ವಿಐಎಸ್‌ಎಲ್ ಅಭಿವೃದ್ಧಿಗೆ ಸಮಗ್ರ ಯೋಜನಾ ವರದಿ ಮಾಹಿತಿ ನೀಡಿ : ಸಿರಿಗೆರೆ ಶ್ರೀ
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚಿಸುವ ಭರವಸೆ ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಗೊಳಿಸುವ ಸಂಬಂಧ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಕಾರ್ಖಾನೆಯ ಅಧಿಕಾರಿಗಳು ಹಾಗು ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸಿದರು. ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಅಭಿವೃದ್ಧಿಗೊಳಿಸುವ ಸಂಬಂಧ ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಕಾರ್ಖಾನೆಯ ಅಧಿಕಾರಿಗಳು ಹಾಗು ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸಿದರು. ಹುಡ್ಕೋ ಕಾಲೋನಿ ವಿಐಎಸ್‌ಎಲ್ ಹೆಲಿಪ್ಯಾಡ್‌ನಲ್ಲಿ ಜ.೨೪ ರಿಂದ ಫೆ.೧ರವರೆಗೆ ಆಯೋಜಿಸಲಾಗಿದ್ದ ಶ್ರೀ ಮಠದ ಭಾವೈಕ್ಯತಾ ಹಬ್ಬವಾದ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಆಗಮಿಸಿದ್ದ ಶ್ರೀಗಳು ಬಾಳೆಮಾರನಹಳ್ಳಿಯಲ್ಲಿ ವಾಸ್ತವ್ಯ ಹೂಡಿದ್ದು, ವಿಐಎಸ್‌ಎಲ್ ಕಾರ್ಖಾನೆ ಅಭಿವೃದ್ಧಿಗೊಳಿಸಲು ಸಾಧ್ಯವಿರುವ ರೂಪುರೇಷೆಗಳ ಕುರಿತ ಯೋಜನಾ ವರದಿಯ ಸಮಗ್ರ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿ, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಈ ಸಂಬಂಧ ಚರ್ಚಿಸುವುದಾಗಿ ಭರವಸೆ ...