ಪತ್ರಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಸಾಮಾಜಿವಾದಿ ನಾಯಕ ಮಂಗೋಟೆ ಮುರಿಗೆಪ್ಪ
೫೦ ಸಾವಿರ ರು. ದೇಣಿಗೆ ನೀಡಿ ಸ್ಮರಿಸಿದ ಪುತ್ರ, ನ್ಯಾಯವಾದಿ ಮಂಗೋಟೆ ರುದ್ರೇಶ್ ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಂಗೋಟೆ ಮುರಿಗೆಪ್ಪ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ, ನ್ಯಾಯವಾದಿ ಮಂಗೋಟೆ ರುದ್ರೇಶ್ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಅವರಿಗೆ ೫೦ ಸಾವಿರ ರು. ದೇಣಿಗೆ ಚೆಕ್ ಹಸ್ತಾಂತರಿಸಿದರು. ಭದ್ರಾವತಿ: ಸಾಮಾಜವಾದಿ ನಾಯಕರು, ಹಿರಿಯ ಚಿಂತಕರು, ನ್ಯಾಯವಾದಿಗಳಾದ ದಿವಂಗತ ಮಂಗೋಟೆ ಮುರಿಗೆಪ್ಪನವರ ಆಶಯದಂತೆ ಪತ್ರಕರ್ತರ ಕ್ಷೇಮ ನಿಧಿಗೆ ೫೦ ಸಾವಿರ ರು. ದೇಣಿಗೆ ನೀಡುತ್ತಿದ್ದು, ಸದ್ಬಳಕೆಕೊಳ್ಳುವಂತೆ ಮಂಗೋಟೆ ಮುರಿಗೆಪ್ಪ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ, ನ್ಯಾಯವಾದಿ ಮಂಗೋಟೆ ರುದ್ರೇಶ್ ಮನವಿ ಮಾಡಿದರು. ಅವರು ಹಳೇನಗರದ ಪತ್ರಿಕಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಅವರಿಗೆ ಚೆಕ್ ಹಸ್ತಾಂತರಿಸಿ ಮಾತನಾಡಿದರು. ನಮ್ಮ ತಂದೆಯವರಾದ ಮಂಗೋಟೆ ಮುರಿಗೆಪ್ಪ ಅವರು ಪತ್ರಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಪತ್ರಕರ್ತರ ನೋವು-ನಲಿವುಗಳಿಗೆ ಸ್ಪಂದಿಸುತ್ತಿದ್ದರು. ಅವರ ನಿಧನದ ನಂತರ ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಳ್ಳಲು ಟ್ರಸ್ಟ್ ಸ್...