ಡಯಟ್ ಹಿರಿಯ ಉಪನ್ಯಾಸಕ ಎ.ಕೆ ನಾಗೇಂದ್ರಪ್ಪ ನಿವೃತ್ತಿ
ಶಿಕ್ಷಣ ಇಲಾಖೆ, ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ, ಗೌರವ ಭದ್ರಾವತಿಯಲ್ಲಿ ಸುಮಾರು ೪ ವರ್ಷಗಳ ಕಾಲ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ, ನಂತರ ಶಿವಮೊಗ್ಗ ಡಯಟ್ ಹಿರಿಯ ಉಪನ್ಯಾಸಕರಾಗಿ ಅಧಿಕಾರ ಸ್ವೀಕರಿಸಿ ೩ ದಿನಗಳ ಕರ್ತವ್ಯದೊಂದಿಗೆ ನಿವೃತ್ತಿ ಹೊಂದಿರುವ ಎ.ಕೆ ನಾಗೇಂದ್ರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಭದ್ರಾವತಿ : ಸುಮಾರು ೪ ವರ್ಷಗಳ ಕಾಲ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ, ನಂತರ ಶಿವಮೊಗ್ಗ ಡಯಟ್ ಹಿರಿಯ ಉಪನ್ಯಾಸಕರಾಗಿ ಅಧಿಕಾರ ಸ್ವೀಕರಿಸಿ ೩ ದಿನಗಳ ಕರ್ತವ್ಯದೊಂದಿಗೆ ನಿವೃತ್ತಿ ಹೊಂದಿರುವ ಎ.ಕೆ ನಾಗೇಂದ್ರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಫೆ.೨೮, ೨೦೨೨ರಂದು ಅಧಿಕಾರ ಸ್ವೀಕರಿಸಿದ್ದ ನಾಗೇಂದ್ರಪ್ಪ ಅವರು ಸಾಕಷ್ಟು ಸುಧಾರಣೆಗಳನ್ನು ಕೈಗೊಂಡಿದ್ದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಕಾಯ್ದುಕೊಳ್ಳಲು ಹೆಚ್ಚಿನ ಶ್ರಮವಹಿಸಿದ್ದರು. ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವ ಹಾಗು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಅತ್ಯುತ್ತಮ ಶಿಕ್ಷಕ ವೃಂದವನ್ನು ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಇವರ ಕರ್ತವ್ಯ ನಿರ್ವಹಣೆಗೆ ಹೆಚ್ಚಿನ ಪ್ರಶಂಸೆ ವ್ಯಕ್ತವಾಗಿತ್ತು. ವಯೋ ಸಹಜ ನಿವೃತ್ತಿ ಹೊಂದಿರುವ ಇವ...