂದಾಗಿ ಹಲವು ಯೋಜನೆ ಜಾರಿಗೊಳಿಸಿದೆ ಎಂದು ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಹೇಳಿದರು.      ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ಮೊದಲ ದಿನದ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು.      ರೈತರಿಗೆ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಹಲವು ಯೋಜನೆಗಳನ್ನು ಶ್ರೀಮಠದಿಂದ ಕೈಗೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿಗಳು ಬಜೆಟ್ ಮಂಡನೆ ವೇಳೆ ಮಠಮಾನ್ಯಗಳಿಗೆ ಅನುದಾನ ನೀಡುವ ಬದಲು ಸಿರಿಗೆರೆ ಸುತ್ತಮುತ್ತಲಿನ ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ ಅದ...

ಶ್ರೀಘದಲ್ಲೇ ವಿಐಎಸ್‌ಎಲ್ ಕಾರ್ಖಾನೆ ಪುನಶ್ಚೇತನ : ಎಚ್. ಡಿ ಕುಮಾರಸ್ವಾಮಿ

Image
ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ  ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಪಾಲ್ಗೊಂಡಿದ್ದರು.       ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಶ್ರೀಘದಲ್ಲೇ ಪುನಶ್ಚೇತನಗೊಳ್ಳಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.      ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.      ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಮತ್ತು ಮೈಸೂರು ಮಹಾರಾಜರ ಪರಿಶ್ರಮದ ಫಲವಾಗಿ ಸ್ಥಾಪನೆಗೊಂಡಿರುವ ವಿಐಎಸ್‌ಎಲ್ ಕಾರ್ಖಾನ ಪುನಶ್ಚೇತನಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ. ಈಗಾಗಲೇ ಈ ಸಂಬಂಧ ಮೂರು ಬಾರಿ ಕಾರ್ಖಾನೆಗೆ ಭೇಟಿ ನೀಡಿ ಚರ್ಚಿಸಲಾಗಿದೆ. ಕಾರ್ಖಾನೆಗೆ ಮೊದಲ ಹಂತದಲ್ಲಿ ೫ ಸಾವಿರ ರು. ಕೋಟಿ ಬಂಡವಾಳ ತೊಡಗಿಸಲಾಗುವುದು. ಮುಂದಿನ ಎ...

ತರಳಬಾಳು ಹುಣ್ಣಿಮೆ ಮಹೋತ್ಸವದ ಮೊದಲ ದಿನ ಕಾರ್ಯಕ್ರಮ ತರಳಬಾಳು ಶ್ರೀಗಳ ದಿವ್ಯಸಾನಿಧ್ಯ

Image
ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ಮೊದಲ ದಿನದ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಮಾತನಾಡಿದರು.      ಭದ್ರಾವತಿ : ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದ ಮೊದಲ ದಿನದ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಶ್ರೀ ತರಳಬಾಳು ಜಗದ್ಗುರು ಶ್ರೀ ೧೧೦೮ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಮಾತನಾಡಿದರು.       ವೇದಿಕೆಯಲ್ಲಿ ಉಡುಪಿ ಪುತ್ತಿಗೆ ಮಠ,  ಶ್ರೀಮನ್ನಧ್ವಾಚಾರ್ಯ ಮೂಲಮಹಾಸಂಸ್ಥಾನ ಶ್ರೀಮದುಪೇಂದ್ರತೀರ್ಥ ಪೀಠದ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು, ಕೇಂದ್ರ ಬೃಹತ್ ಕೈಗಾರಿಕೆ ಹಾಗು ಉಕ್ಕು ಖಾತೆ ಸಚಿವ ಎಚ್.ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದರಾದ ಬಿ.ವೈ ರಾಘವೇಂದ್ರ, ಗೋವಿಂದ ಕಾರಜೋಳ, ಶಾಸಕ ಬಿ.ಕೆ ಸಂಗಮೇಶ್ವರ್, ಶ್ರೀಮತ್ ಸಾಧು ಸದ್ಧರ್ಮ ವೀರಶೈವ ಸಂಘ, ಸಿರಿಗೆರೆ ಅಧ್ಯಕ್ಷ ಎ...

ತರಳಬಾಳು ಹುಣ್ಣಿಮೆ ಮಹೋತ್ಸವ : ಬೃಹತ್ ಮೇಳ, ತಿಂಡಿ ತಿನಿಸುಗಳ ಮಳಿಗೆ, ಬಣ್ಣ ಬಣ್ಣದ ರಂಗೋಲಿ

Image
ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಕ್ತರು ಬೃಹತ್ ಮೇಳದಲ್ಲಿ ತೆರೆಯಲಾಗಿರುವ ಕೃಷಿ ಉಪಕರಣಗಳ ಪ್ರದರ್ಶನವನ್ನು ವೀಕ್ಷಿಸುತ್ತಿರುವುದು     ಭದ್ರಾವತಿ : ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ರಾಜ್ಯದ ವಿವಿಧೆಡೆಗಳಿಂದ ಭಕ್ತರ ದಂಡು ಹರಿದು ಬರುತ್ತಿದ್ದು, ಮತ್ತೊಂದೆಡೆ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ.      ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್ ಆವರಣದಲ್ಲಿ ಶನಿವಾರದಿಂದ ಆರಂಭಗೊಂಡಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ತೆರೆಯಲಾಗಿರುವ ಬಗೆ ಬಗೆಯ ತಿಂಡಿ ತಿನಿಸುಗಳ ಮಳಿಗೆಗಳು.      ಹೆಲಿಪ್ಯಾಡ್ ಆವರಣದ ಸುತ್ತಮುತ್ತಲೂ ಭಕ್ತರ ದಂಡು ಒಂದೆಡೆಯಾದರೆ, ಮತ್ತೊಂದೆಡೆ ಬಗೆ ಬಗೆಯ ತಿಂಡಿ ತಿನಿಸುಗಳ ಮಳಿಗೆಗಳು, ಇನ್ನೊಂದೆಡೆ ಕೃಷಿ ಉಪಕರಣಗಳು, ಆರೋಗ್ಯ ಕ್ಷೇತ್ರದ ವಿವಿಧ ಸೇವೆಗಳನೊಳಗೊಂಡ...

ಜ.೨೬ರಂದು ತಾಲೂಕು ಆಡಳಿತದಿಂದ ಗಣರಾಜ್ಯೋತ್ಸವ

Image
     ಭದ್ರಾವತಿ : ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜ.೨೬ರಂದು ಹಳೇನಗರದ ಕನಕಮಂಟಪ ಮೈದಾನದಲ್ಲಿ ಬೆಳಿಗ್ಗೆ ೯ ಗಂಟೆಗೆ ಗಣ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ.       ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯನಾಯ್ಕ ಕಾರ್ಯಕ್ರಮ ಉದ್ಘಾಟಿಸುವರು. ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಪರುಸಪ್ಪ ಕುರುಬರ ಧ್ವಜಾರೋಹಣ ನೆರವೇರಿಸುವರು.       ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ, ಸಂಸದ ಬಿ.ವೈ ರಾಘವೇಂದ್ರ ಹಾಗು ಜಿಲ್ಲೆಯ ಎಲ್ಲಾ ವಿಧಾನ ಪರಿಷತ್ ಸದಸ್ಯರು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸರ್ಕಾರದ ೫ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 

ಸೂಡಾ ನೂತನ ಸದಸ್ಯರಾಗಿ ಪ್ರಾನ್ಸಿಸ್, ಅರುಣಕುಮಾರಿ : ಉತ್ತಮವಾಗಿ ಕಾರ್ಯನಿರ್ವಹಿಸಿ

Image
ಗೃಹ ಕಛೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದ ಶಾಸಕ ಬಿ.ಕೆ ಸಂಗಮೇಶ್ವರ್  ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಸದಸ್ಯರಾಗಿ ಸರ್ಕಾರದಿಂದ ನಾಮನಿರ್ದೇಶನಗೊಂಡಿರುವ ಪ್ರಾನ್ಸಿಸ್ ಮತ್ತು ಅರುಣಕುಮಾರಿ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ತಮ್ಮ ಗೃಹ ಕಛೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.       ಭದ್ರಾವತಿ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ರಾಜ್ಯ ಸರ್ಕಾರ ಇಬ್ಬರು ನೂತನ ಸದಸ್ಯರನ್ನು ವಿಧಾನಸಭಾ ಕ್ಷೇತ್ರದಿಂದ ನಾಮನಿರ್ದೇಶನಗೊಳಿಸಿದ್ದು, ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಅಧಿಸೂಚನೆ ಹೊರಡಿಸಿದ್ದಾರೆ.       ನಗರಸಭೆ ವ್ಯಾಪ್ತಿಯ ನ್ಯೂಕಾಲೋನಿ, ಬೆಣ್ಣೆ ಸರ್ಕಲ್, ಶ್ರೀ ರಾಮೇಶ್ವರ ದೇವಸ್ಥಾನ ಸಮೀಪದ ನಿವಾಸಿ, ನಗರಸಭೆ ಮಾಜಿ ಸದಸ್ಯ ಪ್ರಾನ್ಸಿಸ್ ಹಾಗು ಹಳೇನಗರದ ದೊಡ್ಡ ಕುರುಬರ ಬೀದಿ ನಿವಾಸಿ ಕೇಸರಿಪಡೆ ಬಿ.ಆರ್ ಗಿರೀಶ್‌ರವರ ಪತ್ನಿ ಅರುಣಕುಮಾರಿ ಅವರನ್ನು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೂತನ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಲಾಗಿದೆ.       ನೂತನ ನಾಮನಿರ್ದೇಶನ ಸದಸ್ಯರನ್ನು ತಮ್ಮ ಗೃಹ ಕಛೇರಿಯಲ್ಲಿ ಸನ್ಮಾನಿಸಿ ಅಭಿನಂದಿಸುವ ಜೊತೆಗೆ ಜನರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ಮೂಲಕ ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕೆಂದರು....

ದೇವಸ್ಥಾನದ ಆಭರಣ, ಹುಂಡಿ ಹಣ ಕಳ್ಳತನ ಪ್ರಕರಣ : ಇಬ್ಬರ ಸೆರೆ

Image
ದೇವರ ಆಭರಣ ಹಾಗೂ ಹುಂಡಿ ಕಾಣಿಕೆ ಹಣ ಮತ್ತು ದೇವಸ್ಥಾನದ ಇನ್ನಿತರ ಸ್ವತ್ತು ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.      ಭದ್ರಾವತಿ:  ದೇವರ ಆಭರಣ ಹಾಗೂ ಹುಂಡಿ ಕಾಣಿಕೆ ಹಣ ಮತ್ತು ದೇವಸ್ಥಾನದ ಇನ್ನಿತರ ಸ್ವತ್ತು ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.       ತಾಲೂಕಿನ ದೊಣಬಘಟ್ಟ ನಿವಾಸಿ ವೆಂಕಟೇಶ ಅಲಿಯಾಸ್ ಕೆಮ್ಮಣ್ಣುಗುಂಡಿ(೫೮)  ಮತ್ತು ಪರಶುರಾಮ(೨೦) ಈ ಇಬ್ಬರನ್ನು ಜ. ೨೧ರಂದು ಬಂಧಿಸಲಾಗಿದೆ. ಇವರಿಂದ ಅಂದಾಜು ೧೩,೦೦೦ ರು. ಮೌಲ್ಯದ ೧ ಗ್ರಾಂ ೩ ಮಿಲಿ ತೂಕದ ಬಂಗಾರದ ತಾಳಿ, ೮೧೬೦ ರು. ನಗದು ಹಣ ಹಾಗೂ ೬೦೦೦ ರು. ಮೌಲ್ಯದ ಡಿವಿಆರ್ ಬಾಕ್ಸ್ ವಶಕ್ಕೆ ಪಡೆಯಲಾಗಿದೆ.     ಘಟನೆ ವಿವರ : ಭದ್ರ ಕಾಲೋನಿಯಲ್ಲಿರುವ ಶ್ರೀ ರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಜ.೧೪ರ ಸಂಕ್ರಾಂತಿ ಹಬ್ಬದಂದು ಕಳ್ಳತನವಾಗಿದ್ದು, ದೇವಸ್ಥಾನದ ಅರ್ಚಕರಾದ  ಸೀತಾರಾಮ ಭಟ್ಟರು ದೇವಸ್ಥಾನದಲ್ಲಿ ಪೂಜೆ ಮುಗಿಸಿ ರಾತ್ರಿ ೮ ಗಂಟೆಗೆ  ಬಾಗಿಲು ಹಾಕಿಕೊಂಡು ಮನೆಗೆ ಹೋಗಿದ್ದು, ಮರುದಿನ ಬಾಗಿಲು ತೆಗೆಯಲು ಹೋದಾಗ ದೇವಸ್ಥಾನದ ಬೀಗ ಒಡೆದು ದೇವರ ಮೂರ್...

ತರಳಬಾಳು ಹುಣ್ಣಿಮೆ ಮಹೋತ್ಸವ ಸಾಂಸ್ಕೃತಿಕ-ಆಧ್ಯಾತ್ಮಿಕ ಪರಂಪರೆಗೆ ಶಕ್ತಿ : ಬಿ.ವೈ ರಾಘವೇಂದ್ರ

Image
ಭದ್ರಾವತಿ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಜ.೨೪ರಿಂದ ಆರಂಭಗೊಳ್ಳಲಿರುವ ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ ತರಳಬಾಳು ಹುಣ್ಣಿಮೆ ಮಹೋತ್ಸವ ಸಿದ್ದತಾ ಕಾರ್ಯಗಳನ್ನು ಸಂಸದ ಬಿ.ವೈ ರಾಘವೇಂದ್ರ ಶುಕ್ರವಾರ ಪರಿಶೀಲನೆ ನಡೆಸಿದರು.        ಭದ್ರಾವತಿ :  ಶ್ರೀಮದುಜ್ಜಯಿನಿಸದ್ದರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ. ತರಳಬಾಳು ಹುಣ್ಣಿಮೆ ಮಹೋತ್ಸವ ಈ ರಾಜ್ಯದ ಸಾಂಸ್ಕೃತಿಕ ಹಾಗು ಆಧ್ಯಾತ್ಮಿಕ ಪರಂಪರೆಗೆ ಶಕ್ತಿ ತುಂಬವ ಕಾರ್ಯಕ್ರಮವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.       ಅವರು ಶುಕ್ರವಾರ ನಗರದ ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಜ.೨೪ರಿಂದ ಆರಂಭಗೊಳ್ಳಲಿರುವ ಹುಣ್ಣಿಮೆ ಮಹೋತ್ಸವದ ಸಿದ್ದತಾ ಕಾರ್ಯಗಳನ್ನು ಪರಿಶೀಲನೆ ನಡೆಸಿದರು.        ೩೫ ವರ್ಷಗಳ ನಂತರ ಭದ್ರಾವತಿಯಲ್ಲಿ ಮತ್ತೊಮ್ಮೆ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಿಸಲು ತರಳಬಾಳು ಜಗದ್ಗುರುಗಳು ಸಮಾಜದ ಬಾಂಧವರಿಗೆ ಒಳ್ಳೆಯ ಅವಕಾಶ ಮಾಡಿಕೊಟ್ಟಿದ್ದು, ಎಲ್ಲೆಡೆ ಹಬ್ಬದ ವಾತಾವರಣ ಸೃಷ್ಟಿಯಾಗಿದೆ ಎಂದರು.    ಮಹೋತ್ಸವದಲ್ಲಿ ಕುಸ್ತಿ, ಕಬಡ್ಡಿ ಸೇರಿದಂತೆ ವಿವಿಧ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಚಿಂತನಾ ಗೋಷ್ಠಿಗಳು ೯ ದ...

ಕಾಮ್ರೇಡ್ ಡಿ.ಸಿ ಮಾಯಣ್ಣ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ : ಪ್ರೊ. ಎಂ. ಚಂದ್ರಶೇಖರಯ್ಯ

Image
ಭದ್ರಾವತಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೂತನ ಅಧ್ಯಕ್ಷ ಪ್ರೊ. ಎಂ. ಚಂದ್ರಶೇಖರಯ್ಯ ಮಾತನಾಡಿದರು.       ಭದ್ರಾವತಿ : ಕ್ಷೇತ್ರದ ಜನ ಎಂದಿಗೂ ಮರೆಯಲಾಗದ ಹಾಗು ಸರಳ ಬದುಕಿನ ಮೂಲಕ ಮಾದರಿಯಾಗಿರುವ ಕಾರ್ಮಿಕ ಹೋರಾಟಗಾರರಾದ ದಿವಂಗತ ಕಾಮ್ರೇಡ್ ಡಿ.ಸಿ ಮಾಯಣ್ಣನವರ ಹೆಸರು ಚಿರಸ್ಥಾಯಿ ಉಳಿಸುವ ನಿಟ್ಟಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಶ್ರಮಿಸುತ್ತದೆ ಎಂದು ಒಕ್ಕೂಟದ ನೂತನ ಅಧ್ಯಕ್ಷ, ನಿವೃತ್ತ ಉಪನ್ಯಾಸಕ ಪ್ರೊ. ಎಂ. ಚಂದ್ರಶೇಖರಯ್ಯ ತಿಳಿಸಿದರು.       ಶುಕ್ರವಾರ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಗೋಷ್ಠಿಯಲ್ಲಿ ಮಾತನಾಡಿ, ಡಿ.ಸಿ ಮಾಯಣ್ಣನವರ ನೆನಪು ಸದಾ ಕಾಲ ಉಳಿಯಲಿದೆ. ಅವರ ಹೋರಾಟ ನಮ್ಮೆಲ್ಲರಿಗೂ ಮಾರ್ಗದರ್ಶನವಾಗಿದ್ದು, ಒಬ್ಬ ಸಾಮಾನ್ಯ ಕಾರ್ಮಿಕನಾಗಿ ಬದುಕು ಆರಂಭಿಸಿದ ಮಾಯಣ್ಣನವರು ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಮಿಕರ ಹಲವಾರು ಹೋರಾಟಗಳಿಗೆ ಬೆನ್ನೆಲುಬಾಗಿದ್ದರು ಎಂದರು.       ಕೇವಲ ಕಾರ್ಮಿಕ ಹೋರಾಟಗಳು ಮಾತ್ರವಲ್ಲ ಎಲ್ಲಾ ರೀತಿಯ ಹೋರಾಟಗಳಲ್ಲೂ ಡಿ.ಸಿ ಮಾಯಣ್ಣ ಮುಂಚೂಣಿಯಲ್ಲಿದ್ದರು ಎಂಬುದು ವಿಶೇಷವಾಗಿದೆ. ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವವಹಿಸಿಕೊಂಡು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿದ್ದರು. ಅವರ ನೆನಪು ಸದಾ ಕಾಲ ಉಳಿಯುವಂತಾಗಬೇಕು. ಈ ನಿಟ್ಟಿನಲ್ಲಿ ಫೆ. ...

ಪತಿ, ಮಾವನ ದೇವಾಲಯ ಲೋಕಾರ್ಪಣೆಗೊಳಿಸಿದ ಅಶ್ವಿನಿ ಪುನೀತ್ ರಾಜಕುಮಾರ್

Image
ಕರ್ನಾಟಕ ರತ್ನ, ಚಲನಚಿತ್ರ ನಟ, ಸಮಾಜ ಸೇವಕ ದಿವಂಗತ ಪುನೀತ್ ರಾಜಕುಮಾರ್‌ರವರ ಪತ್ನಿ ಅಶ್ವಿನಿ ರಾಜಕುಮಾರ್‌ರವರು ಗುರುವಾರ ಭದ್ರಾವತಿ ನಗರದ ಬಿ.ಎಚ್ ರಸ್ತೆ. ಚಾಮೇಗೌಡ ಏರಿಯಾ, ನಗರಸಭೆ ಮಾರುಕಟ್ಟೆ ಸಮೀಪ ಅಭಿಮಾನಿಗಳಿಂದ ನೂತನವಾಗಿ ನಿರ್ಮಿಸಿರುವ ವರನಟ, ಕರ್ನಾಟಕ ರತ್ನ ಡಾ. ರಾಜಕುಮಾರ್ ಹಾಗು ಕರ್ನಾಟಕ ರತ್ನ ಪುನೀತ್ ರಾಜಕುಮಾರ್‌ರವರ ದೇವಾಲಯ ಹಾಗು ಕಂಚಿನ ಪ್ರತಿಮೆಗಳನ್ನು ಲೋಕಾರ್ಪಣೆಗೊಳಿಸಿದರು.       ಭದ್ರಾವತಿ : ಕರ್ನಾಟಕ ರತ್ನ, ಚಲನಚಿತ್ರ ನಟ, ಸಮಾಜ ಸೇವಕ ದಿವಂಗತ ಪುನೀತ್ ರಾಜಕುಮಾರ್‌ರವರ ಪತ್ನಿ ಅಶ್ವಿನಿ ರಾಜಕುಮಾರ್‌ರವರು ಗುರುವಾರ ನಗರದ ಬಿ.ಎಚ್ ರಸ್ತೆ. ಚಾಮೇಗೌಡ ಏರಿಯಾ, ನಗರಸಭೆ ಮಾರುಕಟ್ಟೆ ಸಮೀಪ ಅಭಿಮಾನಿಗಳಿಂದ ನೂತನವಾಗಿ ನಿರ್ಮಿಸಿರುವ ವರನಟ, ಕರ್ನಾಟಕ ರತ್ನ ಡಾ. ರಾಜಕುಮಾರ್ ಹಾಗು ಕರ್ನಾಟಕ ರತ್ನ ಪುನೀತ್ ರಾಜಕುಮಾರ್‌ರವರ ದೇವಾಲಯ ಹಾಗು ಕಂಚಿನ ಪ್ರತಿಮೆಗಳನ್ನು ಲೋಕಾರ್ಪಣೆಗೊಳಿಸಿದರು.       ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಡಾ. ರಾಜಕುಮಾರ್ ಹಾಗು ಡಾ. ಪುನೀತ್ ರಾಜಕುಮಾರ್ ಅವರು ಈ ನಾಡಿಗೆ ಸಲ್ಲಿಸಿರುವ ಸೇವೆಯನ್ನು ಯಾರು ಸಹ ಮರೆಯಲು ಸಾಧ್ಯವಿಲ್ಲ. ಇವರಿಬ್ಬರ ಬದುಕು ಪ್ರತಿಯೊಬ್ಬರಿಗೂ ಆದರ್ಶವಾಗಿದ್ದು, ನಗರದಲ್ಲಿ ಅಭಿಮಾನಿಗಳು ಇವರಿಬ್ಬರ ಹೆಸರಿನ ದೇವಾಲಯ ನಿರ್ಮಿಸಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ. ಈ ದೇವ...