ಜೆಡಿಎಸ್‌ನಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಬಿಎಲ್‌ಎ-೨ ಕಾರ್ಯಾಗಾರಕ್ಕೆ ಚಾಲನೆ
ಕರ್ನಾಟಕ ಪ್ರದೇಶ ಜನತಾದಳ(ಜಾತ್ಯತೀತ) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಿಎಲ್‌ಎ-೨ ಕಾರ್ಯಾಗಾರ ನಗರದ ಅಪ್ಪರ್ ಹುತ್ತಾ ಒಕ್ಕಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ಭದ್ರಾವತಿ: ಕರ್ನಾಟಕ ಪ್ರದೇಶ ಜನತಾದಳ(ಜಾತ್ಯತೀತ) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ಬಿಎಲ್‌ಎ-೨ ಕಾರ್ಯಾಗಾರ ನಗರದ ಅಪ್ಪರ್ ಹುತ್ತಾ ಒಕ್ಕಲಿಗರ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ಪಕ್ಷದ ರಾಜ್ಯ ವಕ್ತಾರ ರಾಜುಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗು ಕೋರ್ ಕಮಿಟಿ ಸದಸ್ಯೆ ಶಾರದ ಅಪ್ಪಾಜಿ ಸೇರಿದಂತೆ ಇನ್ನಿತರರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಜುಗೌಡರವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮಾಹಿತಿ ನೀಡಿ ಬೂತ್ ಮಟ್ಟದ ಬಿಎಲ್‌ಎ ಅಧಿಕಾರಿಗಳು ಯಾವ ರೀತಿ ತಮ್ಮ ಕರ್ತವ್ಯ ನಿರ್ವಹಿಸಬೇಕೆಂಬುದನ್ನು ವಿವರಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ರಾಮಕೃಷ್ಣ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಗೀತಾ ಸತೀಶ್, ಯುವ ಘಟಕದ ಜಿಲ್ಲಾಧ್ಯಕ್ಷ ಮಧುಕುಮಾರ್, ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭೆ ಸದಸ್ಯೆ ಮಂಜುಳ ಸುಬ್ಬಣ್ಣ, ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಮಾಜಿ ಸದಸ್ಯರಾದ ಮೋಹನ್ ರಾವ್, ಎಚ್.ಬಿ...