ವಿಜೃಂಭಣೆಯಿಂದ ಜರುಗಿದ ತರಳಬಾಳು ಹುಣ್ಣಿಮೆ ಮಹೋತ್ಸವದ ಮೆರವಣಿಗೆ : ಮೆರಗು ತಂದ ಕಲಾತಂಡಗಳು
ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವದ ಮೆರೆವಣಿಗೆಯಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಬೆಳ್ಳಿ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಿತು. ಭದ್ರಾವತಿ: ಸಿರಿಗೆರೆಯ ತರಳಬಾಳು ಬೃಹನ್ಮಠದ ಭಾವೈಕ್ಯತಾ ಹಬ್ಬವಾದ ಜರುಗಿದ ತರಳಬಾಳು ಹುಣ್ಣಿಮೆ ಮಹೋತ್ಸವದ ಪ್ರಯುಕ್ತ ತೆರೆದ ವಾಹನದಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರ ಬೆಳ್ಳಿಪಲ್ಲಕ್ಕಿ ಉತ್ಸವವು ತೆರೆದ ವಾಹನದಲ್ಲಿ ಶ್ರೀಮಠದ ಸಕಲಬಿರುದಾವಳಿಗಳೊಂದಿಗೆ ಭಾನುವಾರ ನಗರದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಜರುಗಿತು. ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವವು ಮಧ್ಯಾಹ್ನ ೨.೩೦ ಗಂಟೆಗೆ ಚನ್ನಗಿರಿ ರಸ್ತೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂ.ಸಿ) ಮುಂಭಾಗದಿಂದ ಆರಂಭಗೊಂಡು ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಡಾ.ರಾಜಕುಮಾರ್ ರಸ್ತೆ ಮೂಲಕ ಹಾಲಪ್ಪ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಕೆ.ಎಸ್.ಆರ್.ಟಿ.ಸಿ ಮುಖ್ಯ ಬಸ್ ನಿಲ್ದಾಣ, ರಿಲಯನ್ಸ್ ಪೆಟ್ರೋಲ್ ಬಂಕ್ ಮೂಲಕ ಸಾಗಿ ರಾಷ್ಟ್ರಕವಿ ಕುವೆಂಪು ಮಹಾವೇದಿಕೆಯ ಬಳಿ ಸಾಗಿತು. ಪ್ರತಿವರ್ಷದ ಶ್ರೀಮಠದ ಸಂಪ್ರದಾಯದಂತೆ ತರಳಬಾಳು ಹುಣ್ಣಿಮೆ ಉತ್ಸವದಲ್ಲಿ ಶ್ರೀಮಠದ ವಿದ್ಯಾರ್ಥಿಗಳು ಶಿವಧ್ವಜ ಹಿಡಿದು, ಮಹಿಳೆಯರು ಬಣ್ಣದ ಸೀರೆಯನ್ನುಟ್ಟು ಕುಂಭ ಕಳಸಗಳನ್ನು ಹೊತ್ತು ಹಾಗು ಸಹಸ್ರಾರು ಭಕ್ತರು ಡೊಳ್ಳುಕುಣ...