ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸಿ
ಹೆಣ್ಣು ಮಕ್ಕಳ ಮತ್ತು ಮಹಿಳೆಯರ ರಕ್ಷಣೆ ಹಾಗೂ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಮತ್ತು ನಗರ ವ್ಯಾಪ್ತಿಯ ಸ್ತ್ರೀಬಂಧು ಒಕ್ಕೂಟಗಳಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಭದ್ರಾವತಿ: ಹೆಣ್ಣು ಮಕ್ಕಳ ಮತ್ತು ಮಹಿಳೆಯರ ರಕ್ಷಣೆ ಹಾಗೂ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪಿಗಳಿಗೆ ಜಾಮೀನು ನೀಡದೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಗ್ರಾಮ ಪಂಚಾಯಿತಿ ಮತ್ತು ನಗರ ವ್ಯಾಪ್ತಿಯ ಸ್ತ್ರೀಬಂಧು ಒಕ್ಕೂಟಗಳಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಪ್ರತಿಭಟನೆ ನೇತೃತ್ವವಹಿಸಿದ್ದ ಪ್ರಮುಖರು ಮಾತನಾಡಿ, ತಾಲೂಕಿನಲ್ಲಿ ಸ್ತ್ರೀಬಂಧು ಒಕ್ಕೂಟಗಳು ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವ-ಸಹಾಯ ಸಂಘಗಳಾಗಿವೆ. ಕಳೆದ ೧೩ ವರ್ಷಗಳಿಂದ ಮಹಿಳೆಯರ, ಅವರ ಕುಟುಂಬ ಹಾಗೂ ಸಮುದಾಯದ ಅಭಿವೃದ್ಧಿಗಾಗಿ ಮತ್ತು ಸಮುದಾಯದಲ್ಲಿನ ಸಮಸ್ಯೆ ಮತ್ತು ದೌರ್ಜನ್ಯಗಳನ್ನು ಖಂಡಿಸಿ ಶೋಷಿತ, ಬಡ ಬಗ್ಗರ, ದೀನದಲಿತರ, ಮಹಿಳೆಯರ...