ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಿ, ಕಾರ್ಮಿಕರ ದಿನ ರಾಷ್ಟ್ರೀಯ ಹಬ್ಬವನ್ನಾಗಿಸಿ : ವಿ. ವಿನೋದ್
ಭದ್ರಾವತಿಯಲ್ಲಿ ಶುಕ್ರವಾರ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಮಾಲಾರ್ಪಣೆ ಮಾಡಿ ಮಾತನಾಡಿದರು. ಭದ್ರಾವತಿ: ಪ್ರತಿಯೊಬ್ಬ ಕಾರ್ಮಿಕರಿಗೂ ಗೌರವ ಲಭಿಸಬೇಕು. ಆಳುವ ಸರ್ಕಾರಗಳು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು. ಅಲ್ಲದೆ ಅಂತರಾಷ್ಟ್ರೀಯ ಕಾರ್ಮಿಕರ ದಿನ ಸರ್ಕಾರಿ ಕಾರ್ಯಕ್ರಮವನ್ನಾಗಿಸಬೇಕೆಂದು ಕರ್ನಾಟಕ ದಲಿತ ಸಮನ್ವಯ ಸಮಿತಿ ಹಾಗು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಹೇಳಿದರು. ಅವರು ಶುಕ್ರವಾರ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಸಮಾಜದಲ್ಲಿ ಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದ್ದು, ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರು, ಇತರೆ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ಸಂಘಟಿತ ಹಾಗು ಅಸಂಘಟಿತ ಕಾರ್ಮಿಕರು, ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಮಹಿಳಾ ಕಾರ್ಮಿಕರು, ಕಟ್ಟಡ ಹಾಗು ಇತರೆ ನಿರ್ಮಾಣ ಕಾರ...