ಮಾ.೨೪ರಂದು ಮಹಿಳಾ ದಿನಾಚರಣೆ
ಭದ್ರಾವತಿ: ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ಮಾ.೨೪ರ ಮಂಗಳವಾರ ಬೆಳಿಗ್ಗೆ ೧೧.೩೦ಕ್ಕೆ ನಗರದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಹಿಳಾ ದಿನಾಚರಣೆ ಆಯೋಜಿಸಲಾಗಿದೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮಹಿಳಾ ದಿನಾಚರಣೆ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್ ಅಧ್ಯಕ್ಷತೆವಹಿಸಲಿದ್ದಾರೆ. ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಸೇರಿದಂತೆ ನಗರದ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ.ಎನ್ ಹೇಮಂತ್ ಕೋರಿದ್ದಾರೆ.