ದುಶ್ಚಟಗಳಿಗೆ ಬಲಿಯಾಗದೆ ವ್ಯಸನ ಮುಕ್ತ ಕ್ಷೇತ್ರವನ್ನಾಗಿಸಲು ಸಂಕಲ್ಪ ಕೈಗೊಳ್ಳಿ : ಪ್ರದೀಪ್ ದೇವಗಿರಿ
ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿಯಿಂದ ಶನಿವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ೮೦ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ತಹಸೀಲ್ದಾರ್ ಪ್ರದೀಪ್ ದೇವಗಿರಿ ಧ್ವಜಾರೋಹಣ ನೆರವೇರಿಸಿ, ಶಾಸಕ ಬಿ.ಕೆ ಸಂಗಮೇಶ್ವರ್ ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಭದ್ರಾವತಿ: ದೇಶದ ೮೦ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪ್ರಸ್ತುತ ನಾವೆಲ್ಲರೂ ದುಶ್ಚಟಗಳಿಂದ ಮುಕ್ತರಾಗಿ ಬದುಕುತ್ತೇವೆಂಬ ದೃಢ ಸಂಕಲ್ಪ ಕೈಗೊಳ್ಳಬೇಕಾಗಿದೆ ಎಂದು ತಹಸೀಲ್ದಾರ್ ಪ್ರದೀಪ್ ದೇವಗಿರಿ ತಿಳಿಸಿದರು. ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿಯಿಂದ ಶನಿವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿದ್ದ ೮೦ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಆನೇಕ ಮಹನೀಯರ ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯಪಡೆದುಕೊಳ್ಳಲು ಸಾಧ್ಯವಾಹಿತು. ಸ್ವಾತಂತ್ರ್ಯದ ಮಹತ್ವ ನಾವೆಲ್ಲರೂ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಪ್ರಸ್ತುತ ದೇಶವು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಯುವ ಸಮುದಾಯದವರು ದಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಸೇವನೆ, ಮದ್ಯ ವ್ಯವಸನ ಮುಕ್ತರನ್ನಾಗಿಸುವ ಸಂಕಲ್ಪ ಕೈಗೊಳ್ಳಬೇಕಾಗಿದೆ ಎಂದರು. ಅಭ...