೨-೩ ದಿನಗಳಿಂದ ವ್ಯಾಪಕ ಮಳೆ : ರೈತರ ಮೊಗದಲ್ಲಿ ಮಂದಹಾಸ
ಭದ್ರಾವತಿ ವಿಐಎಸ್‌ಎಲ್-ಎಂಪಿಎಂ ರಸ್ತೆಯ ಜೆಟಿಎಸ್ ಶಾಲೆ ಬಳಿ ಬೃಹತ್ ಮರದ ರೆಂಬೆ-ಕೊಂಬೆ ಮುರಿದು ಬಿದ್ದು, ವಿದ್ಯುತ್ ಕಂಬ ಹಾನಿಗೊಳಗಿದ್ದು, ಮೆಸ್ಕಾಂ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆ ಕೈಗೊಂಡು ಹೊಸದಾಗಿ ವಿದ್ಯುತ್ ಕಂಬ ಅಳವಡಿಸಿದರು. -ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ರೈತರ ಆತಂಕ ದೂರ. - ಈಗಾಗಲೇ ಭದ್ರಾ ಎಡ-ಬಲ ದಂಡೆ ನಾಲೆಗಳಲ್ಲಿ ನೀರು ಸ್ಥಗಿತ. - ಜಲಾಶಯದ ವ್ಯಾಪ್ತಿಯಲ್ಲಿ ವ್ಯಾಪಕ ಮಳೆ. - ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳ ಭದ್ರಾವತಿ: ತಾಲೂಕಿನಲ್ಲಿ ಕಳೆದ ೨-೩ ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಇದುವರೆಗೂ ಯಾವುದೇ ಹಾನಿ ಅಥವಾ ಸಮಸ್ಯೆಗಳು ಎದುರಾಗಿಲ್ಲ. ಮಳೆಯಾಗುತ್ತಿರುವುದರಿಂದ ಬರಗಾಲ ಎದುರಾಗುವ ಭೀತಿಯಲ್ಲಿದ್ದ ರೈತರ ಮೊಗದಲ್ಲಿ ಸ್ವಲ್ಪಮಟ್ಟಿಗೆ ಮಂದಹಾಸ ಮೂಡಿದಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ಭೀತಿ ದೂರವಾಗಲಿದೆ. ಈ ಬಾರಿ ಮುಂಗಾರು ಕೈಕೊಟ್ಟ ಹಿನ್ನಲೆಯಲ್ಲಿ ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದಿದ್ದು, ಎಡ ಮತ್ತು ಬಲ ದಂಡೆ ನಾಲೆಗಳಲ್ಲಿ ನೀರು ಸ್ಥಗಿತಗೊಳಿಸಲಾಗಿದೆ. ಜಲಾಶಯದ ನೀರು ಕೇವಲ ಕುಡಿಯುವ ಬಳಕೆಗೆ ಮಾತ್ರ ಸೀಮಿತಗೊಳಿಸಲಾಗಿದೆ. ರೈತರು ಬೆಳೆ ಬೆಳೆಯದಂತೆ ಸೂಚಿಸಲಾಗಿದೆ. ಈ ನಡುವೆ ಇದೀಗ ಮಳೆಯಾಗುತ್ತಿದ್ದು, ಸ್ವಲ್ಪಮಟ್ಟಿಗೆ ಸಮಾಧಾನ ತಂದ...