ನಾಡಪ್ರಭು ಕೆಂಪೇಗೌಡರಿಂದ ಬೆಂಗಳೂರು ಪ್ರಮುಖ ನಗರವಾಗಿ ಗುರುತಿಸಿಕೊಂಡಿದೆ : ಬಲ್ಕೀಶ್ ಬಾನು
ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಆಡಳಿತ ತಾಲೂಕು ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಸರ್ಕಾರದ ವಿವಿಧ ಸರ್ಕಾರಿ ಇಲಾಖೆಗಳು ಹಾಗು ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಉದ್ಘಾಟಿಸಿದರು. ಭದ್ರಾವತಿ : ಪ್ರಸ್ತುತ ಬೆಂಗಳೂರು ವಿಶ್ವದ ಪ್ರಮುಖ ನಗರಗಳಲ್ಲಿ ಒಂದಾಗಿ ಗುರುತಿಸಿಕೊಳ್ಳಲು ಅಂದು ನಾಡಪ್ರಭು ಕೆಂಪೇಗೌಡರವರು ರೂಪಿಸಿದ ಯೋಜನೆಗಳು ಕಾರಣಗಳಾಗಿವೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಹೇಳಿದರು. ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ತಾಲೂಕು ಆಡಳಿತ ತಾಲೂಕು ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಸರ್ಕಾರದ ವಿವಿಧ ಸರ್ಕಾರಿ ಇಲಾಖೆಗಳು ಹಾಗು ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯುಳ್ಳ ಸಮರ್ಥ ಆಡಳಿತಗಾರರಾಗಿದ್ದರು. ನಗರ ಯೋಜನೆ, ನೀರಾವರಿ, ಕೃಷಿಗೆ ಸಂಬಂಧಿಸಿ...