ಯಡಿಯೂರಪ್ಪ `ಅಭಿಮಾನೋತ್ಸವ' ಕಾರ್ಯಕ್ರಮ ಪೂರ್ವಭಾವಿ ಸಭೆ
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ : ವಿಜಯೋತ್ಸವ, ಸಂಭ್ರಮಾಚರಣೆ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತ ಪೂರ್ವ ಸಾಧನೆ ಮಾಡಿರುವ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ಬಿಜೆಪಿ ನಗರ ಹಾಗು ಗ್ರಾಮಾಂತರ ಮಂಡಲದಿಂದ ವಿಜಯೋತ್ಸವದೊಂದಿಗೆ ಸಂಭ್ರಮಾಚರಣೆ ನಡೆಸಲಾಯಿತು. ಭದ್ರಾವತಿ : ರೈತ ನಾಯಕ, ಜನ ನಾಯಕ, ಹಿರಿಯ ರಾಜಕೀಯ ಮುತ್ಸದ್ದಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಜೀವನದ ೫೦ ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಮೇ.೯ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ `ಅಭಿಮಾನೋತ್ಸವ' ಕಾರ್ಯಕ್ರಮದ ಪೂರ್ವಭಾವಿ ಸಭೆ ಸೋಮವಾರ ನಗರದ ಬಿಜೆಪಿ ಕಛೇರಿಯಲ್ಲಿ ಆಯೋಜಿಸಲಾಗಿತ್ತು. ವಿಧಾನಪರಿಷತ್ ಸದಸ್ಯ ಡಿ.ಎಸ್ ಅರುಣ್, ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಹಾಗು ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಸ್ ತೀರ್ಥಯ್ಯ ಸಭೆಯ ನೇತೃತ್ವವಹಿಸಿ `ಅಭಿಮಾನೋತ್ಸವ' ಕಾರ್ಯಕ್ರಮದ ಪೂರ್ವಭಾವಿ ಸಿದ್ದತೆಗಳ ಕುರಿತು ಚರ್ಚಿಸಲಾಯಿತು. ಅಲ್ಲದೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ವೀಕ್ಷಣೆ ಮಾಡಲಾಯಿತು. ಬಿಜೆಪಿ ಗೆಲವು : ವಿಜಯೋತ್ಸವ ಪಂಚ ರಾಜ್ಯಗಳ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರಯವರ ನೇತೃತ್ವದಲ್ಲಿ ಬಿಜೆಪಿ ಅಭೂತ ಪೂರ್ವ ಸಾಧನೆ ಮಾಡಿರುವ ಹಿನ್ನಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಸಂಭ್ರಮಾಚರಣೆ ನಡೆಸಿದರು. ...