ಖಾಸಗಿ ಸರ್ವೆಯರ್‌ಗಳಿಂದ ನಿರ್ಲಕ್ಷ್ಯತನ : ರೈತರ ಸಾವಿರಾರು ಅರ್ಜಿಗಳು ಬಾಕಿ
ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರತಿಭಟನಾ ಧರಣಿ ಸತ್ಯಾಗ್ರಹ, ಮನವಿ ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಖಾಸಗಿ ಸರ್ವೆಯರ್‌ಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕೆಲಸಕ್ಕೆ ಹಾಜರಾಗದೆ, ಯಾವುದೇ ಜಮೀನನ್ನು ಸರ್ವೆ ಮಾಡದೆ ಇರುವುದರಿಂದ ಸಾಕಷ್ಟು ತೊಂದರೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಮಂಗಳವಾರ ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನಾ ಧರಣಿ ಸತ್ಯಾಗ್ರಹ ಕೈಗೊಂಡು ಸರ್ಕಾರಕ್ಕೆ ಉಪತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಭದ್ರಾವತಿ: ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಖಾಸಗಿ ಸರ್ವೆಯರ್‌ಗಳು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕೆಲಸಕ್ಕೆ ಹಾಜರಾಗದೆ, ಯಾವುದೇ ಜಮೀನನ್ನು ಸರ್ವೆ ಮಾಡದೆ ಇರುವುದರಿಂದ ಸಾಕಷ್ಟು ತೊಂದರೆ ಎದುರಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಗ್ರಹಿಸಿದರು. ಮಂಗಳವಾರ ತಾಲೂಕು ಕಛೇರಿ ಮುಂಭಾಗ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿ ಸತ್ಯಾಗ್ರಹದ ನೇತೃತ್ವವಹಿಸಿ ಮಾತನಾಡಿದರು. ತಿಂಗಳುಗಟ್ಟಲೆ ಕೆಲಸಕ್ಕೆ ಹಾಜರಾಗದೆ ರೈತರ ಜಮೀನುಗಳನ್ನು ಸರ್ವೆ ಮಾಡದೆ ನಿರ್ಲಕ್ಷ್ಯವಹಿಸಿರುವ ಕಾರಣ ಸರ್ವೆ ಮಾಡಿಕೊಡಲು ಸಲ್ಲಿ...