ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ : ಮೇ.೧೫ರವರೆಗೆ ಪ್ರವೇಶ ವಿಸ್ತರಣೆ
ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಕಡದಕಟ್ಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2026-27 ನೇ ಸಾಲಿನ ಐಟಿಐ ಪ್ರವೇಶ ಪಡೆಯಲು (ಎನ್.ಸಿ.ವಿ.ಟಿ ಯೋಜನೆ ಅಡಿಯಲ್ಲಿ) On line ಮುಖಾಂತರ ಅರ್ಜಿ ಸಲ್ಲಿಸಲು ಮೇ. 15 ರವರೆಗೆ ವಿಸ್ತರಿಸಲಾಗಿದೆ. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಿಗೆ ಪ್ರವೇಶ ಪಡೆಯಲು ಮೇ.೧೫ರವರೆಗೆ ವಿಸ್ತರಿಸಲಾಗಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗು ಅನುತ್ತೀರ್ಣ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪ್ರವೇಶ ಬಯಸುವಂತಹ ವಿದ್ಯಾರ್ಥಿಗಳು Web:www.cite.karnataka.gov.in ವೆಬ್ ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಅಥವಾ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರನ್ನು ಸಂಪರ್ಕಿಸುವುದು. ದೂರವಾಣಿ ಸಂಖ್ಯೆ: 08282-200080, 9980129595, 9880085914 ಕ್ಕೆ ಕರೆ ಮಾಡಬಹುದಾಗಿದೆ.