ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರ, ಶ್ರೀ ಶಿವ ಸಾಯಿ ಕೃಪಾ ಧಾಮದಲ್ಲಿ ಗುರು ಪೂರ್ಣಿಮೆ
ಭದ್ರಾವತಿ ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಮತ್ತು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಗುರು ಪೂರ್ಣಿಮೆ ವಿಶೇಷ ಧಾರ್ಮಿಕ ಆಚರಣೆಗಳೊಂದಿಗೆ ಅದ್ದೂರಿಯಾಗಿ ಜರುಗಿತು. ಭದ್ರಾವತಿ : ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸೇವಾ ಸಮಿತಿ, ಪ್ರಶಾಂತಿ ಸೇವಾ ಟ್ರಸ್ಟ್ ಮತ್ತು ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಗುರು ಪೂರ್ಣಿಮೆ ವಿಶೇಷ ಧಾರ್ಮಿಕ ಆಚರಣೆಗಳೊಂದಿಗೆ ಅದ್ದೂರಿಯಾಗಿ ಜರುಗಿತು. ಶ್ರೀ ಸತ್ಯ ಸಾಯಿ ಸೇವಾ ಕ್ಷೇತ್ರದಲ್ಲಿ ಬೆಳಿಗ್ಗೆ ೫ ಗಂಟೆಯಿಂದ ಓಂಕಾರ, ಜ್ಯೋತಿರ್ಧ್ಯಾನ, ಸುಪ್ರಭಾತ, ನಗರ ಸಂಕೀರ್ತನೆ, ೯.೩೦ರಿಂದ ಬಾಲವಿಕಾಸ ಮಕ್ಕಳಿಂದ ಗುರುಗಳಿಗೆ ಪಾದಪೂಜೆ ನೆರವೇರಿತು. ನಂತರ ಶ್ರೀ ಸಾಯಿ ಸತ್ಯನಾರಾಯಣ ಪೂಜೆ ಮತ್ತು ಶ್ರೀ ಸಾಯಿ ಸಹಸ್ರನಾಮ ಅರ್ಚನೆ ಹಾಗು ಮಧ್ಯಾಹ್ನ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಜರುಗಿತು. ಸಂಜೆ ವೇದಪಠಣ, ಶ್ರೀ ಸಾಯಿ ಪಾದುಕ ಅಷ್ಟೋತ್ತರ, ಭಜನೆ ಮತ್ತು ಚಿಂತನ, ಮಂಗಳಾರತಿ ಹಾಗು ಪ್ರದಾದ ವಿನಿಯೋಗ ಸೇರಿದಂತೆ ಸೇರಿದಂತೆ ಧಾರ್ಮಿಕ ಆಚರಣೆಗಳು ಜರುಗಿದವು. ಶ್ರೀ ಶಿವ ಸಾಯಿ ಕೃಪಾ ಧಾಮದಲ್ಲಿ ಬೆಳಿಗ್ಗೆ ೭ ಗಂಟೆಯಿಂದ ವಿಶೇಷ ಆಲಂಕಾರದೊಂದಿಗೆ ಶಿರಡಿ ಸಾಯಿ ಬಾಬಾರವರ ...