ಕಾರ್ಯಕ್ರಮದ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ : ಪ್ರಕರಣ ದಾಖಲು
ಗಾಯಗೊಂಡಿರುವ ಪೊಲೀಸ್ ಉಮೇಶ್, ಸುಹಾಸ್ ಗೌಡ : ಓರ್ವನ ಬಂಧನ ಹಲ್ಲೆಗೊಳಗಾಗಿರುವ ಸುಹಾಸ್ ಗೌಡ ಭದ್ರಾವತಿ: ನಗರದ ಜನ್ನಾಪುರದಲ್ಲಿ ಕಾರ್ಯಕ್ರಮ ನಡೆಯುವ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಕೆಲವರಿಗೆ ತೀವ್ರ ಗಾಯಗಳಾಗಿ ಆರೋಪ-ಪ್ರತ್ಯಾರೋಪ ದೂರುಗಳು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಸ್ನೇಹಿಜೀವಿ ಬಳಗದ ಪೊಲೀಸ್ ಉಮೇಶ್ ಹಾಗು ಅವರ ಅಣ್ಣ ದಿವಂಗತ ಸತೀಶ್ ಗೌಡರವರ ಪುತ್ರ ಸುಹಾಸ್ ಗೌಡರವರು ಹಲ್ಲೆಗೊಳಗಾಗಿದ್ದಾರೆಂದು ತಿಳಿದು ಬಂದಿದೆ. ಜನ್ನಾಪುರದ ಮಲ್ಲೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ನಂತರ ವಿಕೋಪಕ್ಕೆ ತಿರುಗಿದೆ ಎನ್ನಲಾಗಿದೆ. ಈ ನಡುವೆ ಘಟನೆಗೆ ಸಂಬಂಧಿಸಿದಂತೆ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹಲ್ಲೆಗೊಳಗಾಗಿರುವ ಪೊಲೀಸ್ ಉಮೇಶ್ ನ್ಯೂಟೌನ್ ಪೊಲೀಸ್ ಠಾಣೆ ಬಳಿ ಮಾತನಾಡಿ, ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡುವವರಿಗೆ ಬೆಲೆ ಇಲ್ಲದಾಗಿದೆ. ದೌರ್ಜನ್ಯ ದಬ್ಬಾಳಿಕೆ ಹೆಚ್ಚಾಗಿದ್ದು, ಪೊಲೀಸರು ಸೂಕ್ತ ತನಿಖೆ ಕೈಗೊಂಡು ನನ್ನ ಮೇಲೆ ಹಾಗು ನನ್ನ ಸಹೋದರನ ಮಗನ ಮೇಲೆ ಹಲ್ಲೆ ನಡೆಸಿರುವವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕುಟುಂಬ ಸಮೇತ ಸಾಮೂ...