ಡಾ. ಬಿ.ಆರ್ ಅಂಬೇಡ್ಕರ್ ಚಿಂತನೆಗಳು ಮುಂದಿನ ಪೀಳಿಗೆಗೆ ತಲುಪಲಿ : ಎಂ. ರಾಜೇಂದ್ರ
ಭದ್ರಾವತಿಯಲ್ಲಿ ಬಾಪೂಜಿ ಹರಿಜನ ಸೇವಾ ಸಂಘ ಮತ್ತು ಡಾ ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ನಗರದ ಉಂಬ್ಳೆಬೈಲು ರಸ್ತೆ, ವಿದ್ಯಾಮಂದಿರ ಸಮೀಪದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಕಾರ್ಯಕ್ರಮದ ಭಾಗವಾಗಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಹೋರಾಟದ ಕುರಿತಾದ ಹಾಡುಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಭದ್ರಾವತಿ : ವಿದ್ಯಾರ್ಥಿಗಳು ಅಂಬೇಡ್ಕರ್ ಆಶಯಗಳನ್ನು ಓದಿಗೆ ಮಾತ್ರ ಸೀಮಿತಗೊಳಿಸದೆ ಬದುಕಿಗೆ ಅಳವಡಿಸಿಕೊಳ್ಳಬೇಕು. ಅಲ್ಲದೆ ಅವರ ಬರಹ, ಚಿಂತನೆಗಳು ಮುಂದಿನ ಪೀಳಿಗೆಗೂ ತಲುಪಿಸುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಬಾಪೂಜಿ ಹರಿಜನ ಸೇವಾ ಸಂಘದ ಪ್ರದಾನ ಕಾರ್ಯದರ್ಶಿ ಎಂ. ರಾಜೇಂದ್ರ ಕರೆ ನೀಡಿದರು. ಅವರು ಬಾಪೂಜಿ ಹರಿಜನ ಸೇವಾ ಸಂಘ ಮತ್ತು ಡಾ ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ವತಿಯಿಂದ ನಗರದ ಉಂಬ್ಳೆಬೈಲು ರಸ್ತೆ, ವಿದ್ಯಾಮಂದಿರ ಸಮೀಪದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಕಾರ್ಯಕ್ರಮದ ಭಾಗವಾಗಿ ಏರ್ಪಡಿಸಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ಹೋರಾಟದ ಕುರಿತಾದ ಹಾಡುಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ತಾಲೂಕು ರಾಷ್ಟ್ರೀಯ ಹಬ್ಬ...