ಯುವ ಸಮುದಾಯ ಮುಂದಿನ ಭವಿಷ್ಯಕ್ಕೆ ಜನಪದ ಕಲೆಗಳನ್ನು ಕೊಂಡೊಯ್ಯುವ ಜವಾಬ್ದಾರಿ ಹೊಂದಲಿ : ಎಚ್. ತಿಮ್ಮಪ್ಪ
ಭದ್ರಾವತಿ ತಾಲೂಕಿನ ಹಳ್ಳಿಕೆರೆ ಗ್ರಾಮದ ಸಂತ ಡೋಮಿನಿಕ್ ಶಾಲೆಯ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ವಿಶೇಷ ಘಟಕ ಧನ ಸಹಾಯ ಯೋಜನೆಯಡಿಯಲ್ಲಿ ನಗರದ ಜನ್ನಾಪುರ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದಿಂದ ಆಯೋಜಿಸಲಾಗಿದ್ದ ``ಜಾನಪದ ಕಲರವ'' ರಘುಕುಮಾರ್ ಮತ್ತು ತಂಡ, ಎಮ್ಮೆಹಟ್ಟಿ ಇವರಿಂದ ಡೊಳ್ಳು ಕುಣಿತ ಪ್ರದರ್ಶನ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್. ತಿಮ್ಮಪ್ಪ ಉದ್ಘಾಟಿಸಿದರು. ಭದ್ರಾವತಿ : ಪ್ರಸ್ತುತ ವಿದ್ಯಾರ್ಥಿಗಳಿಗೆ ಜನಪದ ಕಲೆಗಳ ಅರಿವು ಅಗತ್ಯವಾಗಿದ್ದು, ಮುಂದಿನ ಭವಿಷ್ಯಕ್ಕೆ ಜನಪದ ಕಲೆಗಳನ್ನು ಕೊಂಡೊಯ್ಯುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಚ್. ತಿಮ್ಮಪ್ಪ ಹೇಳಿದರು. ಅವರು ತಾಲೂಕಿನ ಹಳ್ಳಿಕೆರೆ ಗ್ರಾಮದ ಸಂತ ಡೋಮಿನಿಕ್ ಶಾಲೆಯ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಇವರ ವಿಶೇಷ ಘಟಕ ಧನ ಸಹಾಯ ಯೋಜನೆಯಡಿಯಲ್ಲಿ ನಗರದ ಜನ್ನಾಪುರ ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾಸಂಘದಿಂದ ಆಯೋಜಿಸಲಾಗಿದ್ದ ``ಜಾನಪದ ಕಲರವ'' ರಘುಕುಮಾರ್ ಮತ್ತು ತಂಡ, ಎಮ್ಮೆಹಟ್ಟಿ ಇವರಿಂದ ಡೊಳ್ಳು ಕುಣಿತ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು. ಇಂದಿನ ದಿನಗಳಲ್ಲಿ ಜನಪದ ಕಲೆಗಳು ಕಣ್ಮರೆಯಾಗುತ್ತಿದ್ದು, ಯುವ ಸಮುದಾಯ...