ಜಾತಿನಿಂದನೆ ಪ್ರಕರಣಗಳನ್ನು ಕೂಲಂಕುಷವಾರಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ
ಕುಂದುಕೊರತೆ ಸಭೆಯಲ್ಲಿ ಪರಿಶಿಷ್ಟ ಜಾತಿ/ಪಂಗಡದ ಮುಖಂಡರು ಆಗ್ರಹ ಭದ್ರಾವತಿ ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಪೊಲೀಸ್ ಉಪವಿಭಾಗದ ವತಿಯಿಂದ ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆ ಸಭೆ ಆಯೋಜಿಸಲಾಗಿತ್ತು. ಭದ್ರಾವತಿ: ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಜಾತಿನಿಂದನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸರು ಜಾತಿನಿಂದನೆ ಪ್ರಕರಣಗಳನ್ನು ಕೂಲಂಕುಷವಾರಿ ಪರಿಶೀಲನೆ ನಡೆಸಿ ಸಂತ್ರಸ್ಥರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಪರಿಶಿಷ್ಟ ಜಾತಿ/ಪಂಗಡದ ಮುಖಂಡರು ಆಗ್ರಹಿಸಿದರು. ಹಳೇನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಪೊಲೀಸ್ ಉಪವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ/ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು, ಜಾತಿನಿಂದನೆ ಪ್ರಕರಣಗಳನ್ನು ಸರಿಯಾಗಿ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಪರಿಶಿಷ್ಟ ಜಾತಿ/ಪಂಗಡದವರು ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯದಂತೆ ಎಚ್ಚರವಹಿಸಬೇಕು. ರಂಗಪ್ಪ ವೃತ್ತ ಸಮೀಪ ಪೌರಕಾರ್ಮಿಕ ಕುಟುಂಬದವರು ಹೆಚ್ಚಾಗಿ ವಾಸಿಸುತ್ತಿರುವ ಜೈಭೀಮ್ ನಗರದ ಸೂಕ್ಷ್ಮ ಸ್ಥಳಗಳಲ್ಲಿ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸುವುದು. ಕುಂದು ಕೊರತೆ ಸಭೆಯನ್ನು ಹೊಳೆಹೊನ್ನೂರು ಭಾಗದಲ್ಲೂ ನಡೆ...