ಜಾಗೃತಿ ಮ್ಯಾರಥಾನ್ ಓಟ : ತನುಶ್ರೀ ಮೊದಲ ಸ್ಥಾನ
ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಗುರುವಾರ ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ೫ ಕಿಲೋಮೀಟರ್ ಜಾಗೃತಿ ಮ್ಯಾರಥಾನ್ ಓಟದಲ್ಲಿ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಡಣಾಯಕಪುರ ನಿವಾಸಿ ತನುಶ್ರೀ ಮೊದಲನೇ ಸ್ಥಾನದೊಂದಿಗೆ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ. ಭದ್ರಾವತಿ: ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಗುರುವಾರ ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ೫ ಕಿಲೋಮೀಟರ್ ಜಾಗೃತಿ ಮ್ಯಾರಥಾನ್ ಓಟದಲ್ಲಿ ತಾಲೂಕಿನ ಹೊಳೆಹೊನ್ನೂರು ಡಣಾಯಕಪುರ ನಿವಾಸಿ ತನುಶ್ರೀ ಮೊದಲನೇ ಸ್ಥಾನದೊಂದಿಗೆ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ. ಶಿವಮೊಗ್ಗ ಡಿಎಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಹೇಮಂತ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ ಕಾರಿಯಪ್ಪ, ಕೆಎಸ್‌ಆರ್‌ಪಿ ಕಮಾಂಡೆಂಟ್ ಯುವ ಕುಮಾರ್ ಸೇರಿದಂತೆ ಇನ್ನಿತರರು ಬಹುಮಾನ ವಿತರಿಸಿ ಅಭಿನಂದಿಸಿದರು. ತನುಶ್ರೀ ೮ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ನಗರದ ಸಂಚಾರಿ ಪೊಲೀಸ್ ಠಾಣೆಯ ಹೆಡ್‌ಕಾನ್...