ಉಕ್ಕಿನ ನಗರದಲ್ಲಿ ಕಣ್ಮನ ಸೆಳೆದ `ಪ್ರೇಮ ಪ್ರವಾಹಿನಿ ರಥಯಾತ್ರೆ'
ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಜನ್ಮಶತಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ದೇಶದಾದ್ಯಂತ ಸಂಚರಿಸುತ್ತಿರುವ `ಪ್ರೇಮ ಪ್ರವಾಹಿನಿ ರಥಯಾತ್ರೆ'ಯು ಶನಿವಾರ ಭದ್ರಾವತಿ ನಗರಕ್ಕೆ ಆಗಮಿಸಿತು. ರಥಯಾತ್ರೆಯಲ್ಲಿ ವಿವಿಧ ಕಲಾತಂಡಗಳು, ಸ್ತಬ್ಧಚಿತ್ರಗಳು, ಶಾಲಾ ಮಕ್ಕಳು, ಭಕ್ತರು ಸೇರಿದಂತೆ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಭದ್ರಾವತಿ : ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಜನ್ಮಶತಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ದೇಶದಾದ್ಯಂತ ಸಂಚರಿಸುತ್ತಿರುವ `ಪ್ರೇಮ ಪ್ರವಾಹಿನಿ ರಥಯಾತ್ರೆ'ಯು ಶನಿವಾರ ನಗರಕ್ಕೆ ಆಗಮಿಸಿತು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಸೇರಿದಂತೆ ಇನ್ನಿತರರು ಅದ್ದೂರಿಯಾಗಿ ಸ್ವಾಗತಿಸಿದರು. ರಥಯಾತ್ರೆ ಬೆಳಿಗ್ಗೆ ಹಳೇನಗರದ ಕನಕಮಂಟಪದಿಂದ ಪ್ರಾರಂಭಗೊಂಡು ಡಾ. ಪುನೀತ್ ರಾಜಕುಮಾರ್ ರಸ್ತೆ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಡಾ. ರಾಜಕುಮಾರ್ ರಸ್ತೆ, ಹಾಲಪ್ಪ ವೃತ್ತ, ಡಾ. ಬಿ.ಆರ್ ಅಂಬೇಡ್ಕರ್ ವೃತ್ತ ಮೂಲಕ ವಿಐಎಸ್‌ಎಲ್ ಡಬ್ಬಲ್ ರಸ್ತೆ ಮೂಲಕ ಮಧ್ಯಾಹ್ನ ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾಕ್ಷೇತ್ರಕ್ಕೆ ತಲುಪಿತು. ಬೃಹತ್ ರಥಯಾತ್ರೆಯಲ್ಲಿ ಡೊಳ್ಳು ಮತ್ತು ವೀರಗಾಸೆ ಹ...