ದೊಣಬಘಟ್ಟ, ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಪರಿಶುದ್ದ ಕುಡಿಯುವ ನೀರು ಸರಬರಾಜು ಮಾಡಿ
ಸಚಿವರಿಗೆ ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಮನವಿ ಭದ್ರಾವತಿ ತಾಲೂಕಿನ ಬಿಳಿಕಿ ಗ್ರಾಮದಲ್ಲಿರುವ ಬಿಳಿಕಿ ಕೆರೆ. ಭದ್ರಾವತಿ : ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ದೊಣಬಘಟ್ಟ ಮತ್ತು ಬಿಳಿಕಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಪರಿಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡಲು ಭದ್ರಾ ನದಿಯಿಂದ ನೀರು ಒದಗಿಸಲು ಕ್ರಮ ಕೈಗೊಳ್ಳುವಂತೆ ಜನ್ನಾಪುರ ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧುಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಗಿದೆ. ಈ ಸಂಬಂಧ ಟ್ರಸ್ಟ್ ಛೇರ್‍ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಮನವಿ ಸಲ್ಲಿಸಿದ್ದು, ಕಳೆದ ಸುಮಾರು ೫೦ ವರ್ಷಗಳಿಂದ ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಹೋರಾಟದ ಸ್ಮರಣೆಗಾಗಿ ಗ್ರಾಮೀಣೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ಇದಕ್ಕೆ ಪೂರಕವಾಗಿ ವಿಧಾನಸಭಾ ಕ್ಷೇತ್ರದ ದೊಣಬಘಟ್ಟ ಹಾಗೂ ಬಿಳಿಕಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಪರಿಶುದ್ಧವಾದ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವುದು. ಪ್ರಸ್ತುತ ದೊಣಬಘಟ್ಟ ಮತ್ತು ಬಿಳಿಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...