ಮಾಜಿ ಶಾಸಕ ಎಂ.ಜೆ ಅಪ್ಪಾಜಿ ೬ನೇ ವರ್ಷದ ಪುಣ್ಯಸ್ಮರಣೆ : ರಕ್ತದಾನ, ನೇತ್ರದಾನ
ಭದ್ರಾವತಿ ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಬುಧವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ೬ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಮುಂಭಾಗದ ಪೆಟ್ರೋಲ್ ಬಂಕ್ ಬಳಿ ಬುಧವಾರ ಮಾಜಿ ಶಾಸಕ ಎಂ.ಜೆ ಅಪ್ಪಾಜಿಯವರ ೬ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು, ಅಭಿಮಾನಿಗಳು ಅಪ್ಪಾಜಿಯವರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು. ಪುಣ್ಯಸ್ಮರಣೆ ಅಂಗವಾಗಿ ರಕ್ತದಾನ, ನೇತ್ರದಾನ ಶಿಬಿರ ಆಯೋಜಿಸಲಾಗಿತ್ತು. ಮಧ್ಯಾಹ್ನ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು. ಪಕ್ಷದ ತಾಲೂಕು ಅಧ್ಯಕ್ಷ ಆರ್. ಕುರುಣಾಮೂರ್ತಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಮುಖಂಡರಾದ ಟಿ. ಚಂದ್ರೇಗೌಡ, ಶಿವಾಜಿರಾವ್ ಗಾಯಕ್ವಾಡ್, ರಘುನಾಥರಾವ್ ಗಿಡ್ಡೆ, ಕರಿಯಪ್ಪ, ಚನ್ನಪ್ಪ, ಹುಚ್ಚಪ್ಪ, ಎನ್. ಕೃಷ್ಣಪ್ಪ, ಎಂ.ಎ ಅಜಿತ್, ಅರುಣ್‌ಕುಮಾರ್, ಮಧುಸೂದನ್, ಧರ್ಮರಾಜ್, ವಿಶಾಲಾಕ್ಷ್ಮಿ,...