ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಬಿ.ಕೆ ಸಂಗಮೇಶ್ವರ್
ಭದ್ರಾವತಿ ಬಾರಂದೂರು ಗ್ರಾಮದ ಬಯಲು ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಭಾನುವಾರ ಗುರುತಿನ ಚೀಟಿ ವಿತರಣೆ, ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸ ಪೂರ್ಣಗೊಳಿಸಿ ಉನ್ನತ ಹುದ್ದೆಯಲ್ಲಿರುವವರಿಗೆ ಸನ್ಮಾನ ಹಾಗು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭದ್ರಾವತಿ: ಶ್ರಮ ಜೀವಿಗಳಾದ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ಅವರು ಭಾನುವಾರ ಬಾರಂದೂರು ಗ್ರಾಮದ ಬಯಲು ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಆಯೋಜಿಸಲಾಗಿದ್ದ ಗುರುತಿನ ಚೀಟಿ ವಿತರಣೆ, ಕಟ್ಟಡ ಹಾಗು ಅಸಂಘಟಿತ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸ ಪೂರ್ಣಗೊಳಿಸಿ ಉನ್ನತ ಹುದ್ದೆಯಲ್ಲಿರುವವರಿಗೆ ಸನ್ಮಾನ ಹಾಗು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕರ ಯಾವುದೇ ರೀತಿಯ ಸ...